ICC World Cup 2023: ಫೈನಲ್ ಪ್ರವೇಶಿಸಿದ ಆಸ್ಟ್ರೇಲಿಯಾ; 20 ವರ್ಷಗಳ ಸೇಡಿಗೆ ಕಾದು ಕುಳಿತ ಟೀಮ್ ಇಂಡಿಯಾ!
ಗುರುವಾರ, ನವೆಂಬರ್ 16ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ 2023ರ ಏಕದಿನ ವಿಶ್ವಕಪ್‌ನ 2ನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 3 ವಿಕೆಟ್‌ಗಳ ಗೆಲುವು ಸಾಧಿಸಿದ ಆಸ್ಟ್ರೇಲಿಯಾ ತಂಡವು ದಾಖಲೆಯ 8ನೇ ಬಾರಿಗೆ ವಿಶ್ವಕಪ್ ಫೈನಲ್ ಪ್ರವೇಶಿಸಿದೆ.
ವಿಶ್ವಕಪ್ ಸೆಮಿಫೈನಲ್‌ನಲ್ಲಿ ಸೋಲಲು ಹೆಸರುವಾಸಿಯಾಗಿರುವ ದಕ್ಷಿಣ ಆಫ್ರಿಕಾ ತಂಡವು ಚೋಕರ್ಸ್ ಎಂಬ ಕೆಟ್ಟ ಹಣೆಪಟ್ಟಿಯನ್ನು ಹಾಗೇ ಮುಂದುವರೆಸಿಕೊಂಡಿದೆ. 1992ರಿಂದಲೂ ವಿಶ್ವಕಪ್ ಫೈನಲ್ ತಲುಪಲು ಪ್ರಯತ್ನಿಸುತ್ತಿರುವ ಹರಿಣಗಳ ಕನಸು ಕನಸಾಗಿಯೇ ಉಳಿದಿದೆ.

ದಕ್ಷಿಣ ಆಫ್ರಿಕಾ ವಿರುದ್ಧ 2ನೇ ಸೆಮಿಫೈನಲ್‌ನಲ್ಲಿ ಗೆದ್ದ ಆಸ್ಟ್ರೇಲಿಯಾ ತಂಡವು ಭಾನುವಾರ, ನವೆಂಬರ್ 19ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಗ್ರ್ಯಾಂಡ್ ಫೈನಲ್‌ನಲ್ಲಿ ಆತಿಥೇಯ ಭಾರತ ತಂಡದ ವಿರುದ್ಧ ಸೆಣಸಾಡಲಿದೆ.
ಇನ್ನು 2003ರ ಬಳಿಕ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮತ್ತೆ ಮುಖಾಮುಖಿಯಾಗಲಿವೆ. 20 ವರ್ಷಗಳ ಹಿಂದಿನ ಸೋಲಿನ ಸೇಡಿಗೆ ಪ್ರತೀಕಾರ ತೀರಿಸಿಕೊಳ್ಳಲು ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಕಾದು ಕುಳಿತಿದೆ.

ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ 2003ರ ವಿಶ್ವಕಪ್ ಫೈನಲ್‌ನಲ್ಲಿ ರಿಕಿ ಪಾಂಟಿಂಗ್ ನಾಯಕತ್ವದ ಆಸ್ಟ್ರೇಲಿಯಾ ತಂಡವು ಸೌರವ್ ಗಂಗೂಲಿ ನಾಯಕತ್ವದ ಭಾರತ ತಂಡದ ವಿರುದ್ಧ 125 ರನ್‌ಗಳಿಂದ ಗೆಲುವು ಸಾಧಿಸಿತ್ತು.
ಇದೀಗ ಭಾರತ ತಂಡ 2023ರ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು, ಲೀಗ್ ಹಂತದ ತನ್ನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಈಗಾಗಲೇ ಗೆಲುವು ಸಾಧಿಸಿದೆ. ಚೆನ್ನೈನಲ್ಲಿ ಆಸೀಸ್ ವಿರುದ್ಧದ ಗೆಲುವಿನೊಂದಿಗೆ ಆರಂಭವಾದ ಭಾರತ ತಂಡದ ಅಭಿಯಾನ, ಸತತ 10 ಪಂದ್ಯಗಳ ಗೆಲುವಿನೊಂದಿಗೆ ಫೈನಲ್‌ಗೆ ತಲುಪಿದೆ.
ಮತ್ತೊಂದೆಡೆ, ಆಸ್ಟ್ರೇಲಿಯಾ ಸತತ ಎರಡು ಸೋಲಿನೊಂದಿಗೆ ವಿಶ್ವಕಪ್ ಅಭಿಯಾನ ಆರಂಭಿಸಿತು. ನಂತರ, ಸತತ ಎಂಟು ಪಂದ್ಯಗಳ ಗೆಲುವಿನ ಹಾದಿಯಲ್ಲಿರುವ ಉತ್ತಮ ಫಾರ್ಮ್ ಅನ್ನು ಕಂಡುಕೊಂಡಿದೆ.
ಆಸ್ಟ್ರೇಲಿಯಾ ಈಗ ಮೂರನೇ ಬಾರಿಗೆ ಐಸಿಸಿ ಪಂದ್ಯಾವಳಿಯ ಫೈನಲ್‌ನಲ್ಲಿ ಭಾರತವನ್ನು ಎದುರಿಸಲಿದೆ, ಈ ಮುಖಾಮುಖಿಯಲ್ಲಿ ಆಸೀಸ್ ಅದ್ಭುತ ದಾಖಲೆಯನ್ನು ಹೊಂದಿದ್ದಾರೆ. ಆಸೀಸ್ 2003ರ ವಿಶ್ವಕಪ್ ಮತ್ತು 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಗೆಲುವು ಗಳಿಸುವುದರೊಂದಿಗೆ ಸದ್ಯ ಭಾರತದ ವಿರುದ್ಧ 2-0 ಮುನ್ನಡೆ ಕಾಯ್ದುಕೊಂಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications