ವಿಶ್ವದಾಖಲೆ ಬರೆದ ಜೂಲನ್ ಗೋಸ್ವಾಮಿ, ದಾಖಲೆಯ ಹೆಜ್ಜೆಯಿಟ್ಟ ಮಿಥಾಲಿ ರಾಜ್

ನ್ಯೂಜಿಲೆಂಡ್‌ನಲ್ಲಿ ನಡೆಯುತ್ತಿರುವ ಐಸಿಸಿ ಮಹಿಳಾ ವಿಶ್ವಕಪ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ 155 ರನ್‌ಗಳ ಅಮೋಘ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಭಾರತದ ಹಿರಿಯ ಬೌಲರ್ ಜೂಲನ್ ಗೋಸ್ವಾಮಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.
ಜೂಲನ್ ಗೋಸ್ವಾಮಿ ಈ ಪಂದ್ಯದಲ್ಲಿ ಅನಿಸಾ ಮೊಹಮ್ಮದ್ ವಿಕೆಟ್ ಪಡೆಯುವ ಮೂಲಕ ವಿಶ್ವಕಪ್‌ನಲ್ಲಿ 40ನೇ ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಇದರೊಂದಿಗೆ ಐಸಿಸಿ ಮಹಿಳಾ ವಿಶ್ವಕಪ್ ಇತಿಹಾಸದಲ್ಲಿ ಜೂಲನ್ ಗೋಸ್ವಾಮಿ ಗರಿಷ್ಠ ವಿಕೆಟ್ ಪಡೆದ ಬೌಲರ್ ಎಂಬ ಸಾಧನೆ ಮಾಡಿದ್ದಾರೆ.
ಪಾಕಿಸ್ತಾನ ವಿರುದ್ಧದ ಪಂದ್ಯದ ಬಳಿಕ ಜೂಲನ್‌ಗೆ ಈ ಸಾಧನೆ ಮಾಡಲು ಕೇವಲ ಎರಡು ವಿಕೆಟ್‌ಗಳ ಅವಶ್ಯಕತೆಯಿತ್ತು. ಆದ್ರೆ ಕಳೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಜೂಲನ್ ಒಂದು ವಿಕೆಟ್ ಪಡೆಯುವ ಮೂಲಕ ಹಿಂದಿನ ದಾಖಲೆಯನ್ನ ಸರಿಗಟ್ಟಿದ್ದರು. ಆದ್ರೀಗ ವಿಂಡೀಸ್ ವಿರುದ್ಧ ಒಂದು ವಿಕೆಟ್ ಪಡೆದು ಆಸ್ಟ್ರೇಲಿಯಾದ ಲಿನ್ ಫುಲ್‌ಸ್ಟನ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನ ಮುರಿದಿದ್ದಾರೆ.
ಐಸಿಸಿ ಮಹಿಳಾ ವಿಶ್ವಕಪ್‌ನಲ್ಲಿ 1982ರಿಂದ 1988ರ ಅವಧಿಯಲ್ಲಿ ಆಸ್ಟ್ರೇಲಿಯಾದ ಲಿನ್ ಫುಲ್‌ಸ್ಟನ್ 39 ವಿಕೆಟ್ ಪಡೆದು ದಾಖಲೆ ಬರೆದಿದ್ದರು. ಈ ದಾಖಲೆಯನ್ನು ಈವರೆಗೂ ಯಾರಿಂದಲೂ ಮುರಿಯಲು ಸಾಧ್ಯವಾಗಿರಲಿಲ್ಲ. ಆದ್ರೀಗ ಭಾರತದ ಅನುಭವಿ ವೇಗಿ ಜೂಲನ್ ಗೋಸ್ವಾಮಿ ಈ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಗಿದ್ದಾರೆ.
39 ವರ್ಷದ ಜೂಲನ್ ಗೋಸ್ವಾಮಿ ಏಕದಿಕ ಕ್ರಿಕೆಟ್ ಫಾರ್ಮೆಟ್‌ನಲ್ಲಿ ಒಟ್ಟು 249 ವಿಕೆಟ್‌ಗಳನ್ನ ಕಬಳಿಸಿದ ಸಾಧನೆ ಮಾಡಿದ್ದಾರೆ. 198 ಪಂದ್ಯಗಳನ್ನ ಆಡಿರುವ ಗೋಸ್ವಾಮಿ ಏಕದಿನ ಕ್ರಿಕೆಟ್‌ನಲ್ಲಿ 250 ವಿಕೆಟ್‌ಗಳ ಮೈಲುಗಲ್ಲು ತಲುಪಲು ಇನ್ನು 1 ವಿಕೆಟ್‌ಗಳಷ್ಟೇ ಬಾಕಿ ಉಳಿದಿದೆ.
ಮಿಥಾಲಿ ರಾಜ್ ವಿಶ್ವ ದಾಖಲೆ
ಟೀಂ ಇಂಡಿಯಾ ಮಹಿಳಾ ತಂಡದ ನಾಯಕಿ ಮಿಥಾಲಿ ರಾಜ್ ಕೂಡ ದಾಖಲೆಯ ಹೆಜ್ಜೆಯಿಟ್ಟಿದ್ದಾರೆ. ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಮುನ್ನಡೆಸಿದ ವಿಶ್ವ ದಾಖಲೆಯನ್ನು ಮಿಥಾಲಿ ರಾಜ್ ಹೊಂದಿದ್ದಾರೆ. ಮಿಥಾಲಿ ವಿಶ್ವಕಪ್‌ನಲ್ಲಿ 24 ಪಂದ್ಯಗಳಿಗೆ ತಂಡದ ನಾಯಕತ್ವ ವಹಿಸಿ ದಾಖಲೆ ಬರೆದಿದ್ದಾರೆ. ಈ ಮೂಲಕ ಈ ಹಿಂದೆ ಆಸ್ಟ್ರೇಲಿಯಾವನ್ನ 23 ಪಂದ್ಯಗಳಲ್ಲಿ ಮುನ್ನಡೆಸಿದ್ದ ಆಸ್ಟ್ರೇಲಿಯದ ನಾಯಕಿ ಬೆಲಿಂಡಾ ಕ್ಲಾರ್ಕ್ ಹೆಸರಿನಲ್ಲಿದ್ದ ದಾಖಲೆಯನ್ನು ಹಿಂದಿಕ್ಕಿದ್ದಾರೆ.
ನ್ಯೂಜಿಲೆಂಡ್ ನಾಯಕಿ ಸುಸಾನ್ ಗಾಟ್‌ಮನ್ 19 ಪಂದ್ಯಗಳೊಂದಿಗೆ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 39ರ ಹರೆಯದ ಮಿಥಾಲಿ ರಾಜ್ ವಿಶ್ವಕಪ್ ಬಳಿಕ ಕ್ರಿಕೆಟ್‌ನಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications