World Cup 2023: ಇಬ್ರಾಹಿಂ ಝದ್ರಾನ್ ಭರ್ಜರಿ ಶತಕ; ಆಸ್ಟ್ರೇಲಿಯಾ ತಂಡಕ್ಕೆ ಸವಾಲಿನ ಗುರಿ ನೀಡಿದ ಅಫ್ಘಾನಿಸ್ತಾನ
ಮಂಗಳವಾರ, ನವೆಂಬರ್ 7ರಂದು ಮುಂಬೈನ ಐಕಾನಿಕ್ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ ಮಹತ್ವದ 39ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ಅಫ್ಘಾನಿಸ್ತಾನ ತಂಡವು ಸವಾಲಿನ ಮೊತ್ತವನ್ನು ಕಲೆಹಾಕಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡವು ಇಬ್ರಾಹಿಂ ಝದ್ರಾನ್ ಅವರ ಭರ್ಜರಿ ಶತಕ ನೆರವಿನಿಂದ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 291 ರನ್ ದಾಖಲಿಸಿದ್ದು, ಆಸ್ಟ್ರೇಲಿಯಾ ತಂಡಕ್ಕೆ 292 ರನ್‌ಗಳ ಗುರಿ ನೀಡಿದೆ.
ಅಫ್ಘಾನಿಸ್ತಾನ ತಂಡದ ಇನ್ನಿಂಗ್ಸ್ ಆರಂಭಿಸಿದ ಇಬ್ರಾಹಿಂ ಝದ್ರಾನ್ ಮತ್ತು ರಹಮಾನುಲ್ಲಾ ಗುರ್ಬಾಜ್ ಉತ್ತಮ ಆರಂಭ ನೀಡಲು ಪ್ರಯತ್ನಿಸಿದರು. ಆದರೆ ತಂಡದ ಮೊತ್ತ 38 ರನ್‌ಗಳಾಗಿದ್ದಾಗ ರಹಮಾನುಲ್ಲಾ ಗುರ್ಬಾಜ್ 25 ಎಸೆತಗಳಲ್ಲಿ 22 ರನ್ ಗಳಿಸಿ ಔಟಾದರು.

ನಂತರ ಬಂದ ರಹಮತ್ ಷಾ ಕೂಡ ಆಸೀಸ್ ಬೌಲರ್‌ಗಳಿಗೆ ಪ್ರತಿರೋಧ ತೋರಿ 44 ಎಸೆತಗಳಲ್ಲಿ 30 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಾಯಕ ಹಶ್ಮತುಲ್ಲಾ ಶಾಹಿದಿ 43 ಎಸೆತಗಳಲ್ಲಿ 26 ರನ್ ಗಳಿಸಿ ಪೆವಿಲಿಯನ್ ಸೇರಿದರು.
ಆ ಬಳಿಕ ಅಜ್ಮತುಲ್ಲಾ ಒಮರ್ಜಾಯ್ 18 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ಸಮೇತ 22 ರನ್ ಗಳಿಸಿದರೆ, ಮೊಹಮ್ಮದ್ ನಬಿ 10 ಎಸೆತಗಳಲ್ಲಿ 1 ಸಿಕ್ಸರ್ ಮೂಲಕ 12 ರನ್ ಗಳಿಸಿ ಔಟಾದರು.

ಇನ್ನು ಕೊನೆಯವರೆಗೂ ಕ್ರೀಸ್‌ನಲ್ಲಿ ನಿಂತು ದಿಟ್ಟ ಬ್ಯಾಟಿಂಗ್ ಪ್ರದರ್ಶನ ನೀಡಿದ ಇಬ್ರಾಹಿಂ ಝದ್ರಾನ್ 143 ಎಸೆತಗಳಲ್ಲಿ 8 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಮೂಲಕ ಅಜೇಯ 129 ರನ್ ಬಾರಿಸಿದರು. ಇನ್ನು ಇಬ್ರಾಹಿಂ ಝದ್ರಾನ್ ಅವರಿಗೆ ಉತ್ತಮ ಸಾಥ್ ನೀಡಿದ ರಶೀದ್ ಖಾನ್ 18 ಎಸೆತಗಳಲ್ಲಿ 2 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್ ನೆರವಿನಿಂದ 35 ರನ್ ಬಾರಿಸಿದರು.
ಬೌಲಿಂಗ್‌ನಲ್ಲಿ ಆಸ್ಟ್ರೇಲಿಯಾ ತಂಡದ ಪರ ಜೋಶ್ ಹ್ಯಾಜಲ್‌ವುಡ್ 9 ಓವರ್‌ಗಳಲ್ಲಿ 39 ರನ್ ನೀಡಿ 2 ವಿಕೆಟ್ ಪಡೆದರೆ, ಮಿಚೆಲ್ ಸ್ಟಾರ್ಕ್ 9 ಓವರ್‌ಗಳಲ್ಲಿ 70 ರನ್ ನೀಡಿ 1 ವಿಕೆಟ್ ಕಬಳಿಸಿದರು. ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಆಡಮ್ ಝಂಪಾ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications