ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ ಭಾರತದ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಅಜಂ ಅತ್ಯಂತ ಅಂಜುಬುರುಕರಾಗಿದ್ದರು ಎಂದು ಭಾರತದ ಮಾಜಿ ಆರಂಭಿಕ ಬ್ಯಾಟ್ಟ್‌ಮನ್ ಗೌತಮ್ ಗಂಭೀರ್ ಹೇಳಿದ್ದಾರೆ.
2023ರ ವಿಶ್ವಕಪ್‌ನ ಹೈ-ವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಭಾರತ ತಂಡ ಸತತ ಮೂರನೇ ಗೆಲುವು ದಾಖಲಿಸಿದೆ.

ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡಿದ ಗೌತಮ್ ಗಂಭೀರ್, ಭಾರತ ವಿರುದ್ಧ ಬಾಬರ್ ಅಜಂ ಅತ್ಯಂತ ಅಂಜುಬುರುಕರಾಗಿ ಆಡಿದರು. ಮೊಹಮ್ಮದ್ ರಿಜ್ವಾನ್ ಮತ್ತು ಬಾಬರ್ ಅಜಂ ಇಬ್ಬರೂ ಒಂದೇ ರೀತಿಯಲ್ಲಿ ಬ್ಯಾಟಿಂಗ್ ಮಾಡುತ್ತಿದ್ದರು ಎಂದು ಹೇಳಿದರು.
ಬಾಬರ್ ಅಜಂ 58 ಎಸೆತಗಳಲ್ಲಿ 50 ರನ್ ಗಳಿಸಿದರೆ ಮೊಹಮ್ಮದ್ ರಿಜ್ವಾನ್ 49 ರನ್ ಗಳಿಸಿದರು. ಆದರೂ, ಪಾಕಿಸ್ತಾನ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 191 ರನ್‌ಗಳಿಗೆ ಸರ್ವಪತನ ಕಂಡಿತು.
"ಬಾಬರ್ ಅಜಂ ಅತ್ಯಂತ ಅಂಜುಬುರುಕನಾಗಿದ್ದ. ಜೊತೆಯಾಟದಲ್ಲಿ ಇಬ್ಬರು ಬ್ಯಾಟರ್‌ಗಳು ಒಂದೇ ರೀತಿಯಲ್ಲಿ ಬ್ಯಾಟ್ ಮಾಡಲು ಸಾಧ್ಯವಿಲ್ಲ. ಅವರಲ್ಲಿ ಒಬ್ಬರು ಅವಕಾಶಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ನೀವು 50 ಅಥವಾ ನಿಮ್ಮ ವೈಯಕ್ತಿಕ ರನ್‌ಗಳಿಗೆ ಆಡುತ್ತಿದ್ದರೆ, ಇಂತಹ ಫಲಿತಾಂಶಗಳನ್ನು ನೀವು ಪಡೆಯುತ್ತೀರಿ," ಎಂದು ಗೌತಮ್ ಗಂಭೀರ್ ಅಭಿಪ್ರಾಯಪಟ್ಟರು.

ಪಾಕಿಸ್ತಾನದ ಅಗ್ರ-ಮೂವರಲ್ಲಿ ಎದುರಾಳಿ ಬೌಲಿಂಗ್ ದಾಳಿಯನ್ನು ಎದುರಿಸುವ ಒಬ್ಬ ಬ್ಯಾಟರ್ ಇಲ್ಲ ಎಂದ ಗಂಭೀರ್, ಅಹಮದಾಬಾದ್‌ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಒಂದೇ ಒಂದು ಸಿಕ್ಸರ್ ಬಾರಿಸಲು ವಿಫಲವಾಯಿತು.
"ಬಾಬರ್ ಅಜಂ ಅವರು ಸ್ವತಃ ಹೆಚ್ಚಿನ ರನ್ ಗಳಿಸಿದ್ದಾರೆ. ಆದರೆ ಶಾಹಿದ್ ಅಫ್ರಿದಿ, ಇಮ್ರಾನ್ ನಜೀರ್ ಅಥವಾ ತೌಫೀಕ್ ಉಮರ್ ಆಗಿರಲಿ, ಆರಂಭದಲ್ಲಿ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಲು ಇಷ್ಟಪಟ್ಟಿದ್ದಾರೆ ಮತ್ತು ಅವರು ಮಧ್ಯಮ ಕ್ರಮಾಂಕದಲ್ಲಿ ರನ್ ಸೇರಿಸುತ್ತಾ ಎಂಬುದು ಪಾಕಿಸ್ತಾನದ ಇತಿಹಾಸವಾಗಿದೆ," ಎಂದು ಗೌತಮ್ ಗಂಭೀರ್ ತಿಳಿಸಿದರು.
ಬಾಬರ್ ಅಜಂ ಔಟಾದ ಬಗ್ಗೆ ಮಾತನಾಡಿದ ಭಾರತದ ಮಾಜಿ ಕ್ರಿಕೆಟಿಗ, ಇದು ಅತ್ಯಂತ ಕೆಟ್ಟ ಹೊಡೆತವಾಗಿದ್ದು, ವಿಶ್ವ ದರ್ಜೆಯ ಬ್ಯಾಟರ್‌ನಿಂದ ಇಂತಹ ಹೊಡೆತವನ್ನು ಯಾರೂ ನಿರೀಕ್ಷಿಸುವುದಿಲ್ಲ ಎಂದು ಹೇಳಿದರು.
ಪಾಕಿಸ್ತಾನದ ವಿರುದ್ಧದ ಗೆಲುವಿನ ನಂತರ ಭಾರತ +1.821ರ ಉತ್ತಮ ನೆಟ್ ರನ್-ರೇಟ್‌ನಿಂದಾಗಿ ನ್ಯೂಜಿಲೆಂಡ್ ತಂಡವನ್ನು ಹಿಂದಿಕ್ಕಿ 2023ರ ವಿಶ್ವಕಪ್ ಪಾಯಿಂಟ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿತು.
ಮೊದಲ ಇನಿಂಗ್ಸ್‌ನಲ್ಲಿ ಪಾಕಿಸ್ತಾನ ತಂಡವನ್ನು 191 ರನ್‌ಗಳಿಗೆ ಆಲೌಟ್ ಮಾಡಿದ ಭಾರತ, ರೋಹಿತ್ ಮತ್ತು ಶ್ರೇಯಸ್ ಅಯ್ಯರ್ ಅವರ ಅರ್ಧಶತಕದ ನೆರವಿನಿಂದ 7 ವಿಕೆಟ್‌ಗಳು ಬಾಕಿ ಇರುವಂತೆಯೇ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿತು.
ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಗೆಲುವಿನ ನಂತರ, ಭಾರತ ತಂಡ ಇದೀಗ ಬಾಂಗ್ಲಾದೇಶ ತಂಡದ ವಿರುದ್ಧ ತನ್ನ ಗಮನವನ್ನು ಹರಿಸಲಿದೆ. ಗುರುವಾರ, ಅಕ್ಟೋಬರ್ 19ರಂದು ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿವೆ.