World Cup 2023: ಪಾಕಿಸ್ತಾನ vs ಶ್ರೀಲಂಕಾ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗದ ಮಾಹಿತಿ
ಮಂಗಳವಾರ, ಅಕ್ಟೋಬರ್ 10ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ ಎಂಟನೇ ಪಂದ್ಯದಲ್ಲಿ ಏಷ್ಯಾದ ಬಲಿಷ್ಠ ತಂಡಗಳಾದ ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ದಸುನ್ ಶನಕ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಬಾಬರ್ ಅಜಂ ನಾಯಕತ್ವದ ಪಾಕಿಸ್ತಾನ ತಂಡ ಮೊದಲು ಬೌಲಿಂಗ್ ಮಾಡಲಿದೆ.

ಪಾಕಿಸ್ತಾನ ತನ್ನ ಮೊದಲ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ 81 ರನ್‌ಗಳಿಂದ ಗೆಲುವು ಸಾಧಿಸಿತು. ಮತ್ತೊಂದೆಡೆ, ದೊಡ್ಡ ಸ್ಕೋರ್‌ನ ಮುಖಾಮುಖಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಶ್ರೀಲಂಕಾ ತಂಡ 102 ರನ್‌ಗಳ ಭಾರೀ ಅಂತರದ ಸೋಲು ಕಂಡಿತು.
ನೆದರ್ಲ್ಯಾಂಡ್ಸ್ ತಂಡದ ವಿರುದ್ಧ ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸಿದ ನಂತರ, ಪಾಕಿಸ್ತಾನ ತಂಡವು ಇದೀಗ ತಮ್ಮದೇ ಆದ ಸಮಸ್ಯೆಗಳಿಂದ ಬಳಲುತ್ತಿರುವ ದ್ವೀಪ ರಾಷ್ಟ್ರ ಶ್ರೀಲಂಕಾ ವಿರುದ್ಧ ತಮ್ಮ ನೈಜ ಆಟವನ್ನು ಪ್ರದರ್ಶಿಸಲು ಉತ್ಸುಕವಾಗಿದೆ.

ಪಾಕಿಸ್ತಾನ vs ಶ್ರೀಲಂಕಾ ತಂಡಗಳ ಆಡುವ 11ರ ಬಳಗ
ಶ್ರೀಲಂಕಾ ತಂಡ: ಪಾಥುಮ್ ನಿಸ್ಸಾಂಕ, ಕುಸಲ್ ಪೆರೆರಾ, ಕುಸಲ್ ಮೆಂಡಿಸ್(ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವ, ದಸುನ್ ಶನಕ(ನಾಯಕ), ದುನಿತ್ ವೆಲ್ಲಲಾಗೆ, ಮಹೀಶ್ ತೀಕ್ಷಣ, ಮತೀಶ ಪತಿರಾಣ, ದಿಲ್ಶನ್ ಮಧುಶಂಕ.
ಪಾಕಿಸ್ತಾನ ತಂಡ: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಬಾಬರ್ ಅಜಮ್(ನಾಯಕ), ಮೊಹಮ್ಮದ್ ರಿಜ್ವಾನ್(ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಮೊಹಮ್ಮದ್ ನವಾಜ್, ಶಾದಾಬ್ ಖಾನ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications