World Cup 2023: ಆಸ್ಟ್ರೇಲಿಯಾ vs ಅಫ್ಘಾನಿಸ್ತಾನ ನಿರ್ಣಾಯಕ ಪಂದ್ಯ; ಟಾಸ್ ವರದಿ, ಆಡುವ 11ರ ಬಳಗ
ಮಂಗಳವಾರ, ನವೆಂಬರ್ 7ರಂದು ಮುಂಬೈನ ಐಕಾನಿಕ್ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 39ನೇ ಮಹತ್ವದ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ಅಫ್ಘಾನಿಸ್ತಾನ ತಂಡದ ನಾಯಕ ಹಶ್ಮತುಲ್ಲಾ ಶಾಹಿದಿ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡರು. ಹೀಗಾಗಿ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡ ಮೊದಲು ಫೀಲ್ಡಿಂಗ್ ಮಾಡಲಿದೆ.

ವಾಂಖೆಡೆ ಕ್ರೀಡಾಂಗಣದಲ್ಲಿ ಯುವ ಅಫ್ಘಾನಿಸ್ತಾನ ತಂಡದ ವಿರುದ್ಧದ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ ನಾಯಕತ್ವದ ಆಸೀಸ್ ತಂಡವು ಮಧ್ಯಮ ಕ್ರಮಾಂಕದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಎದುರು ನೋಡುತ್ತಿದೆ.
2023ರ ವಿಶ್ವಕಪ್ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನದಲ್ಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳೊಂದಿಗೆ ಸೆಮಿಫೈನಲ್‌ಗೆ ಅರ್ಹತೆ ಪಡೆಯಲು ಕೇವಲ ಎರಡು ಸ್ಥಾನಗಳು ಮಾತ್ರ ಉಳಿದಿವೆ.
ಆಸ್ಟ್ರೇಲಿಯಾ ತಂಡದ ಸೆಮಿಫೈನಲ್‌ಗೆ ಯಾವುದೇ ತಂಡವು ನೇರವಾಗಿ ಬೆದರಿಕೆ ಹಾಕದ ಕಾರಣ, ಪ್ಯಾಟ್ ಕಮ್ಮಿನ್ಸ್ ಪಡೆ ಮೊದಲ ಅವಕಾಶದಲ್ಲಿ ಕೆಲಸವನ್ನು ಮುಗಿಸಲು ಬಯಸುತ್ತದೆ.
ಮತ್ತೊಂದೆಡೆ, ಅಫ್ಘಾನಿಸ್ತಾನ ತಂಡಕ್ಕೂ ಸೆಮಿಫೈನಲ್ ತಲುಪುವ ಅವಕಾಶವಿದ್ದು, ಉಳಿದ ಎರಡು ಪಂದ್ಯಗಳನ್ನು ಅತ್ಯುತ್ತಮ ರೀತಿಯಲ್ಲಿ ಗೆಲ್ಲಲು ಎದುರು ನೋಡುತ್ತಿದೆ.
ಹಾಲಿ ಚಾಂಪಿಯನ್ ಇಂಗ್ಲೆಂಡ್ ಸೋಲಿಸಿದ ನಂತರ, ಅಫ್ಘಾನಿಸ್ತಾನ ತಂಡ 1992ರ ವಿಶ್ವ ಚಾಂಪಿಯನ್ ಹಾಗೂ ನೆರೆಯ ಪಾಕಿಸ್ತಾನ ತಂಡವನ್ನು 8 ವಿಕೆಟ್‌ಗಳಿಂದ ಮಣಿಸಿತು. ನಂತರ 1996ರ ವಿಶ್ವಕಪ್ ಗೆದ್ದ ತಂಡವಾದ ಶ್ರೀಲಂಕಾ ತಂಡವನ್ನೂ ಸೋಲಿಸಿ ಗೆಲುವಿನ ದಂಡಯಾತ್ರೆಯನ್ನು ಮುಂದೆವರೆಸಿತು.
ಈ ಮೂರು ಬಲಾಢ್ಯ ತಂಡಗಳನ್ನು ಸದೆಬಡಿದ ಆಫ್ಘಾನ್ ತಂಡ ನಂತರದ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ನಾಲ್ಕನೇ ಗೆಲುವು ದಾಖಲಿಸಿತು. ಈ ಮೂಲಕ ಇದುವರೆಗೆ ಆಡಿದ 7 ಪಂದ್ಯಗಳ ಪೈಕಿ ಅಫ್ಘಾನಿಸ್ತಾನ ತಂಡ ಒಟ್ಟು 4 ಪಂದ್ಯ ಗೆದ್ದು 3 ಪಂದ್ಯಗಳಲ್ಲಿ ಸೋಲು ಕಂಡಿದೆ.
ಈ ಮೂಲಕ ಅಫ್ಘಾನಿಸ್ತಾನ ತಂಡವು ಪ್ರಸ್ತುತ ಒಟ್ಟು 8 ಅಂಕಗಳನ್ನು ಹೊಂದಿದ್ದು, ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಈಗ ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ನೆದರ್ಲ್ಯಾಂಡ್ಸ್ ಸೇರಿದಂತೆ ಉಳಿದ ಎರಡು ಸ್ಥಾನಗಳಿಗಾಗಿ 5 ತಂಡಗಳ ನಡುವೆ ರೇಸ್ ಏರ್ಪಟ್ಟಿದೆ.
ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ತಂಡಗಳ ಆಡುವ 11ರ ಬಳಗ
ಅಫ್ಘಾನಿಸ್ತಾನ ತಂಡ: ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಝದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ(ನಾಯಕ), ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್(ವಿಕೆಟ್ ಕೀಪರ್), ರಶೀದ್ ಖಾನ್, ಮುಜೀಬ್-ಉರ್-ರಹಮಾನ್, ನೂರ್ ಅಹ್ಮದ್, ನವೀನ್-ಉಲ್-ಹಕ್.
ಆಸ್ಟ್ರೇಲಿಯಾ ತಂಡ: ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಜೋಶ್ ಇಂಗ್ಲಿಸ್(ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಪ್ಯಾಟ್ ಕಮ್ಮಿನ್ಸ್(ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications