World Cup 2023: ನ್ಯೂಜಿಲೆಂಡ್ vs ನೆದರ್ಲ್ಯಾಂಡ್ಸ್ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗದ ಮಾಹಿತಿ
ಸೋಮವಾರ, ಅಕ್ಟೋಬರ್ 9ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ ಆರನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಮತ್ತು ನೆದರ್ಲ್ಯಾಂಡ್ಸ್ ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ನೆದರ್ಲ್ಯಾಂಡ್ಸ್ ತಂಡದ ನಾಯಕ ಸ್ಕಾಟ್ ಎಡ್ವರ್ಡ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟಾಮ್ ಲ್ಯಾಥಮ್ ನಾಯಕತ್ವದ ನ್ಯೂಜಿಲೆಂಡ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಗುರುವಾರ ನಡೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧದ ಆರಂಭಿಕ ಪಂದ್ಯದಲ್ಲಿ ನ್ಯೂಜಿಲೆಂಡ್ 9 ವಿಕೆಟ್‌ಗಳಿಂದ ಗೆಲುವು ಸಾಧಿಸಿತ್ತು.
ಇಂಗ್ಲೆಂಡ್ 9 ವಿಕೆಟ್ ನಷ್ಟಕ್ಕೆ 282 ರನ್ ಗಳಿಸಿದ್ದರೆ, ಕಿವೀಸ್ ಪರ ಡೆವೊನ್ ಕಾನ್ವೆ (ಅಜೇಯ 152 ರನ್) ಮತ್ತು ರಚಿನ್ ರವೀಂದ್ರ (ಅಜೇಯ 123 ರನ್) ಅಬ್ಬರದ ಇನ್ನಿಂಗ್ಸ್‌ನಿಂದಾಗಿ ನ್ಯೂಜಿಲೆಂಡ್ 36.2 ಓವರ್‌ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
ಮತ್ತೊಂದೆಡೆ, ನೆದರ್ಲ್ಯಾಂಡ್ಸ್ ತಂಡ ತಮ್ಮ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ 81 ರನ್‌ಗಳ ಸೋಲು ಅನುಭವಿಸಿತ್ತು. ಇದೀಗ ಬಲಿಷ್ಠ ನ್ಯೂಜಿಲೆಂಡ್ ವಿರುದ್ಧ ಗೆಲ್ಲಲು ಎದುರು ನೋಡುತ್ತಿದ್ದಾರೆ.
ನೆದರ್ಲ್ಯಾಂಡ್ಸ್ vs ನ್ಯೂಜಿಲೆಂಡ್ ತಂಡಗಳ ಆಡುವ 11ರ ಬಳಗ
ನ್ಯೂಜಿಲೆಂಡ್ ತಂಡ: ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ/ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್‌ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.
ನೆದರ್ಲ್ಯಾಂಡ್ಸ್ ತಂಡ: ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಓ'ಡೌಡ್, ಕಾಲಿನ್ ಅಕರ್ಮನ್, ಬಾಸ್ ಡಿ ಲೀಡೆ, ತೇಜ ನಿಡಮನೂರು, ಸ್ಕಾಟ್ ಎಡ್ವರ್ಡ್ಸ್(ನಾಯಕ/ವಿಕೆಟ್ ಕೀಪರ್), ಸೈಬ್ರಾಂಡ್ ಎಂಗೆಲ್‌ಬ್ರೆಕ್ಟ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ರಿಯಾನ್ ಕ್ಲೈನ್, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications