Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

World Cup 2023: ನವದೆಹಲಿಯಲ್ಲಿ ಬಾಂಗ್ಲಾದೇಶ vs ಶ್ರೀಲಂಕಾ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ

ಸೋಮವಾರ, ನವೆಂಬರ್ 6ರಂದು ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 38ನೇ ಅನೌಪಚಾರಿಕ ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ಶ್ರೀಲಂಕಾ ತಂಡಗಳು ಸೆಣಸಾಡುತ್ತಿವೆ.

ಟಾಸ್ ಗೆದ್ದ ಬಾಂಗ್ಲಾದೇಶ ತಂಡದ ನಾಯಕ ಶಕೀಬ್ ಅಲ್ ಹಸನ್ ಮೊದಲು ಬೌಲಿಂಗ್ ಮಾಡುವ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಕುಸಲ್ ಮೆಂಡೀಸ್ ನಾಯಕತ್ವದ ಶ್ರೀಲಂಕಾ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ICC World Cup 2023: Bangladesh vs Sri Lanka Match Toss Report, Playing XI, Live Score Details

ದೆಹಲಿಯಲ್ಲಿ ತೀವ್ರ ವಾಯು ಮಾಲಿನ್ಯದ ನಡುವೆ ಉಭಯ ತಂಡಗಳು ಭಾನುವಾರದ ತಮ್ಮ ಅಭ್ಯಾಸದ ಅವಧಿಯನ್ನು ರದ್ದುಗೊಳಿಸಿದ್ದವು.

ಬಾಂಗ್ಲಾದೇಶ ತಂಡವು ಈಗಾಗಲೇ 2023ರ ಐಸಿಸಿ ಏಕದಿನ ವಿಶ್ವಕಪ್‌ನ ಸೆಮಿಫೈನಲ್ ಅರ್ಹತೆಯ ಲೆಕ್ಕಾಚಾರದಿಂದ ಹೊರಬಿದ್ದಿದೆ. ಆದರೆ ಶ್ರೀಲಂಕಾ ತಂಡದ ಸೆಮಿಫೈನಲ್ ಭರವಸೆ ತೂಗುಯ್ಯಾಲೆಯಲ್ಲಿದೆ.

ಶ್ರೀಲಂಕಾ ತಂಡ ಆಡಿದ ಏಳು ಪಂದ್ಯಗಳಿಂದ 2 ಗೆಲುವು ಮತ್ತು 5 ಪಂದ್ಯಗಳ ಸೋಲಿನೊಂದಿಗೆ ಕೇವಲ 4 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ತಮ್ಮ ಉಳಿದ ಎರಡು ಪಂದ್ಯಗಳನ್ನು ಗೆಲ್ಲುವುದರ ಜೊತೆಗೆ ಇತರ ಫಲಿತಾಂಶಗಳ ಲೆಕ್ಕಾಚಾರ ಮತ್ತು ಅದೃಷ್ಟವನ್ನು ಅವಲಂಬಿಸಿದೆ.

ಬಾಂಗ್ಲಾದೇಶ ಮತ್ತು ಶ್ರೀಲಂಕಾ ತಂಡಗಳ ಆಡುವ 11ರ ಬಳಗ

ಶ್ರೀಲಂಕಾ ತಂಡ: ಪಾಥುಮ್ ನಿಸ್ಸಾಂಕ, ಕುಸಲ್ ಪೆರೆರಾ, ಕುಸಾಲ್ ಮೆಂಡಿಸ್ (ನಾಯಕ/ ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವಾ, ಮಹೇಶ್ ತೀಕ್ಷಣ, ದುಷ್ಮಂತ ಚಮೀರ, ಕಸುನ್ ರಜಿತ, ದಿಲ್ಶನ್ ಮಧುಶಂಕ.

ಬಾಂಗ್ಲಾದೇಶ ತಂಡ: ತಂಝಿದ್ ಹಸನ್, ಲಿಟ್ಟನ್ ದಾಸ್, ನಜ್ಮುಲ್ ಹೊಸೈನ್ ಶಾಂಟೊ, ಮುಶ್ಫಿಕರ್ ರಹೀಮ್(ವಿಕೆಟ್ ಕೀಪರ್), ಮಹಮ್ಮದುಲ್ಲಾ, ಶಕೀಬ್ ಅಲ್ ಹಸನ್ (ನಾಯಕ), ತೌಹಿದ್ ಹೃದೋಯ್, ಮೆಹಿದಿ ಹಸನ್ ಮಿರಾಜ್, ತಂಝಿಮ್ ಹಸನ್ ಸಾಕಿಬ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ.

Story first published: Monday, November 6, 2023, 13:44 [IST]
Other articles published on Nov 6, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+