World Cup 2023: ಬೆನ್ ಸ್ಟೋಕ್ಸ್ ಭರ್ಜರಿ ಶತಕ: ನೆದರ್ಲ್ಯಾಂಡ್ಸ್ ವಿರುದ್ಧ ಬೃಹತ್ ಮೊತ್ತ ದಾಖಲಿಸಿದ ಇಂಗ್ಲೆಂಡ್
ಬುಧವಾರ, ನವೆಂಬರ್ 8ರಂದು ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 40ನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ನೆದರ್ಲ್ಯಾಂಡ್ಸ್ ವಿರುದ್ಧ ಸವಾಲಿನ ಮೊತ್ತವನ್ನು ಕಲೆಹಾಕಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ ಮಧ್ಯಮ ಕ್ರಮಾಂಕದ ಬ್ಯಾಟರ್ ಬೆನ್ ಸ್ಟೋಕ್ಸ್ ಅವರ ಭರ್ಜರಿ ಶತಕದ ನೆರವಿನಿಂದ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 339 ರನ್ ಗಳಿಸಿದ್ದು, ನೆದರ್ಲ್ಯಾಂಡ್ಸ್ ತಂಡಕ್ಕೆ 340 ರನ್‌ಗಳ ಬೃಹತ್ ಗುರಿ ನೀಡಿದೆ.

ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಜಾನಿ ಬೈರ್‌ಸ್ಟೋವ್ ಮತ್ತು ಡೇವಿಡ್ ಮಲಾನ್ ಉತ್ತಮ ಆರಂಭ ನೀಡಿದರು. ಆದರೆ, ತಂಡದ ಮೊತ್ತ 48 ರನ್‌ಗಳಾಗಿದ್ದಾಗ ಜಾನಿ ಬೈರ್‌ಸ್ಟೋವ್ 15 ರನ್ ಗಳಿಸಿ ಔಟಾದರು.
ನಂತರ ಬಂದ ಜೋ ರೂಟ್ ನಿಧಾನಗತಿಯ ಆಟಕ್ಕೆ ಮೊರೆ ಹೋದರು ಮತ್ತು 35 ಎಸೆತಗಳಲ್ಲಿ 1 ಬೌಂಡರಿ ಮೂಲಕ 28 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಆರಂಭಿಕ ಬ್ಯಾಟರ್ ಡೇವಿಡ್ ಮಲಾನ್ 74 ಎಸೆತಗಳಲ್ಲಿ 10 ಬೌಂಡರಿ ಹಾಗೂ 2 ಸಿಕ್ಸರ್ ಸಮೇತ 87 ರನ್ ಬಾರಿಸಿ ಔಟಾದರು.
ಇನ್ನು ಬೆನ್ ಸ್ಟೋಕ್ಸ್ ನೆದರ್ಲ್ಯಾಂಡ್ಸ್ ಬೌಲರ್‌ಗಳಿಗೆ ಪ್ರತಿರೋಧ ಒಡ್ಡಿದರು ಮತ್ತು ತಮ್ಮ ಶತಕ ಕೂಡ ಪೂರೈಸಿದರು. 86 ಎಸೆತಗಳಲ್ಲಿ 6 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 108 ರನ್ ಬಾರಿಸಿ ಕೊನೆಯ ಓವರ್‌ನಲ್ಲಿ ಔಟಾದರು.ಹ್ಯಾರಿ ಬ್ರೂಕ್ 11 ರನ್ ಗಳಿಸಿದರೆ, ನಾಯಕ ಜೋಸ್ ಬಟ್ಲರ್ 5 ರನ್, ಮೊಯಿನ್ ಅಲಿ 4 ರನ್ ಗಳಿಸಿ ಪೆವಿಲಿಯನ್ ಸೇರಿದರು.

ಕೊನೆಯಲ್ಲಿ ಬೆನ್ ಸ್ಟೋಕ್ಸ್ ಅವರಿಗೆ ಬೆಂಬಲ ನೀಡಿದ ಕ್ರಿಸ್ ವೋಕ್ಸ್ 45 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ಸಹಾಯದಿಂದ 51 ರನ್ ಗಳಿಸಿ ತಂಡದ ಮೊತ್ತ 320ರ ಗಡಿ ದಾಟಿಸಿದರು. ಅಂತಿಮವಾಗಿ ಡೇವಿಡ್ ವಿಲ್ಲಿ 6 ರನ್, ಗಸ್ ಅಟ್ಕಿನ್ಸನ್ 2 ರನ್ ಮತ್ತು ಆದಿಲ್ ರಶೀದ್ 1 ರನ್ ಗಳಿಸಿದರು.
ಬೌಲಿಂಗ್‌ನಲ್ಲಿ ಬಾಸ್ ಡಿ ಲೀಡೆ 10 ಓವರ್‌ಗಳಲ್ಲಿ 74 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ಆರ್ಯನ್ ದತ್ 10 ಓವರ್‌ಗಳಲ್ಲಿ 67 ರನ್ ನೀಡಿ 2 ವಿಕೆಟ್ ಪಡೆದರು. ಲೋಗನ್ ವ್ಯಾನ್ ಬೀಕ್ 10 ಓವರ್‌ಗಳಲ್ಲಿ 88 ರನ್ ನೀಡಿ 2 ವಿಕೆಟ್ ಕಿತ್ತರೆ, ಪಾಲ್ ವ್ಯಾನ್ ಮೀಕೆರೆನ್ ಒಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications