ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿಶ್ವಕಪ್ 2019 : ಜೂನ್ 16ಕ್ಕೆ ಭಾರತ-ಪಾಕಿಸ್ತಾನ ಪಂದ್ಯ

By Mahesh
 ICC World Cup 2019: India to open campaign against SA on June 5, face Pakistan on June 16

ಬೆಂಗಳೂರು, ಏಪ್ರಿಲ್ 25: ಮುಂಬರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2019ರ ವೇಳಾಪಟ್ಟಿ ಪ್ರಕಟವಾಗಿದೆ. ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಜೂನ್ 16ರಂದು ಮ್ಯಾಂಚೆಸ್ಟರ್ ನಲ್ಲಿ ಸೆಣಸಲಿವೆ. ವಿಶ್ವಕಪ್‌ ಇತಿಹಾಸದಲ್ಲೇ ಪಾಕಿಸ್ತಾನ ವಿರುದ್ಧ ಭಾರತ ಒಂದೇ ಒಂದು ಪಂದ್ಯ ಕೂಡ ಸೋಲು ಕಂಡಿಲ್ಲ.

2019ರ ಮೇ 30ರಿಂದ ಜುಲೈ 14ರವರೆಗೆ ಐಸಿಸಿ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿ ಇಂಗ್ಲೆಂಡ್ ನಲ್ಲಿ ನಡೆಯಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್ 05ರಂದು ದಕ್ಷಿಣ ಆಫ್ರಿಕಾ ವಿರುದ್ಧ ಸೆಣಸಲಿದೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

ಕೋಲ್ಕತ್ತಾದಲ್ಲಿ ನಡೆಯುತ್ತಿರುವ ಐಸಿಸಿ ಮುಖ್ಯ ಕಾರ್ಯಕಾರಿಣಿ ಸಭೆಯಲ್ಲಿ ವಿಶ್ವಕಪ್ ವೇಳಾಪಟ್ಟಿ ಬಗ್ಗೆ ಚರ್ಚಿಸಲಾಗಿದೆ. ನ್ಯಾ.ಲೋಧಾ ಸಮಿತಿ ನೀಡಿರುವ ಶಿಫಾರಸ್ಸಿನಂತೆ ವೇಳಾಪಟ್ಟಿ ತಯಾರಾಗುತ್ತಿದೆ.

2019ರ ಮಾರ್ಚ್ 29ರಿಂದ ಮೇ 19ರೊಳಗೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 12ನೇ ಆವೃತ್ತಿ ಪಂದ್ಯಗಳನ್ನು ನಡೆಸಲಾಗುತ್ತದೆ. ಮೇ 30ರಂದು ವಿಶ್ವಕಪ್ ಆರಂಭಕ್ಕೂ ಮುನ್ನ 15 ದಿನಗಳ ಅಂತರ ನೀಡಲು ನಿರ್ಧರಿಸಲಾಗಿದೆ. ಇದಕ್ಕೂ ಮುನ್ನ ಜೂನ್ 2ರಂದೇ ಭಾರತ ತನ್ನ ಮೊದಲ ಪಂದ್ಯವಾಡಬೇಕಿತ್ತು ಎಂದು ಬಿಸಿಸಿಐ ಅಧಿಕಾರಿ ತಿಳಿಸಿದರು.

ಭಾರತಕ್ಕೆ ಸರಿ ಸುಮಾರು 309 ದಿನಗಳ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಯ ನಿಗದಿಯಾಗಿದೆ. 19 ಟೆಸ್ಟ್ ಬದಲಿಗೆ 15 ಟೆಸ್ಟ್ ಆಡಲಿದ್ದು ಎಲ್ಲವೂ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಭಾಗವಾಗಲಿದೆ. ಸದ್ಯಕ್ಕೆ ಭಾರತ ಹಗಲು-ರಾತ್ರಿ ಟೆಸ್ಟ್ ಪಂದ್ಯವನ್ನು ಆಡುತ್ತಿಲ್ಲ ಎಂದು ತಿಳಿದು ಬಂದಿದೆ.(ಪಿಟಿಐ)

Story first published: Wednesday, April 25, 2018, 9:06 [IST]
Other articles published on Apr 25, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X