ಇಂಗ್ಲೆಂಡ್ vs ನೆದರ್ಲ್ಯಾಂಡ್ಸ್; ಕೊನೆಯ ಸ್ಥಾನಿಗಳ ಪೈಪೋಟಿಯಲ್ಲಿ ಗೆಲ್ಲುವರಾರು?; ಟಾಸ್ ವರದಿ, ಆಡುವ 11ರ ಬಳಗ
ಬುಧವಾರ, ನವೆಂಬರ್ 8ರಂದು ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 40ನೇ ಅನೌಪಚಾರಿಕ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ನೆದರ್ಲ್ಯಾಂಡ್ಸ್ ತಂಡಗಳು ಸೆಣಸಾಡುತ್ತಿವೆ.
ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡರು. ಹೀಗಾಗಿ ಸ್ಕಾಟ್ ಎಡ್ವರ್ಡ್ಸ್ ನಾಯಕತ್ವದ ನೆದರ್ಲ್ಯಾಂಡ್ಸ್ ತಂಡ ಮೊದಲು ಫೀಲ್ಡಿಂಗ್ ಮಾಡಲಿದೆ.

ಉಭಯ ತಂಡಗಳು ಈಗಾಗಲೇ 2023ರ ಐಸಿಸಿ ಏಕದಿನ ವಿಶ್ವಕಪ್‌ನ ಸೆಮಿಫೈನಲ್ ರೇಸ್‌ನಿಂದ ಹೊರಬಿದ್ದಿದ್ದು, ಕೊನೆಯ ಪಂದ್ಯಗಳಲ್ಲಿ ಗೆಲುವಿನೊಂದಿಗೆ ಅಭಿಯಾನ ಮುಗಿಸುಲು ಬಯಸಿವೆ.
ಇದೇ ವೇಳೆ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗೆ ಅರ್ಹತೆ ಪಡೆಯಲು ಪಣತೊಟ್ಟು ಆಡುತ್ತಿರುವ ಕಾರಣ, ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯ ಮಹತ್ವದ್ದಾಗಿದೆ.

ನೆದರ್ಲ್ಯಾಂಡ್ಸ್ ಮತ್ತು ಪಾಕಿಸ್ತಾನ ವಿರುದ್ಧದ ವಿರುದ್ಧ ಗೆಲುವುಗಳು ಇಂಗ್ಲೆಂಡ್ ತಂಡಕ್ಕೆ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಮುಖ್ಯ ಡ್ರಾದಲ್ಲಿ ಸ್ಥಾನವನ್ನು ಖಾತರಿಪಡಿಸಲು ಸಾಕಾಗಲಿವೆ.
ಮತ್ತೊಂದೆಡೆ, ನೆದರ್ಲ್ಯಾಂಡ್ಸ್ ತಂಡವು ಮತ್ತೊಂದು ಆಘಾತಕಾರಿ ಫಲಿತಾಂಶ ನೀಡಲು ಎದುರು ನೋಡುತ್ತಿದೆ. ಅಲ್ಲದೆ ಇಂಗ್ಲೆಂಡ್ ವಿರುದ್ಧದ ಗೆಲುವು ಪಾಕಿಸ್ತಾನದಲ್ಲಿ ನಡೆಯುವ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಸ್ಥಾನ ಪಡೆದುಕೊಳ್ಳುವ ಭರವಸೆಯನ್ನು ಹೆಚ್ಚಿಸುತ್ತದೆ.
ಇಂಗ್ಲೆಂಡ್ ಮತ್ತು ನೆದರ್ಲ್ಯಾಂಡ್ಸ್ ತಂಡಗಳು ಆಡುವ 11ರ ಬಳಗ
ಇಂಗ್ಲೆಂಡ್ ತಂಡ: ಜಾನಿ ಬೈರ್‌ಸ್ಟೋವ್, ಡೇವಿಡ್ ಮಲಾನ್, ಜೋ ರೂಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್(ನಾಯಕ/ವಿಕೆಟ್ ಕೀಪರ್), ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಆದಿಲ್ ರಶೀದ್, ಗಸ್ ಅಟ್ಕಿನ್ಸನ್.
ನೆದರ್ಲ್ಯಾಂಡ್ಸ್ ತಂಡ: ವೆಸ್ಲಿ ಬ್ಯಾರೆಸಿ, ಮ್ಯಾಕ್ಸ್ ಓ'ಡೌಡ್, ಕಾಲಿನ್ ಅಕರ್ಮನ್, ಸೈಬ್ರಾಂಡ್ ಎಂಗಲ್ಬ್ರೆಕ್ಟ್, ಸ್ಕಾಟ್ ಎಡ್ವರ್ಡ್ಸ್(ನಾಯಕ/ವಿಕೆಟ್ ಕೀಪರ್), ಬಾಸ್ ಡಿ ಲೀಡೆ, ತೇಜ ನಿಡಮನೂರು, ಲೋಗನ್ ವ್ಯಾನ್ ಬೀಕ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications