World Cup 2023: ಪಾಕಿಸ್ತಾನ vs ಅಫ್ಘಾನಿಸ್ತಾನ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ, ಲೈವ್ ಸ್ಕೋರ್
ಸೋಮವಾರ, ಅಕ್ಟೋಬರ್ 23ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 22ನೇ ಪ್ರಮುಖ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಮಾಡಿದರು. ಹೀಗಾಗಿ ಹಶ್ಮತುಲ್ಲಾ ಶಾಹಿದಿ ನಾಯಕತ್ವದ ಅಫ್ಘಾನಿಸ್ತಾನ ತಂಡ ಮೊದಲು ಬೌಲಿಂಗ್ ಮಾಡಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧ ಸತತ ಎರಡು ಸೋಲಿನ ನಂತರ ಬಾಬರ್ ಅಜಂ ಪಡೆಗೆ ಗೆಲುವು ಅನಿವಾರ್ಯವಾಗಿದೆ. ಏಕೆಂದರೆ ಮತ್ತೊಂದು ಸೋಲು ಈ ವಿಶ್ವಕಪ್ ಪಂದ್ಯಾವಳಿಯ ಸೆಮಿಫೈನಲ್‌ಗೆ ತಲುಪುವ ಅವರ ಮಹತ್ವಾಕಾಂಕ್ಷೆಗೆ ತೀವ್ರ ಹಿನ್ನಡೆಯಾಗಲಿದೆ.
ಪ್ರಸ್ತುತ, ಪಾಕಿಸ್ತಾನ ತಂಡ ನಾಲ್ಕು ಪಂದ್ಯಗಳಿಂದ ನಾಲ್ಕು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಆದರೆ ಅವರ ನೆಟ್ ರನ್‌ರೇಟ್ -0.456 ಇರುವುದು ದೊಡ್ಡ ಚಿಂತೆಯಾಗಿದೆ ಮತ್ತು ಇದರ ಸುಧಾರಣೆಯ ಅಗತ್ಯವಿದೆ.
ಮತ್ತೊಂದೆಡೆ, ಅಫ್ಘಾನಿಸ್ತಾನ ತಂಡವು ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ಏಕೈಕ ಗೆಲುವು ಸಾಧಿಸಿದೆ. ಪಾಕಿಸ್ತಾನ ವಿರುದ್ಧ ಗೆಲುವು ಸಾಧಿಸಲು ಎದುರು ನೋಡುತ್ತಿದೆ.
ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ತಂಡಗಳ ಆಡುವ 11ರ ಬಳಗ
ಪಾಕಿಸ್ತಾನ ತಂಡ: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಶಾದಾಬ್ ಖಾನ್, ಇಫ್ತಿಕರ್ ಅಹ್ಮದ್, ಉಸಾಮಾ ಮಿರ್, ಹಸನ್ ಅಲಿ, ಶಾಹೀನ್ ಶಾ ಅಫ್ರಿದಿ, ಹ್ಯಾರಿಸ್ ರೌಫ್.
ಅಫ್ಘಾನಿಸ್ತಾನ ತಂಡ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಅಜ್ಮತುಲ್ಲಾ ಒಮರ್ಜಾಯ್, ಇಕ್ರಮ್ ಅಲಿಖಿಲ್, ಮೊಹಮ್ಮದ್ ನಬಿ, ರಶೀದ್ ಖಾನ್, ಮುಜೀಬ್-ಉರ್-ರೆಹಮಾನ್, ನವೀನ್-ಉಲ್-ಹಕ್, ನೂರ್ ಅಹ್ಮದ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications