Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

World Cup 2023: ಭಾರತದ ಬೌಲರ್‌ಗಳೆದುರು ಆಸ್ಟ್ರೇಲಿಯಾ ಬ್ಯಾಟರ್‌ಗಳ ಆಟ ಬಂದ್; ಭಾರತಕ್ಕೆ ಸಾಧಾರಣ ಗುರಿ

ಭಾನುವಾರ, ಅಕ್ಟೋಬರ್ 8ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ ಐದನೇ ಪಂದ್ಯದಲ್ಲಿ ಭಾರತ ತಂಡದ ಎದುರು ಆಸ್ಟ್ರೇಲಿಯಾ ತಂಡ ಸಾಧಾರಣ ಮೊತ್ತ ಕಲೆಹಾಕಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡ 49.3 ಓವರ್‌ಗಳಲ್ಲಿ 199 ರನ್‌ಗಳಿಗೆ ಸರ್ವಪತನ ಕಂಡಿತು.

ICC World Cup 2023: India Need 200 Runs To Win Against Australia in 5th Match

ಆಸ್ಟ್ರೇಲಿಯಾ ಪರ ಇನ್ನಿಂಗ್ಸ್ ಆರಂಭಿಸಿದ ಮಿಚೆಲ್ ಮಾರ್ಷ್ ಮತ್ತು ಡೇವಿಡ್ ವಾರ್ನರ್ ಕೇವಲ 5 ರನ್‌ಗಳ ಜೊತೆಯಾಟ ನೀಡಿದರು. ಜಸ್ಪ್ರೀತ್ ಬುಮ್ರಾ ಎಸೆದ ಮೂರನೇ ಓವರ್‌ನ 2ನೇ ಎಸೆತದಲ್ಲಿ ಮಿಚೆಲ್ ಮಾರ್ಷ್ ಅವರು ಸ್ಲಿಪ್‌ನಲ್ಲಿ ವಿರಾಟ್ ಕೊಹ್ಲಿ ತೆಗೆದುಕೊಂಡ ಅದ್ಭುತ ಕ್ಯಾಚ್‌ಗೆ ಔಟಾದರು.

ನಂತರ ಜೊತೆಗೂಡಿದ ಸ್ಟೀವನ್ ಸ್ಮಿತ್ ಮತ್ತು ಡೇವಿಡ್ ವಾರ್ನರ್ 2ನೇ ವಿಕೆಟ್‌ಗೆ 69 ರನ್‌ಗಳ ಜೊತೆಯಾಟ ನೀಡಿದರು. ತಂಡದ ಮೊತ್ತ 74 ರನ್‌ಗಳಾಗಿದ್ದಾಗ ಡೇವಿಡ್ ವಾರ್ನರ್ ಕುಲದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸಿದರು. 52 ಎಸೆತಗಳನ್ನು ಎದುರಿಸಿದ ಡೇವಿಡ್ ವಾರ್ನರ್ 6 ಬೌಂಡರಿ ಸಮೇತ 41 ರನ್ ಗಳಿಸಿದರು.

ನಂತರ ಸ್ಟೀವನ್ ಸ್ಮಿತ್ 71 ಎಸೆತಗಳಲ್ಲಿ 5 ಬೌಂಡರಿಗಳ ಸಹಾಯದಿಂದ 46 ಗಳಿಸಿದ್ದ ವೇಳೆ ರವೀಂದ್ರ ಜಡೇಜಾ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆದರು. ಇನ್ನು ಮಾರ್ನಸ್ ಲ್ಯಾಬುಸ್ಚಾಗ್ನೆ 41 ಎಸೆತಗಳಲ್ಲಿ 1 ಬೌಂಡರಿ ನೆರವಿನಿಂದ 27 ರನ್ ಗಳಿಸಿ ಪೆವಿಲಿಯನ್ ಸೇರಿದರು.

ICC World Cup 2023: India Need 200 Runs To Win Against Australia in 5th Match

ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ 25 ಎಸೆತಗಳಲ್ಲಿ 15 ರನ್ ಗಳಿಸಿದರೆ, ಅಲೆಕ್ಸ್ ಕ್ಯಾರಿ ಸೊನ್ನೆ ಸುತ್ತಿದರು. ನಾಯಕ ಪ್ಯಾಟ್ ಕಮ್ಮಿನ್ಸ್ ಒಂದು ಸಿಕ್ಸ್ ಮತ್ತು ಒಂದು ಬೌಂಡರಿ ಮೂಲಕ 15 ರನ್ ಗಳಿಸಿ ಔಟಾದರು. ಕೊನೆಯಲ್ಲಿ ಮಿಚೆಲ್ ಸ್ಟಾರ್ಕ್ 28 ರನ್ ಗಳಿಸಿದರೆ, ಆಡಮ್ ಝಂಪಾ 6 ರನ್ ಗಳಿಸಿದರು.

ಬೌಲಿಂಗ್‌ನಲ್ಲಿ ಭಾರತ ತಂಡದ ಪರ ರವೀಂದ್ರ ಜಡೇಜಾ 10 ಓವರ್‌ಗಳಲ್ಲಿ ಕೇವಲ 28 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ಕುಲದೀಪ್ ಯಾದವ್ 10 ಓವರ್‌ಗಳಲ್ಲಿ 42 ರನ್ ನೀಡಿ 2 ವಿಕೆಟ್ ಪಡೆದರು. ಜಸ್ಪ್ರೀತ್ ಬುಮ್ರಾ 10 ಓವರ್‌ಗಳಲ್ಲಿ 34 ರನ್ ನೀಡಿ 2 ವಿಕೆಟ್ ಪಡೆದರು.

ಉಳಿದಂತೆ ರವಿಚಂದ್ರನ್ ಅಶ್ವಿನ್ 10 ಓವರ್‌ಗಳಲ್ಲಿ 34 ರನ್ ನೀಡಿ 1 ವಿಕೆಟ್ ಕಿತ್ತರೆ, ಹಾರ್ದಿಕ್ ಪಾಂಡ್ಯ 3 ಓವರ್‌ಗಳಲ್ಲಿ 25 ರನ್ ನೀಡಿ ಒಂದು ವಿಕೆಟ್ ಮತ್ತು ಮೊಹಮ್ಮದ್ ಸಿರಾಜ್ 6.3 ಓವರ್‌ಗಳಲ್ಲಿ 26 ರನ್ ನೀಡಿ 1 ವಿಕೆಟ್ ಪಡೆದರು.

Story first published: Sunday, October 8, 2023, 18:11 [IST]
Other articles published on Oct 8, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+