World Cup 2023: ಬಾಬರ್, ಅಬ್ದುಲ್ಲಾ ಅರ್ಧಶತಕ; ಅಫ್ಘಾನಿಸ್ತಾನಕ್ಕೆ ಸವಾಲಿನ ಗುರಿ ನೀಡಿದ ಪಾಕಿಸ್ತಾನ
ಸೋಮವಾರ, ಅಕ್ಟೋಬರ್ 23ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 22ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡದ ವಿರುದ್ಧ ಪಾಕಿಸ್ತಾನ ಸವಾಲಿನ ಮೊತ್ತವನ್ನು ಕಲೆಹಾಕಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ನಿಗದಿತ 50 ಓವರ್‌ಗಳಲ್ಲಿ ಬಾಬರ್ ಅಜಂ ಮತ್ತು ಅಬ್ದುಲ್ಲಾ ಶಫೀಕ್ ಅವರ ಅರ್ಧಶತಕದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 282 ರನ್‌ಗಳನ್ನು ಗಳಿಸಿದ್ದು, ಅಫ್ಘಾನಿಸ್ತಾನಕ್ಕೆ 283 ರನ್‌ಗಳ ಗುರಿ ನೀಡಿದೆ.

ಪಾಕಿಸ್ತಾನದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಅಬ್ದುಲ್ಲಾ ಶಫೀಕ್ ಮತ್ತು ಇಮಾಮ್-ಉಲ್-ಹಕ್ ಜೋಡಿ ಮೊದಲ ವಿಕೆಟ್‌ಗೆ 56 ರನ್‌ಗಳ ಜೊತೆಯಾಟ ನೀಡಿದರು. 22 ಎಸೆತಗಳಲ್ಲಿ 17 ರನ್ ಗಳಿಸಿ ಆಡುತ್ತಿದ್ದ ಇಮಾಮ್-ಉಲ್-ಹಕ್ ಅಜ್ಮತುಲ್ಲಾ ಒಮರ್ಜಾಯ್ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸಿದರು.
ನಂತರ ಬಂದ ನಾಯಕ ಬಾಬರ್ ಅಜಂ ಅಫ್ಘಾನಿಸ್ತಾನ ಬೌಲರ್‌ಗಳನ್ನು ಕಾಡಿದರು. ಈ ವೇಳೆ 75 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಮೂಲಕ 58 ರನ್ ಬಾರಿಸಿ ಔಟಾದರು. ಆ ಬಳಿಕ ಮೊಹಮ್ಮದ್ ರಿಜ್ವಾನ್ ಕೇವಲ 8 ರನ್‌ಗಳಿಗೆ ವಿಕೆಟ್ ಒಪ್ಪಿಸಿದರು.
ಬಾಬರ್ ಅಜಂ 92 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 74 ರನ್ ಗಳಿಸಿದರೆ, ಸೌದ್ ಶಕೀಲ್ 34 ಎಸೆತಗಳಲ್ಲಿ 3 ಬೌಂಡರಿ ನೆರವಿನಿಂದ 25 ರನ್ ಗಳಿಸಿದರು.

ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಶಾದಾಬ್ ಖಾನ್ ಮತ್ತು ಇಫ್ತಿಕರ್ ಅಹ್ಮದ್ 6ನೇ ವಿಕೆಟ್‌ಗೆ 73 ರನ್‌ಗಳ ಜೊತೆಯಾಟ ನೀಡಿದರು. ಇಫ್ತಿಕರ್ ಅಹ್ಮದ್ 27 ಎಸೆತಗಳಲ್ಲಿ 2 ಬೌಂಡರಿ ಮತ್ತು 4 ಸಿಕ್ಸರ್ ಸಮೇತ 40 ರನ್ ಬಾರಿಸಿದರೆ, ಶಾದಾಬ್ ಖಾನ್ 38 ಎಸೆತಗಳಲ್ಲಿ 1 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 40 ರನ್ ಗಳಿಸಿದರು.
ಬೌಲಿಂಗ್‌ನಲ್ಲಿ ಅಫ್ಘಾನಿಸ್ತಾನ ತಂಡದ ಪರ ವಿಶ್ವಕಪ್ ಮೊದಲ ಪಂದ್ಯವಾಡಿದ ನೂರ್ ಅಹ್ಮದ್ 10 ಓವರ್‌ಗಳಲ್ಲಿ 49 ರನ್ ನೀಡಿ 3 ವಿಕೆಟ್ ಪಡೆದರೆ, ನವೀನ್-ಉಲ್-ಹಕ್ 7 ಓವರ್‌ಗಳಲ್ಲಿ 52 ರನ್ ನೀಡಿ 2 ವಿಕೆಟ್ ಕಬಳಿಸಿದರು. ಉಳಿದಂತೆ ಮೊಹಮ್ಮದ್ ನಬಿ ಮತ್ತು ಅಜ್ಮತುಲ್ಲಾ ಒಮರ್ಜಾಯ್ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications