Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

World Cup 2023: ಶಾಹಿದಿ, ಅಜ್ಮತುಲ್ಲಾ ಅರ್ಧಶತಕ; ಭಾರತಕ್ಕೆ ಸವಾಲಿನ ಗುರಿ ನೀಡಿದ ಅಫ್ಘಾನಿಸ್ತಾನ

ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಬುಧವಾರ, ಆಕ್ಟೋಬರ್ 11ರಂದು ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 9ನೇ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಅಫ್ಘಾನಿಸ್ತಾನ ಸವಾಲಿನ ಮೊತ್ತವನ್ನು ಕಲೆಹಾಕಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ ಹಶ್ಮತುಲ್ಲಾ ಶಾಹಿದಿ, ಅಜ್ಮತುಲ್ಲಾ ಒಮರ್ಜಾಯ್ ಅವರ ಅರ್ಧಶತಕದ ನೆರವಿನಿಂದ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 272 ರನ್ ಗಳಿಸಿದ್ದು, ಭಾರತಕ್ಕೆ 273 ರನ್‌ಗಳ ಸವಾಲಿನ ಮೊತ್ತದ ಗುರಿ ನೀಡಿದೆ.

ICC World Cup 2023: India Need 273 Runs To Win Against Afghanistan In Match No 9

ಅಫ್ಘಾನಿಸ್ತಾನದ ಇನ್ನಿಂಗ್ಸ್ ಆರಂಭಿಸಿದ ರಹಮಾನುಲ್ಲಾ ಗುರ್ಬಾಜ್ ಮತ್ತು ಇಬ್ರಾಹಿಂ ಝದ್ರಾನ್ ಮೊದಲ ವಿಕೆಟ್‌ಗೆ 32 ರನ್‌ಗಳ ಜೊತೆಯಾಟ ನೀಡಿದರು. ರಹಮಾನುಲ್ಲಾ ಗುರ್ಬಾಜ್ 28 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ಮೂಲಕ 21 ರನ್ ಗಳಿಸಿದರೆ, ಇಬ್ರಾಹಿಂ ಝದ್ರಾನ್ 28 ಎಸೆತಗಳಲ್ಲಿ 4 ಬೌಂಡರಿ ಮೂಲಕ 22 ರನ್ ಬಾರಿಸಿದರು.

ನಂತರ ಬಂದ ರಹಮತ್ ಶಾ 22 ಎಸೆತಗಳಲ್ಲಿ 16 ರನ್, ನಾಯಕ ಹಶ್ಮತುಲ್ಲಾ ಶಾಹಿದಿ 88 ಎಸೆತಗಳಲ್ಲಿ 8 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 80 ರನ್ ಬಾರಿಸಿದರು. ಅಜ್ಮತುಲ್ಲಾ ಒಮರ್ಜಾಯ್ 69 ಎಸೆತಗಳಲ್ಲಿ 2 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ 62 ರನ್ ಗಳಿಸಿದರು.

ಮೊಹಮ್ಮದ್ ನಬಿ 27 ಎಸೆತಗಳಲ್ಲಿ 19 ರನ್ ಗಳಿಸಿದರೆ, ನಜೀಬುಲ್ಲಾ 2 ರನ್, ರಶೀದ್ ಖಾನ್ 16 ರನ್, ಮಜೀಬ್ ಉರ್ ರೆಹಮಾನ 10 ರನ್, ನವೀನ್ ಉಲ್ ಹಕ್ 9 ರನ್ ಗಳಿಸಿದರು.

ICC World Cup 2023: India Need 273 Runs To Win Against Afghanistan In Match No 9

ಭಾರತದ ಪರ ಬೌಲಿಂಗ್‌ನಲ್ಲಿ ಜಸ್ಪ್ರೀತ್ ಬುಮ್ರಾ 10 ಓವರ್‌ಗಳಲ್ಲಿ 39 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ಹಾರ್ದಿಕ್ ಪಾಂಡ್ಯ 7 ಓವರ್‌ಗಳಲ್ಲಿ 43 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಶಾರ್ದೂಲ್ ಠಾಕೂರ್ ಮತ್ತು ಕುಲದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು.

Story first published: Wednesday, October 11, 2023, 18:08 [IST]
Other articles published on Oct 11, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+