World Cup 2023: ಕೋಲ್ಕತ್ತಾದಲ್ಲಿ ಭಾರತ vs ದಕ್ಷಿಣ ಆಫ್ರಿಕಾ ರೋಚಕ ಸೆಣಸಾಟ; ಟಾಸ್ ವರದಿ, ಆಡುವ 11ರ ಬಳಗ
ಭಾನುವಾರ, ನವೆಂಬರ್ 5ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆಯತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 37ನೇ ಹೈ-ವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ತೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡ ಮೊದಲು ಫೀಲ್ಡಿಂಗ್ ಮಾಡಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಈಗಾಗಲೇ 2023ರ ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ತಮ್ಮ ಸ್ಥಾನಗಳನ್ನು ಕಾಯ್ದಿರಿಸಿಕೊಂಡಿವೆ. 10 ತಂಡಗಳ ಅಂಕಪಟ್ಟಿಯಲ್ಲಿ ಪ್ರಸ್ತುತ ಕ್ರಮವಾಗಿ ಮೊದಲ ಮತ್ತು 2ನೇ ಸ್ಥಾನದಲ್ಲಿವೆ.
ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಇಲ್ಲಿಯವರೆಗೆ ಪಂದ್ಯಾವಳಿಯಲ್ಲಿ ಅಜೇಯ ತಂಡವಾಗಿ ಮುನ್ನಗ್ಗುತ್ತಿದೆ ಮತ್ತು ತೆಂಬಾ ಬವುಮಾ ಪಡೆಯ ವಿರುದ್ಧ ತಮ್ಮ ಅಜೇಯ ದಾಖಲೆಯನ್ನು ಉಳಿಸಿಕೊಳ್ಳಲು ಎದುರು ನೋಡುತ್ತಿದೆ.
ಇನ್ನು ಈಡನ್ ಗಾರ್ಡನ್ಸ್‌ನಲ್ಲಿ ಆತಿಥೇಯ ತಂಡವನ್ನು ಎದುರಿಸಲು ಹರಿಣ ಪಡೆಯು ಸಹ ಉತ್ಸುಕವಾಗಿದೆ ಮತ್ತು ಪಂದ್ಯಾವಳಿಯಲ್ಲಿ ಆಡಿದ ಒಟ್ಟು 7 ಪಂದ್ಯಗಳಲ್ಲಿ ಆರು ಗೆಲುವು, ಒಂದು ಸೋಲಿನೊಂದಿಗೆ ಬಲಿಷ್ಠ ತಂಡವಾಗಿ ಹೊರಹೊಮ್ಮಿದೆ.
ಈ ಪಂದ್ಯಕ್ಕೂ ಮುನ್ನ ಭಾರತ ತಂಡವು ಹಿನ್ನಡೆ ಅನುಭವಿಸಿದ್ದು, ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಪಂದ್ಯಾವಳಿಯಿಂದಲೇ ಹೊರಬಿದ್ದಿದ್ದಾರೆ. ಹೀಗಾಗಿ ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ, ಆಡುವ 11ರ ಬಳಗದಲ್ಲಿ ಸ್ಥಾನ ಪಡೆದಿಲ್ಲ.
ಭಾರತ ಮತ್ತು ದಕ್ಷಿಣ ಆಫ್ರಿಕಾ ಆಡುವ 11ರ ಬಳಗ
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಹೆನ್ರಿಚ್ ಕ್ಲಾಸೆನ್, ಮಾರ್ಕೊ ಜಾನ್ಸೆನ್, ಕಗಿಸೊ ರಬಾಡ, ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ, ತಬ್ರೇಜ್ ಶಮ್ಸಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications