World Cup 2023 Final: ಫೈನಲ್‌ನಲ್ಲಿ ಕೈಕೊಟ್ಟ ಭಾರತೀಯ ಬ್ಯಾಟರ್‌ಗಳು; ಆಸ್ಟ್ರೇಲಿಯಾ ತಂಡಕ್ಕೆ ಸಾಧಾರಣ ಗುರಿ
ಭಾನುವಾರ, ನವೆಂಬರ್ 19ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಆತಿಥೇಯ ಭಾರತ ತಂಡದ ಬ್ಯಾಟರ್‌ಗಳು ಕಳಪೆ ಪ್ರದರ್ಶನ ನೀಡಿದ ಕಾರಣ, ಎದುರಾಳಿ ಆಸ್ಟ್ರೇಲಿಯಾ ತಂಡದ ವಿರುದ್ಧ ಸಾಧಾರಣ ಮೊತ್ತ ಕಲೆಹಾಕಿದೆ.
ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣದಲ್ಲಿ 1.32 ಲಕ್ಷ ಪ್ರೇಕ್ಷಕರ ಮಧ್ಯೆ ಕಣಕ್ಕಿಳಿದಿರುವ ಉಭಯ ತಂಡಗಳು ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ ಮುಖಾಮುಖಿಯಾಗಿವೆ.

ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 50 ಓವರ್‌ಗಳಲ್ಲಿ 240 ರನ್‌ಗಳಿಗೆ ಆಲೌಟ್ ಆಗಿದ್ದು, ಆಸ್ಟ್ರೇಲಿಯಾ ತಂಡಕ್ಕೆ 241 ರನ್‌ಗಳ ಗುರಿ ನೀಡಲಾಗಿದೆ.
ನಿಧಾನಗತಿಯ ಪಿಚ್‌ನಲ್ಲಿ ಭಾರತದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ಮೊದಲ ವಿಕೆಟ್‌ಗೆ ಉತ್ತಮ ಆರಂಭ ನೀಡುವಲ್ಲಿ ವಿಫಲರಾದರು.
ಒಂದು ಕಡೆ ಆಕ್ರಮಣಕಾರಿ ಆಟ ನೀಡುತ್ತಿದ್ದ ರೋಹಿತ್ ಶರ್ಮಾ ವೇಗದ ರನ್‌ಗಳಿಗೆ ಮುಂದಾಗಿದ್ದರು. ಆದರೆ, 4 ರನ್ ಗಳಿಸಿದ್ದ ಶುಭ್ಮನ್ ಗಿಲ್ ಬೇಡದ ಶಾಟ್ ಬಾರಿಸಿ ವಿಕೆಟ್ ಒಪ್ಪಿಸಿದರು.
ಬಳಿಕ ಬಂದ ವಿರಾಟ್ ಕೊಹ್ಲಿ ಅವರು ರೋಹಿತ್ ಶರ್ಮಾ ಜೊತೆಗೂಡಿ 46 ರನ್‌ಗಳ ಜೊತೆಯಾಟ ನೀಡಿದರು. ಈ ವೇಳೆ ದೊಡ್ಡ ಶಾಟ್‌ಗೆ ಮುಂದಾದ ರೋಹಿತ್ ಶರ್ಮಾ 31 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಮೂಲಕ 47 ರನ್ ಗಳಿಸಿದ್ದಾಗ ಔಟಾದರು.

ನಂತರ ಬಂದ ಶ್ರೇಯಸ್ ಅಯ್ಯರ್ ನಿರ್ಣಾಯಕ ಪಂದ್ಯದಲ್ಲಿ ವಿಕೆಟ್ ನೀಡಿದರು. ಕೇವಲ 4 ರನ್ ಗಳಿಸಿದ್ದಾಗ ವಿಕೆಟ್ ಕೀಪರ್‌ಗೆ ಕ್ಯಾಚ್ ನೀಡಿದರು. ಆಗ ಭಾರತ ತಂಡದ ಮೊತ್ತ 10.2 ಓವರ್‌ಗಳಲ್ಲಿ 81 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿತ್ತು.
ಆಗ ಜೊತೆಯಾದ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಕುಸಿದಿದ್ದ ತಂಡಕ್ಕೆ ನೆರವಾಗಲು ಪ್ರಯತ್ನಿಸಿದರು. ಈ ಜೋಡಿ 4ನೇ ವಿಕೆಟ್‌ಗೆ 67 ರನ್‌ಗಳ ಜೊತೆಯಾಟ ನೀಡಿದರು. ಆಗ ವಿರಾಟ್ ಕೊಹ್ಲಿ 63 ಎಸೆತಗಳಲ್ಲಿ 4 ಬೌಂಡರಿಗಳ ಸಮೇತ 54 ರನ್ ಗಳಿಸಿ ಬೌಲ್ಡ್ ಆದರು.
ಇನ್ನು ಫೈನಲ್‌ನಲ್ಲಿ ಔಟಾಗುವ ಮುನ್ನ ಕೆಎಲ್ ರಾಹುಲ್ 107 ಎಸೆತಗಳಲ್ಲಿ 1 ಬೌಂಡರಿ ನೆರವಿನಿಂದ 66 ರನ್ ಗಳಿಸಿದರು. ಉಳಿದಂತೆ ರವೀಂದ್ರ ಜಡೇಜಾ 9 ರನ್, ಸೂರ್ಯಕುಮಾರ್ ಯಾದವ್ 18 ರನ್, ಮೊಹಮ್ಮದ್ ಶಮಿ 6 ರನ್, ಜಸ್ಪ್ರೀತ್ ಬುಮ್ರಾ 1 ರನ್, ಕುಲದೀಪ್ ಯಾದವ್ 10 ರನ್ ಮತ್ತು ಮೊಹಮ್ಮದ್ ಸಿರಾಜ 9 ರನ್ ಗಳಿಸಿ ತಂಡದ ಮೊತ್ತ 240ರ ಗಡಿ ತಲುಪಲು ಸಹಾಯವಾದರು.
ಬೌಲಿಂಗ್‌ನಲ್ಲಿ ಆಸ್ಟ್ರೇಲಿಯಾ ತಂಡದ ಪರ ಮಿಚೆಲ್ ಸ್ಟಾರ್ಕ್ 10 ಓವರ್‌ಗಳಲ್ಲಿ 55 ರನ್ ನೀಡಿ 3 ವಿಕೆಟ್ ಪಡೆದರೆ, ಪ್ಯಾಟ್ ಕಮ್ಮಿನ್ಸ್ 10 ಓವರ್‌ಗಳಲ್ಲಿ 34 ರನ್ ನೀಡಿ 2 ವಿಕೆಟ್ ಕಬಳಿಸಿದರು. ಜೋಶ್ ಹೇಜಲ್‌ವುಡ್ 10 ಓವರ್‌ಗಳಲ್ಲಿ 60 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಗ್ಲೆನ್ ಮ್ಯಾಕ್‌ವೆಲ್ ಮತ್ತು ಆಡಮ್ ಝಂಪಾ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications