ಐಸಿಸಿ ಮಹಿಳಾ ವಿಶ್ವಕಪ್ 2022 : ಸೆಮಿಫೈನಲ್ ಪ್ರವೇಶಿಸಿದ ದಕ್ಷಿಣ ಆಫ್ರಿಕಾ ವನಿತೆಯರು

ನ್ಯೂಜಿಲೆಂಡ್‌ನಲ್ಲಿ ನಡೆಯುತ್ತಿರುವ ಐಸಿಸಿ ಮಹಿಳಾ ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ವನಿತೆಯರು ಸೆಮಿಫೈನಲ್ ಪ್ರವೇಶಿಸಿದ ಎರಡನೇ ತಂಡವಾಗಿ ಹೊರಹೊಮ್ಮಿದ್ದಾರೆ.
ಗುರುವಾರ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯವು ಮಳೆಯಿಂದಾಗಿ ಯಾವುದೇ ಫಲಿತಾಂಶವಿಲ್ಲದೆ ಕೊನೆಗೊಂಡಿತು. ವೆಲ್ಲಿಂಗ್ಟನ್‌ನ ಬೇಸಿನ್ ರಿಸರ್ವ್‌ನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 10.5 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 61 ರನ್ ಕಲೆಹಾಕಿತು. ಈ ವೇಳೆ ಸುರಿದ ಭಾರೀ ಮಳೆಯಿಂದಾಗಿ ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿತು. ಉಭಯ ತಂಡಗಳು ಸಮಾನ ಅಂಕಗಳನ್ನು ಪಡೆದವು.
ದಕ್ಷಿಣ ಆಫ್ರಿಕಾ 9 ಪಾಯಿಂಟ್ಸ್ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ ಎರಡನೇ ಸ್ಥಾನ ಅಲಂಕರಿಸಿದ್ದು, ಸೋಲನ್ನೇ ಕಾಣದ ಆಸ್ಟ್ರೇಲಿಯಾ ವನಿತೆಯರು 12 ಪಾಯಿಂಟ್ಸ್‌ನೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.
ಈಗಾಗಲೇ ಎರಡು ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆದಿದ್ದು, ಇನ್ನುಳಿದ ಎರಡು ತಂಡಗಳು ಯಾವುವು ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಸೆಮಿಫೈನಲ್ ಪ್ರವೇಶಿಸಲು ಭಾರತ, ವೆಸ್ಟ್ ಇಂಡೀಸ್, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಸ್ಪರ್ಧೆಗಿಳಿದಿವೆ. ನ್ಯೂಜಿಲೆಂಡ್ ಕ್ವಾಲಿಫೈ್ ಆಗಲು ಬಹಳ ಹತ್ತಿರದಲ್ಲಿದ್ದು, ನೆಟ್ ರನ್ ರೇಟ್ ಪ್ರಮುಖ ಪಾತ್ರವಹಿಸಲಿದೆ.
50-ಓವರ್‌ಗಳ ಪಂದ್ಯಾವಳಿಯು ರೌಂಡ್-ರಾಬಿನ್ ಹಂತದಲ್ಲಿ ಎಂಟು ತಂಡಗಳನ್ನು ಒಳಗೊಂಡಿರುತ್ತದೆ ಮತ್ತು ಅಗ್ರ ನಾಲ್ಕು ತಂಡಗಳು ಸೆಮಿಸ್‌ಗೆ ಪ್ರವೇಶಿಸಲಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications