Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ICC World Cup 2023: ಬಾಂಗ್ಲಾದೇಶ ತಂಡದ ಆಲ್‌ರೌಂಡ್ ಪ್ರದರ್ಶನ; ಅಫ್ಘಾನಿಸ್ತಾನ ವಿರುದ್ಧ ಭರ್ಜರಿ ಗೆಲುವು

ಶನಿವಾರ, ಅಕ್ಟೋಬರ್ 7ರಂದು ಧರ್ಮಶಾಲಾದ HPCA ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ ಮೂರನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವು ಅಫ್ಘಾನಿಸ್ತಾನ ವಿರುದ್ಧ ಭರ್ಜರಿ ಗೆಲುವಿನ ಮೂಲಕ ಶುಭಾರಂಭ ಮಾಡಿದೆ.

ಬೌಲಿಂಗ್ ಮತ್ತು ಬ್ಯಾಟಿಂಗ್ ವಿಭಾಗದಲ್ಲಿ ಆಲ್‌ರೌಂಡ್ ಪ್ರದರ್ಶನ ನೀಡಿದ ಬಾಂಗ್ಲಾದೇಶ ತಂಡ ಅಫ್ಘಾನಿಸ್ತಾನ ವಿರುದ್ಧ ವಿಕೆಟ್‌ಗಳ ಗೆಲುವು ದಾಖಲಿಸಿದೆ.

ICC World Cup 2023: Bangladesh Defeat Afghanistan By 6 Wickets in 3rd Match

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ 37.2 ಓವರ್‌ಗಳಲ್ಲಿ 156 ರನ್‌ಗಳಿಗೆ ಸರ್ವಪತನ ಕಂಡಿತು. 157 ರನ್‌ಗಳ ಸುಲಭ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ 35 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿ ಗೆಲುವಿನ ಗುರಿ ಮುಟ್ಟಿತು.

ಅಫ್ಘಾನಿಸ್ತಾನ ತಂಡದ ಪರ ಬ್ಯಾಟಿಂಗ್‌ನಲ್ಲಿ ರಹಮಾನುಲ್ಲಾ ಗುರ್ಬಾಜ್ 62 ಎಸೆತಗಳಲ್ಲಿ 4 ಬೌಂಡರಿ ಮತ್ತು 1 ಸಿಕ್ಸರ್ ಸಮೇತ 47 ರನ್ ಗಳಿಸಿದರೆ, ಇಬ್ರಾಹಿಂ ಝದ್ರಾನ್ 25 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 22 ರನ್ ಗಳಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 47 ರನ್‌ಗಳ ಜೊತೆಯಾಟವಾಡಿತು.

ನಂತರ ಬಂದ ರಹಮತ್ ಶಾ 18 ರನ್, ನಾಯಕ ಹಶ್ಮತುಲ್ಲಾ ಶಾಹಿದಿ 18 ರನ್, ನಜಿಬುಲ್ಲಾ ಝದ್ರಾನ್ 5 ರನ್, ಮೊಹಮ್ಮದ್ ನಬಿ 6 ರನ್, ಅಜ್ಮತುಲ್ಲಾ ಒಮರ್ಜಾಯ್ 22 ರನ್, ರಶೀದ್ ಖಾನ್ 9 ರನ್, ಮುಜೀಬ್ ಉರ್ ರೆಹಮಾನ್ 1 ರನ್ ಗಳಿಸಲಷ್ಟೆ ಶಕ್ತರಾದರು.

ICC World Cup 2023: Bangladesh Defeat Afghanistan By 6 Wickets in 3rd Match

ಬೌಲಿಂಗ್‌ನಲ್ಲಿ ಬಾಂಗ್ಲಾದೇಶ ತಂಡದ ಪರ ನಾಯಕ ಶಕೀಬ್ ಅಲ್ ಹಸನ್ 8 ಓವರ್‌ಗಳಲ್ಲಿ 30 ರನ್ ನೀಡಿ 3 ವಿಕೆಟ್ ಪಡೆದರೆ, ಮೆಹದಿ ಹಸನ್ ಮಿರಾಜ್ 9 ಓವರ್‌ಗಳಲ್ಲಿ 25 ರನ್ ನೀಡಿ 3 ವಿಕೆಟ್ ಕಬಳಿಸಿದರು. ಉಳಿದಂತೆ ಶೋರಿಫುಲ್ ಇಸ್ಲಾಂ 2 ವಿಕೆಟ್ ಕಬಳಿಸಿದರೆ, ತಸ್ಕಿನ್ ಅಹ್ಮದ್ ಮತ್ತು ಮುಸ್ತಫಿಜುರ್ ರಹಮಾನ್ ತಲಾ ಒಂದೊಂದು ವಿಕೆಟ್ ಪಡೆದರು.

157 ರನ್‌ಗಳ ಗುರಿ ಪಡೆದು ಬ್ಯಾಟಿಂಗ್ ಆರಂಭಿಸಿದ ಬಾಂಗ್ಲಾದೇಶ ತಂಡದ ತಂಝೀದ್ ಹಸನ್ 5 ರನ್ ಗಳಿಸಿ ಔಟಾದರು. ನಂತರ ಲಿಟ್ಟನ್ ದಾಸ್ ಕೂಡ 13 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಬಳಿಕ ಜೊತೆಗೂಡಿದ ಮೆಹದಿ ಹಸನ್ ಮಿರಾಜ್ ಮತ್ತು ನಜ್ಮುಲ್ ಹೊಸೈನ್ ಶಾಂಟೋ 3ನೇ ವಿಕೆಟ್‌ಗೆ 97 ರನ್‌ಗಳ ಜೊತೆಯಾಟ ನಿರ್ಮಿಸಿ ಗೆಲುವಿನ ಸನಿಹ ಕೊಂಡೊಯ್ದರು.

ಮೆಹದಿ ಹಸನ್ ಮಿರಾಜ್ 73 ಎಸೆತಗಳಲ್ಲಿ 5 ಬೌಂಡರಿಗಳ ಸಹಾಯದಿಂದ 57 ರನ್ ಬಾರಿಸಿ ಔಟಾದರೆ, ಆನಂತರ ನಾಯಕ ಶಕೀಬ್ ಅಲ್ ಹಸನ್ 14 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ನಜ್ಮುಲ್ ಹೊಸೈನ್ ಶಾಂಟೋ 83 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ಸಮೇತ ಅಜೇಯ 59 ರನ್ ಗಳಿಸಿದರೆ, ಮುಶ್ಫಿಕರ್ ರಹೀಂ ಔಟಾಗದೇ 2 ರನ್ ಗಳಿಸಿದರು. ಬೌಲಿಂಗ್‌ನಲ್ಲಿ 3 ವಿಕೆಟ್‌ಗಳ ಜೊತೆಗೆ ಬ್ಯಾಟಿಂಗ್‌ನಲ್ಲಿ 57 ರನ್ ಗಳಿಸಿದ ಮೆಹದಿ ಹಸನ್ ಮಿರಾಜ್ ಪಂದ್ಯಶ್ರೇಷ್ಠ ಆಟಗಾರ ಪ್ರಶಸ್ತಿಗೆ ಭಾಜನರಾದರು.

Story first published: Saturday, October 7, 2023, 16:39 [IST]
Other articles published on Oct 7, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+