Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

SA vs AFG: ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಪಂದ್ಯ ವಿಜೇತ ಆಟ; ದಕ್ಷಿಣ ಆಫ್ರಿಕಾ ವಿರುದ್ಧ ಸೋತು ಹೊರಬಿದ್ದ ಅಫ್ಘಾನಿಸ್ತಾನ!

ಶುಕ್ರವಾರ, ನವೆಂಬರ್ 10ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ 42ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಸೋತ ಅಫ್ಘಾನಿಸ್ತಾನ ತಂಡ ಪಂದ್ಯಾವಳಿಯಿಂದ ಅಧಿಕೃತವಾಗಿ ಹೊರಬಿದ್ದಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ ಅಜ್ಮತುಲ್ಲಾ ಒಮರ್ಜಾಯ್ ಅಮೋಘ ಅರ್ಧಶತಕದ ನೆರವಿನಿಂದ ನಿಗದಿತ 50 ಓವರ್‌ಗಳಲ್ಲಿ 244 ರನ್‌ಗಳಿಗೆ ಸರ್ವಪತನ ಕಂಡಿತು.

afghanistan-out-of-world-cup-2023

245 ರನ್‌ಗಳ ಸುಲಭ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಅವರ ಮನಮೋಹಕ ಅರ್ಧಶತಕದ ನೆರವಿನಿಂದ 47.3 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 247 ರನ್ ಗಳಿಸಿತು ಮತ್ತು ತಮ್ಮ ಕೊನೆಯ ಲೀಗ್ ಪಂದ್ಯವನ್ನು ಗೆಲುವಿನ ಮೂಲಕ ಮುಗಿಸಿತು. ದಕ್ಷಿಣ ಆಫ್ರಿಕಾ ತಂಡ ಈಗಾಗಲೇ ಸೆಮಿಫೈನಲ್‌ಗೆ ಅರ್ಹತೆ ಪಡೆದಿದೆ.

ದಕ್ಷಿಣ ಆಫ್ರಿಕಾ ತಂಡದ ಇನ್ನಿಂಗ್ಸ್ ಆರಂಭಿಸಿದ ಕ್ವಿಂಟನ್ ಡಿ ಕಾಕ್ ಮತ್ತು ನಾಯಕ ಟೆಂಬಾ ಬವುಮಾ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 11 ಓವರ್‌ಗಳಲ್ಲಿ 66 ರನ್‌ಗಳ ಜೊತೆಯಾಟ ನಿರ್ಮಿಸಿತು. ಈ ವೇಳೆ 23 ರನ್ ಗಳಿಸಿ ಆಡುತ್ತಿದ್ದ ಟೆಂಬಾ ಬವುಮಾ 23 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಇನ್ನು 47 ಎಸೆತಗಳನ್ನು ಎದುರಿಸಿ 2 ಬೌಂಡರಿ ಹಾಗೂ 3 ಸಿಕ್ಸರ್ ಸಮೇತ 41 ರನ್ ಬಾರಿಸಿದ್ದ ಕ್ವಿಂಟನ್ ಡಿ ಕಾಕ್ ಕೂಡ ಔಟಾದರು. ನಂತರ ಬಂದ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ 95 ಎಸೆತಗಳಲ್ಲಿ 6 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 76 ರನ್ ಗಳಿಸಿ ಅಜೇಯರಾಗುಳಿದರು.

ಉಳಿದಂತೆ ಏಡೆನ್ ಮಾರ್ಕ್ರಾಮ್ 32 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 25 ರನ್ ಗಳಿಸಿದರೆ, ಹೆನ್ರಿಚ್ ಕ್ಲಾಸೆನ್ 10 ರನ್, ಡೇವಿಡ್ ಮಿಲ್ಲರ್ 33 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 24 ರನ್, ಆಂಡಿಲೆ ಫೆಹ್ಲುಕ್ವಾಯೊ 37 ಎಸೆತಗಳಲ್ಲಿ 1 ಬೌಂಡರಿ ಹಾಗೂ 3 ಸಿಕ್ಸರ್ ಸಹಾಯದಿಂದ ಅಜೇಯ 39 ರನ್ ಬಾರಿಸಿದರು.

ಬೌಲಿಂಗ್‌ನಲ್ಲಿ ಅಫ್ಘಾನಿಸ್ತಾನ ತಂಡದ ಪರ ರಶೀದ್ ಖಾನ್ 10 ಓವರ್‌ಗಳಲ್ಲಿ 37 ರನ್ ನೀಡಿ 2 ವಿಕೆಟ್ ಪಡೆದರೆ, ಮೊಹಮ್ಮದ್ ನಬಿ 10 ಓವರ್‌ಗಳಲ್ಲಿ 35 ರನ್ ನೀಡಿ 2 ವಿಕೆಟ್ ಕಬಳಿಸಿದರು. ಉಳಿದಂತೆ ಮುಜೀಬ್ ಉರ್ ರಹಮಾನ್ 10 ಓವರ್‌ಗಳಲ್ಲಿ 51 ರನ್ ನೀಡಿ 1 ವಿಕೆಟ್ ಪಡೆದರು.

Story first published: Friday, November 10, 2023, 22:20 [IST]
Other articles published on Nov 10, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+