ICC Women's World Cup Final: ಪ್ರಶಸ್ತಿ ಗೆಲ್ಲಲು ದಕ್ಷಿಣ ಆಫ್ರಿಕಾಕ್ಕೆ 299 ರನ್ ಗುರಿ ನೀಡಿದ ಭಾರತ
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಫೈನಲ್ ಪಂದ್ಯ ಮುಂಬೈನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿದೆ. ಈ ವೇಳೆ ಟೀಮ್ ಇಂಡಿಯಾದ ಆರಂಭಿಕರಾದ ಶೆಫಾಲಿ ವಾರ್ಮಾ ಹಾಗೂ ಸ್ಮೃತಿ ಮಂಧಾನ ಜೋಡಿ ಉತ್ತಮ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ ಪವರ್ ಪ್ಲೇನಲ್ಲಿ ಉತ್ತಮ ಆರಂಭವನ್ನು ನೀಡಿತು. ಮೊದಲ 10 ಓವರ್‌ಗಳಲ್ಲಿ ಭಾರತದ ಆರಂಭಿಕರು ವಿಕೆಟ್ ನಷ್ಟವಿಲ್ಲದೆ 64 ರನ್ ಸೇರಿಸಿತು.
ಭಾರತದ ಸ್ಟಾರ್ ಆರಂಭಿಕ ಆಟಗಾರ್ತಿಯರು ಭರ್ಜರಿ ಆರಂಭವನ್ನು ನೀಡಿದರು. ಭಾರತದ ಆರಂಭಿಕ ಜೋಡಿ 17.4 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 104 ರನ್ ಸೇರಿಸಿತು. ಉಪನಾಯಕಿ ಸ್ಮೃತಿ ಮಂಧಾನ ಅವರು 58 ಎಸೆತಗಳಲ್ಲಿ 8 ಬೌಂಡರಿ ನೆರವಿನಿಂದ 45 ರನ್ ಸಿಡಿಸಿ ಔಟ್ ಆದರು.

ಪ್ರತಿಕಾ ರಾವಲ್ ಅವರು ಗಾಯಕ್ಕೆ ತುತ್ತಾಗಿದ್ದರಿಂದ ಆಡುವ ಅವಕಾಶವನ್ನು ಪಡೆದ ಶೆಫಾಲಿ ವರ್ಮಾ ಅವರು ಸೊಗಸಾದ ಆಟವನ್ನು ಆಡಿದರು. ಇವರು ಒತ್ತಡವನ್ನು ಮೆಟ್ಟಿನಿಂತು ಬ್ಯಾಟ್ ಮಾಡಿ ಅಬ್ಬರಿಸಿದರು. ಶೆಫಾಲಿ 78 ಎಸೆತಗಳಲ್ಲಿ 7 ಬೌಂಡರಿ, 2 ಸಿಕ್ಸರ್ ಸಹಾಯದಿಂದ 87 ರನ್ ಬಾರಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು. ಇನ್ನು ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಕ್ಲಾಸಿಕ್ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಜೆಮಿಮಾ 1 ಬೌಂಡರಿ ನೆರವಿನಿಂದ 24 ರನ್ ಬಾರಿಸಿ ಔಟ್ ಆದರು. ಭಾರತ 171 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಕೊಂಚ ಸಂಕಷ್ಟಕ್ಕೆ ಸಿಲುಕಿತ್ತು.
ನಾಯಕಿ ಹರ್ಮನ್ ಪ್ರೀತ್ ಕೌರ್ 2 ಬೌಂಡರಿ ನೆರವಿನಿಂದ 20 ರನ್ ಸಿಡಿಸಿ ಔಟ್ ಆದರು. ಇವರು ತಾವು ಔಟ್ ಆಗುವ ಮುನ್ನ ದೀಪ್ತಿ ಶರ್ಮಾ ಅವರ ಜೊತೆಗೂಡಿ 56 ಎಸೆತಗಳಲ್ಲಿ 52 ರನ್ ಸೇರಿಸಿತು.

ದೀಪ್ತ ಶರ್ಮಾ ಅರ್ಧಶತಕ
ಆರನೇ ವಿಕೆಟ್‌ಗೆ ರಿಚಾ ಘೋಷ್ ಹಾಗೂ ದೀಪ್ತಿ ಶರ್ಮಾ ಸಹ ಡೆತ್ ಒವರ್‌ನಲ್ಲಿ ರನ್‌ಗಳನ್ನು ಏರಿಸುವಲ್ಲಿ ಶ್ರಮಿಸಿದರು. ಈ ಜೋಡಿ 35 ಎಸೆತಗಳಲ್ಲಿ 47 ರನ್ ಸೇರಿಸಿತು. ರಿಚಾ ಘೋಷ್ 24 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸರ್ ಸಹಾಯದಿಂದ 34 ರನ್ ಸಿಡಿಸಿ ಇಲ್ಲದ ಹೊಡೆತಕ್ಕೆ ಮುಂದಾಗಿ ಔಟ್ ಆದರು. ಸ್ಟಾರ್ ಆಲ್‌ರೌಂಡರ್ ದೀಪ್ತಿ ಶರ್ಮಾ 3 ಬೌಂಡರಿ, 1 ಸಿಕ್ಸರ್ ಸಹಾಯದಿಂದ 58 ರನ್ ಬಾರಿಸಿ ಕೊನೆಯಲ್ಲಿ ಔಟ್ ಆದರು. ಅಂತಿಮವಾಗಿ ಭಾರತ 50 ಓವರ್‌ಗಳಲ್ಲಿ ವಿಕೆಟ್ ನಷ್ಟಕ್ಕೆ 298 ರನ್ ಕಲೆ ಹಾಕಿದೆ. ದಕ್ಷಿಣ ಆಫ್ರಿಕಾ ಪರ ಅಯಬೊಂಗಾ ಖಾಕಾ 3 ವಿಕೆಟ್ ಉರುಳಿಸಿದರು.
ರೋಹಿತ್, ಸಚಿನ್ ಉಪಸ್ಥಿತಿ
ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯವನ್ನು ವೀಕ್ಷಿಸಲು ಭಾರತ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಹಾಗೂ ಅವರ ಪತ್ನಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಮೈದಾನಕ್ಕೆ ಆಗಮಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications