ICC World Cup 2023: ಆಸ್ಟ್ರೇಲಿಯಾ vs ದಕ್ಷಿಣ ಆಫ್ರಿಕಾ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
ಗುರುವಾರ, ಅಕ್ಟೋಬರ್ 12ರಂದು ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 10ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸೆಣಸಾಡುತ್ತಿವೆ.
ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಹೀಗಾಗಿ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡ ಮೊದಲು ಬೌಲಿಂಗ್ ಮಾಡಿಲಿದೆ.
ಈ ಮೊದಲು ದಕ್ಷಿಣ ಆಫ್ರಿಕಾ ವಿರುದ್ಧ 2-3 ಅಂತರದಲ್ಲಿ ಏಕದಿನ ಸರಣಿ ಸೋತಿದ್ದ ಆಸ್ಟ್ರೇಲಿಯಾ ತಂಡ, ವಿಶ್ವಕಪ್ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುವ ಗುರಿಯನ್ನು ಹೊಂದಿದೆ.

ಐದು ಬಾರಿಯ ಚಾಂಪಿಯನ್ಸ್ ಆಸ್ಟ್ರೇಲಿಯಾ ತನ್ನ ಮೊದಲ ಪಂದ್ಯದಲ್ಲಿ ಆತಿಥೇಯ ಭಾರತ ತಂಡದ ವಿರುದ್ಧ ಆರು ವಿಕೆಟ್‌ಗಳ ಅಂತರದಿಂದ ಸೋಲು ಕಂಡರೆ, ದಕ್ಷಿಣ ಆಫ್ರಿಕಾ ತಮ್ಮ ಆರಂಭಿಕ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 102 ರನ್‌ಗಳಿಂದ ಸೋಲಿಸಿದ ಆತ್ಮವಿಶ್ವಾಸದ ಮೇಲೆ ಪಂದ್ಯಕ್ಕೆ ಬರುತ್ತಿದೆ.
ಒಟ್ಟಾರೆ ಹೆಡ್-ಟು-ಹೆಡ್ ಏಕದಿನ ಅಂಕಿಅಂಶಗಳಲ್ಲಿ ದಕ್ಷಿಣ ಆಫ್ರಿಕಾ ತಂಡ ಮುನ್ನಡೆ ಹೊಂದಿದ್ದರೆ, ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಹಿಡಿತ ಸಾಧಿಸಿದೆ. ಮುಖಾಮುಖಿಯಾದ ಆರು ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮೂರು ಬಾರಿ ಸೋಲಿಸಿದೆ.
ಆಸ್ಟ್ರೇಲಿಯಾ vs ದಕ್ಷಿಣ ಆಫ್ರಿಕಾ ತಂಡಗಳ ಆಡುವ 11ರ ಬಳಗ
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೊಯಿನಿಸ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹೇಝಲ್‌ವುಡ್.
ದಕ್ಷಿಣ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್‌ಗಿಡಿ, ತಬ್ರೈಜ್ ಶಮ್ಸಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications