World Cup 2023: ಆಸ್ಟ್ರೇಲಿಯಾ ತಂಡಕ್ಕೆ ಶಾಕ್ ನೀಡುವುದೇ ನೆದರ್ಲ್ಯಾಂಡ್ಸ್; ಟಾಸ್ ವರದಿ, ಆಡುವ 11ರ ಬಳಗ
ಬುಧವಾರ, ಅಕ್ಟೋಬರ್ 25ರಂದು ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 24ನೇ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ಮತ್ತು ನೆದರ್ಲ್ಯಾಂಡ್ಸ್ ತಂಡಗಳು ನಿರ್ಣಾಯಕ ಗೆಲುವಿಗಾಗಿ ಮುಖಾಮುಖಿಯಾಗುತ್ತಿವೆ.
ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಹೀಗಾಗಿ ಸ್ಕಾಟ್ ಎಡ್ವರ್ಡ್ಸ್ ನಾಯಕತ್ವದ ನೆದರ್ಲ್ಯಾಂಡ್ಸ್ ತಂಡ ಮೊದಲು ಬೌಲಿಂಗ್ ಮಾಡಲಿದೆ.
ಸತತ ಎರಡು ಆರಂಭಿಕ ಸೋಲುಗಳೊಂದಿಗೆ ವಿಶ್ವಕಪ್ ಟೂರ್ನಿ ಆರಂಭಿಸಿದ ಆಸ್ಟ್ರೇಲಿಯಾ ತಂಡ ತನ್ನ ಅಭಿಯಾನವನ್ನು ಮರಳಿ ಟ್ರ್ಯಾಕ್‌ಗೆ ತಂದಿದೆ. ಕಳೆದೆರಡು ಪಂದ್ಯಗಳಲ್ಲಿ ಶ್ರೀಲಂಕಾ ಮತ್ತು ಪಾಕಿಸ್ತಾನ ವಿರುದ್ಧ ಜಯಗಳಿಸುವುದರೊಂದಿಗೆ, ಆಸ್ಟ್ರೇಲಿಯಾ ತಂಡವು ಸೆಮಿಫೈನಲ್‌ಗೆ ಅರ್ಹತೆ ಪಡೆಯುವ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಇದೇ ವೇಳೆ ಆಸ್ಟ್ರೇಲಿಯಾ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಗಾಯಗೊಂಡಿರುವ ಮಾರ್ಕಸ್ ಸ್ಟೋಯಿನಿಸ್ ಬದಲಾಗಿ ಆಲ್‌ರೌಂಡರ್ ಕ್ಯಾಮೆರಾನ್ ಗ್ರೀನ್ ಅವರನ್ನು ಆಡುವ 11ರ ಬಳಗಕ್ಕೆ ಆಯ್ಕೆ ಮಾಡಲಾಗಿದೆ.
ಮತ್ತೊಂದೆಡೆ, ಕಳೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಗೆಲುವಿನ ನಂತರ ನೆದರ್ಲ್ಯಾಂಡ್ಸ್ ಸಾಕಷ್ಟು ಭರವಸೆಯನ್ನು ತೋರಿಸಿದ್ದಾರೆ. ಇಂದಿನ ಪಂದ್ಯದಲ್ಲಿಯೂ ಅಂತಹದೇ ಶಾಕಿಂಗ್ ಫಲಿತಾಂಶ ಹೊರಹೊಮ್ಮುವುದೇ ಎಂಬುದನ್ನು ಕಾದುನೋಡಬೇಕಿದೆ.
ಆಸ್ಟ್ರೇಲಿಯಾ ಮತ್ತು ನೆದರ್ಲ್ಯಾಂಡ್ಸ್ ತಂಡಗಳ ಆಡುವ 11ರ ಬಳಗ
ನೆದರ್ಲ್ಯಾಂಡ್ಸ್ ತಂಡ: ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಒ'ಡೌಡ್, ಕಾಲಿನ್ ಅಕರ್ಮನ್, ಬಾಸ್ ಡಿ ಲೀಡ್, ತೇಜ ನಿಡಮನೂರು, ಸ್ಕಾಟ್ ಎಡ್ವರ್ಡ್ಸ್ (ನಾಯಕ/ವಿಕೆಟ್ ಕೀಪರ್), ಸೈಬ್ರಾಂಡ್ ಎಂಗೆಲ್‌ಬ್ರೆಕ್ಟ್, ಲೋಗನ್ ವ್ಯಾನ್ ಬೀಕ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್.
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹೇಝಲ್‌ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications