ICC World Cup 2023: ಇಂಗ್ಲೆಂಡ್ vs ಅಫ್ಘಾನಿಸ್ತಾನ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ, ಲೈವ್ ಸ್ಕೋರ್
ಭಾನುವಾರ, ಅಕ್ಟೋಬರ್ 15ರಂದು ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 13ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು ಅಫ್ಘಾನಿಸ್ತಾನ ತಂಡವನ್ನು ಎದುರಿಸುತ್ತಿದೆ.
ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಹಶ್ಮತುಲ್ಲಾ ಶಾಹಿದಿ ನಾಯಕತ್ವದ ಅಫ್ಘಾನಿಸ್ತಾನ ತಂಡವು ಮೊದಲು ಬ್ಯಾಟಿಂಗ್ ಮಾಡಲಿದೆ.

ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ತಂಡವು ವಿಶ್ವಕಪ್‌ನ ಆರಂಭಿಕ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಏಳು ವಿಕೆಟ್‌ಗಳ ಸೋಲು ಅನುಭವಿಸಿತು. ನಂತರ ಪುಟಿದೆದ್ದು, ಬಾಂಗ್ಲಾದೇಶ ತಂಡವನ್ನು 137 ರನ್‌ಗಳಿಂದ ಸೋಲಿಸಿತು.
ಮತ್ತೊಂದೆಡೆ, ಅಫ್ಘಾನಿಸ್ತಾನ ತಂಡ ತಾನು ಆಡಿದ ಮೊದಲ ಎರಡು ಪಂದ್ಯಗಳಲ್ಲಿ ಸೋತಿದೆ ಮತ್ತು ತನ್ನ ಅಂಕಗಳ ಪಟ್ಟಿಯನ್ನು ಇನ್ನೂ ತೆರೆಯಬೇಕಾಗಿದೆ. ನೆಚ್ಚಿನ ತಂಡವಾಗಿ ಕಣಕ್ಕಿಳಿಯಲಿರುವ ಇಂಗ್ಲೆಂಡ್ ಮತ್ತೊಂದು ಆರಾಮದಾಯಕ ಗೆಲುವಿನ ಗುರಿ ಹೊಂದಿದೆ.
ಇಂಗ್ಲೆಂಡ್ vs ಅಫ್ಘಾನಿಸ್ತಾನ ತಂಡಗಳ ಆಡುವ 11ರ ಬಳಗ
ಅಫ್ಘಾನಿಸ್ತಾನ ತಂಡ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ಮೊಹಮ್ಮದ್ ನಬಿ, ಮುಜೀಬ್-ಉರ್-ರೆಹಮಾನ್, ರಶೀದ್ ಖಾನ್, ಫಜಲ್ಹಕ್ ಫಾರೂಕಿ, ನವೀನ್-ಉಲ್-ಹಕ್.
ಇಂಗ್ಲೆಂಡ್ ತಂಡ: ಡೇವಿಡ್ ಮಲಾನ್, ಜಾನಿ ಬೈರ್‌ಸ್ಟೋವ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ/ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್, ರೀಸ್ ಟೋಪ್ಲೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications