World Cup 2023: ಕೊಹ್ಲಿ ತವರಿನಂಗಳದಲ್ಲಿ ಭಾರತ vs ಅಫ್ಘಾನಿಸ್ತಾನ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
ಬುಧವಾರ, ಆಕ್ಟೋಬರ್ 11ರಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 9ನೇ ಪಂದ್ಯದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳು ಸೆಣಸಾಡುತ್ತಿವೆ.
ಟಾಸ್ ಗೆದ್ದ ಅಫ್ಘಾನಿಸ್ತಾನ ತಂಡದ ನಾಯಕ ಹಶ್ಮತುಲ್ಲಾ ಶಾಹಿದಿ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಮೊದಲು ಬೌಲಿಂಗ್ ಮಾಡಲಿದೆ.
ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರ ತವರಿನಂಗಳದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳ ನಡುವಿನ ವಿಶ್ವಕಪ್ ಪಂದ್ಯ ನಡೆಯುತ್ತಿದ್ದು, ಅವರ ಮತ್ತ ತಂಡದ ಮೇಲೆ ನಿರೀಕ್ಷೆಗಳು ಅಪಾರವಾಗಿವೆ.

ಆಸ್ಟ್ರೇಲಿಯಾ ವಿರುದ್ಧ ತನ್ನ ಹಿಂದಿನ ಪಂದ್ಯದಲ್ಲಿ 200 ರನ್‌ಗಳ ಬೆನ್ನಟ್ಟಿದ ಭಾರತ ತಮಡ ಆರು ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಅದ್ಭುತ ಶುಭಾರಂಭ ಮಾಡಿತು. ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಅವರ ಅರ್ಧಶತಕಗಳು ತಂಡದ ಗೆಲುವಿಗೆ ನೆರವಾದವು.
ಮತ್ತೊಂದೆಡೆ, ಬಾಂಗ್ಲಾದೇಶ ವಿರುದ್ಧದ ತನ್ನ ಆರಂಭಿಕ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡವು ಹೀನಾಯಯವಾಗಿ ಸೋಲು ಕಂಡಿದ್ದು, ಗೆಲುವಿನ ಹಳಿಗೆ ಮರಳಲು ಪ್ರಯತ್ನಿಸಲಿದೆ.
ನಿರೀಕ್ಷೆಯಂತೆ ಡೆಂಗ್ಯೂ ಜ್ವರದಿಂದ ಬಳಲುತ್ತಿರುವ ಶುಭ್ಮನ್ ಗಿಲ್ ಭಾರತ ತಂಡಕ್ಕೆ ಪುನರಾಗಮನ ಮಾಡಲು ವಿಫಲರಾಗಿದ್ದಾರೆ. ಹೀಗಾಗಿ ನಾಯಕ ರೋಹಿತ್ ಶರ್ಮಾ ಜೊತೆ ಇಶಾನ್ ಕಿಶನ್ ಇನ್ನಿಂಗ್ಸ್ ತೆರೆಯಲಿದ್ದಾರೆ.
ಇನ್ನು ಭಾರತ ತಂಡದಲ್ಲಿ ಒಂದು ಬದಲಾವಣೆಯಾಗಿದ್ದು, ಕಳೆದ ಪಂದ್ಯದಲ್ಲಿ ಆಡಿದ್ದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರನ್ನು ಈ ಪಂದ್ಯದಿಂದ ಹೊರಗಿಡಲಾಗಿದೆ. ಅವರ ಬದಲಾಗಿ ವೇಗಿ ಶಾರ್ದೂಲ್ ಠಾಕೂರ್ ಅವರನ್ನು ಆಡುವ 11ರ ಬಳಗದಲ್ಲಿ ಸೇರಿಸಿಕೊಳ್ಳಲಾಗಿದೆ.
ಭಾರತ vs ಅಫ್ಘಾನಿಸ್ತಾನ ತಂಡಗಳ ಆಡುವ 11ರ ಬಳಗ
ಅಫ್ಘಾನಿಸ್ತಾನ ತಂಡ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನವೀನ್-ಉಲ್-ಹಕ್, ಫಜಲ್ಹಕ್ ಫಾರೂಕಿ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications