ಏಕದಿನ ಕ್ರಿಕೆಟ್ ವಿಶ್ವಕಪ್‌ಗೆ ತಂಡ ಪ್ರಕಟಿಸಿದ ಆತಿಥೇಯ ಇಂಗ್ಲೆಂಡ್

ಲಂಡನ್, ಏಪ್ರಿಲ್ 17: ಬಹು ನಿರೀಕ್ಷಿತ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ಆತಿಥೇಯ ಇಂಗ್ಲೆಂಡ್ ತನ್ನ 15 ಆಟಗಾರರ ತಂಡವನ್ನು ಬುಧವಾರ ಪ್ರಕಟಿಸಿದ್ದು, ಅನುಭವಿ ಆಟಗಾರ ಐಯಾನ್ ಮಾರ್ಗನ್ ನಾಯಕತ್ವ ಪಡೆದಿದ್ದಾರೆ.
ಇದೇ ವೇಳೆ ಐಪಿಎಲ್‌ನಲ್ಲಿ ಮಿಂಚುತ್ತಿರುವ ಯುವ ವೇಗದ ಬೌಲರ್ ಜೋಫ್ರಾ ಆರ್ಚರ್‌ಗೆ ವಿಶ್ವಕಪ್ ತಂಡದಲ್ಲಿ ಸ್ಥಾನ ಲಭ್ಯವಾಗುವ ಊಹಾಪೋಹಗಳಿಗೆ ತೆರೆಬಿದ್ದಿದೆ.
ವಿಶ್ವಕಪ್ ತಂಡದಲ್ಲಿ ಸ್ಥಾನ ಗಿಟ್ಟಿಸುವಲ್ಲಿ ವಿಫಲಗೊಂಡಿರುವ 24 ವರ್ಷದ ವೇಗಿ ಸಸೆಕ್ಸ್‌ನ ಆರ್ಚರ್, ವಿಶ್ವಕಪ್‌ಗೂ ಮುನ್ನ ನಡೆಯಲಿರುವ ಐರ್ಲೆಂಡ್ ಮತ್ತು ಪಾಕಿಸ್ತಾನ ವಿರುದ್ಧದ ಏಕದಿನ ಮತ್ತು ಟಿ20 ಕ್ರಿಕೆಟ್ ಸರಣಿಗಳಿಗೆ ಪ್ರಕಟಿಸಲಾದ ಇಂಗ್ಲೆಂಡ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಇನ್ನು 2016ರಲ್ಲಿ ಕೊನೆಯ ಬಾರಿ ಇಂಗ್ಲೆಂಡ್ ತಂಡವನ್ನು ಏಕದಿನ ಕ್ರಿಕೆಟ್‌ನಲ್ಲಿ ಪ್ರತಿನಿಧಿಸಿದ್ದ ಆಲ್‌ರೌಂಡರ್ ಕ್ರಿಸ್ ಜಾರ್ಡನ್ ಕೂಡ ಪಾಕಿಸ್ತಾನ ಮತ್ತು ಐರ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದಾರೆ.
ಸದ್ಯ ಐಪಿಎಲ್‌ನಲ್ಲಿ ವಿವಿಧ ಫ್ರಾಂಚೈಸಿ ತಂಡಗಳ ಪರ ಆಡುತ್ತಿರುವ ಇಂಗ್ಲೆಂಡ್‌ನ ಪ್ರಮುಖ ಆಟಗಾರರು ಏಪ್ರಿಲ್ 26ರ ಬಳಿಕ ತಾಯ್ನಾಡಿಗೆ ಹಿಂದಿರುಗಲಿದ್ದಾರೆ. ಬಳಿಕ ಮೊದಲಿಗೆ ಐರ್ಲೆಂಡ್ ವಿರುದ್ಧ ಏಕೈಕ ಏಕದಿನ ಪಂದ್ಯದಲ್ಲಿಇಂಗ್ಲೆಂಡ್ ಸ್ಪರ್ಧಿಸಲಿದ್ದು, ನಂತರ ಪಾಕ್ ವಿರುದ್ಧ ಟಿ20 ಮತ್ತು 5 ಪಂದ್ಯಗಳ ಏಕದಿನ ಕ್ರಿಕೆಟ್ ಪಂದ್ಯಗಳನ್ನಾಡಲಿದ್ದು, ಮೇ 19ಕ್ಕೆ ಸರಣಿ ಅಂತ್ಯಗೊಳ್ಳಲಿದೆ.
ವಿಶ್ವಕಪ್‌ಗೆ ಇಂಗ್ಲೆಂಡ್ ತಂಡ ಇಂತಿದೆ
ಐಯಾನ್ ಮಾರ್ಗನ್ (ನಾಯಕ), ಜಾನಿ ಬೈರ್‌ಸ್ಟೋವ್, ಜೇಸನ್ ರಾಯ್, ಜೋ ರೂಟ್, ಬೆನ್ ಸ್ಟೋಕ್ಸ್ , ಜೋಸ್ ಬಟ್ಲರ್, ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಲಿಯಾಮ್ ಪ್ಲಂಕೆಟ್, ಆದಿಲ್ ರಶೀದ್, ಮಾರ್ಕ್ ವುಡ್, ಅಲೆಕ್ಸ್ ಹೇಲ್ಸ್, ಟಾಮ್ ಕರ್ರನ್, ಜೋ ಡೆನ್ಲೀ ಮತ್ತು ಡೇವಿಡ್ ವಿಲ್ಲೀ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications