World Cup 2023: ಮಿಂಚಿದ ವಿಲ್ ಯಂಗ್, ರಚಿನ್, ಸ್ಯಾಂಟ್ನರ್; ನೆದರ್ಲ್ಯಾಂಡ್ಸ್ ವಿರುದ್ಧ ನ್ಯೂಜಿಲೆಂಡ್ ಗೆಲುವು
ಸೋಮವಾರ, ಅಕ್ಟೋಬರ್ 9ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ ಆರನೇ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು ನೆದರ್ಲ್ಯಾಂಡ್ಸ್ ವಿರುದ್ಧ 99 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 322 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. 323 ರನ್‌ಗಳ ಗುರಿ ಬೆನ್ನಟ್ಟಿದ ನೆದರ್ಲ್ಯಾಂಡ್ಸ್ 46.3 ಓವರ್‌ಗಳಲ್ಲಿ 223 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲು ಅನುಭವಿಸಿತು.

323 ರನ್‌ಗಳ ಚೇಸಿಂಗ್‌ನಲ್ಲಿ ನೆದರ್ಲ್ಯಾಂಡ್ಸ್ ತಂಡದ ಪರ ಆರಂಭಿಕರಾದ ವಿಕ್ರಮಜಿತ್ ಸಿಂಗ್ 12 ರನ್ ಮತ್ತು ಮ್ಯಾಕ್ಸ್ ಓ'ಡೌಡ್ 16 ರನ್ ಗಳಿಸಿದರು.
ನಂತರ ಬಂದ ಕಾಲಿನ್ ಅಕರ್ಮನ್ 73 ಎಸೆತಗಳಲ್ಲಿ 5 ಬೌಂಡರಿ ಸಮೇತ 69 ರನ್ ಗಳಿಸಿದರು. ಬಾಸ್ ಡಿ ಲೀಡೆ 18 ರನ್, ತೇಜ ನಿಡಮನೂರು 21 ರನ್ ಗಳಿಸಿದರೆ, ನಾಯಕ ಸ್ಕಾಟ್ ಎಡ್ವರ್ಡ್ಸ್ 30 ರನ್, ಸೈಬ್ರಾಂಡ್ ಎಂಗೆಲ್‌ಬ್ರೆಕ್ಟ್ 29 ರನ್ ಬಾರಿಸಿದರು.
ಇನ್ನು ರೋಲೋಫ್ ವ್ಯಾನ್ ಡೆರ್ ಮೆರ್ವೆ 1 ರನ್, ರಿಯಾನ್ ಕ್ಲೈನ್ 8 ರನ್, ಆರ್ಯನ್ ದತ್ 11 ರನ್ ಮತ್ತು ಪಾಲ್ ವ್ಯಾನ್ ಮೀಕೆರೆನ್ 4 ರನ್ ಮಾತ್ರ ಗಳಿಸಿದರು.

ಬೌಲಿಂಗ್‌ನಲ್ಲಿ ನ್ಯೂಜಿಲೆಂಡ್ ತಂಡದ ಪರ ಮಿಚೆಲ್ ಸ್ಯಾಂಟ್ನರ್ 10 ಓವರ್‌ಗಳಲ್ಲಿ 59 ರನ್ ನೀಡಿ 5 ವಿಕೆಟ್ ಪಡೆದು ಮಿಂಚಿದರೆ, ಮ್ಯಾಟ್ ಹೆನ್ರಿ 8.3 ಓವರ್‌ಗಳಲ್ಲಿ 40 ರನ್ ನೀಡಿ 3 ವಿಕೆಟ್ ಪಡೆದರು. ಉಳಿದಂತೆ ರಚಿನ್ ರವೀಂದ್ರ 10 ಓವರ್‌ಗಳಲ್ಲಿ 46 ರನ್ ನೀಡಿ 1 ವಿಕೆಟ್ ಕಬಳಿಸಿದರು.
ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ ತಂಡದ ಪರ ಆರಂಭಿಕರಾದ ಡೆವೊನ್ ಕಾನ್ವೇ 40 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 32 ರನ್ ಗಳಿಸಿದರೆ, ವಿಲ್ ಯಂಗ್ 80 ಎಸೆತಗಳಲ್ಲಿ 7 ಬೌಂಡರಿ ಮತ್ತು 2 ಸಿಕ್ಸರ್ ಸಮೇತ 70 ರನ್ ಬಾರಿಸಿದರು.
ನಂತರ ಬಂದ ರಚಿನ್ ರವೀಂದ್ರ 51 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 51 ರನ್ ಗಳಿಸಿದರು. ಡೇರಿಲ್ ಮಿಚೆಲ್ 47 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ 48 ರನ್ ಬಾರಿಸಿದರು.

ನಾಯಕ ಟಾಮ್ ಲ್ಯಾಥಮ್ 46 ಎಸೆತಗಳಲ್ಲಿ 6 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 53 ರನ್ ಸಿಡಿಸಿದರು. ಕೊನೆಯಲ್ಲಿ ಮಿಚೆಲ್ ಸ್ಯಾಂಟ್ನರ್ 17 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ಸಮೇತ 36 ರನ್ ಗಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications