ಭಾನುವಾರ, ನವೆಂಬರ್ 19ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ ಅಂತಿಮ ಹಾಗೂ ಫೈನಲ್ ಪಂದ್ಯದಲ್ಲಿ ಆತಿಥೇಯ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ತಂಡಗಳು ಪ್ರತಿಷ್ಠಿತ ಐಸಿಸಿ ಪ್ರಶಸ್ತಿಗಾಗಿ ಸೆಣಸಾಡುತ್ತಿವೆ.
ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣದಲ್ಲಿ 1.32 ಲಕ್ಷ ಪ್ರೇಕ್ಷಕರ ಮಧ್ಯೆ ಕಣಕ್ಕಿಳಿಯಲಿರುವ ಉಭಯ ತಂಡಗಳು ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ ಮುಖಾಮುಖಿಯಾಗಿವೆ.

ಫೈನಲ್ ಪಂದ್ಯದ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.
12 ವರ್ಷಗಳ ನಂತರ, ತವರಿನಲ್ಲಿ ಮತ್ತೊಂದು ಏಕದಿನ ವಿಶ್ವಕಪ್ ಪ್ರಶಸ್ತಿ ಎತ್ತಿ ಹಿಡಿಯಲು ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಎದುರು ನೋಡುತ್ತಿದ್ದರೆ, 8 ವರ್ಷಗಳ ಬಳಿಕ ಏಕದಿನ ವಿಶ್ವಕಪ್‌ಗಾಗಿ ಕಾಂಗರೂ ಪಡೆ ಪ್ರಯತ್ನಿಸಲಿದೆ.

ಈ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸುವಾಗ ಭಾರತ ತಂಡದ ಆಡುವ 11ರ ಬಳಗದಲ್ಲಿ ಯಾವುದೇ ಬದಲಾವಣೆ ಮಾಡದೆ ಅದೇ ತಂಡವನ್ನು ಕಣಕ್ಕಿಳಿಸಿದೆ.
ಇನ್ನು ವಿಶ್ವದ ಎರಡು ಬಲಾಢ್ಯ ಕ್ರಿಕೆಟ್ ತಂಡಗಳ ನಡುವಿನ ಮುಖಾಮುಖಿಗೂ ಮುನ್ನ, ಆಸ್ಟ್ರೇಲಿಯಾ ತಂಡ ಈವರೆಗೆ ಒಟ್ಟು ಐದು (1987, 1999, 2003, 2007, 2015) ಏಕದಿನ ವಿಶ್ವಕಪ್ ಟ್ರೋಫಿಗಳನ್ನು ಗೆದ್ದಿದೆ. ಇದೇ ವೇಳೆ ಭಾರತ ತಂಡವು 1983 ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಪ್ರಶಸ್ತಿ ಎತ್ತಿಹಿಡಿದಿದೆ.
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹೇಝಲ್‌ವುಡ್.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.