Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ICC World Cup 2023 Qualifiers: ಓಮನ್ ವಿರುದ್ಧ ಶ್ರೀಲಂಕಾಗೆ 10 ವಿಕೆಟ್‌ಗಳ ಭರ್ಜರಿ ಗೆಲುವು

ಶುಕ್ರವಾರ, ಜೂನ್ 23ರಂದು ಬುಲವಾಯೊದ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ 2023ರ ಐಸಿಸಿ ವಿಶ್ವಕಪ್ ಕ್ವಾಲಿಫೈಯರ್ ಪಂದ್ಯದಲ್ಲಿ ಶ್ರೀಲಂಕಾ ತಂಡ ಓಮನ್ ವಿರುದ್ಧ 10 ವಿಕೆಟ್‌ಗಳ ಸುಲಭ ಗೆಲುವು ದಾಖಲಿಸಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಜೀಶಾನ್ ಮಕ್‌ಸೂದ್ ನಾಯಕತ್ವದ ಓಮನ್ ತಂಡ 30.2 ಓವರ್‌ಗಳಲ್ಲಿ ಕೇವಲ 98 ರನ್‌ಗಳಿಗೆ ಸರ್ವಪತನ ಕಂಡಿತು.

ICC World Cup 2023 Qualifiers: Sri Lanka Beat Oman By 10 Wickets In League Match

ಓಮನ್ ತಂಡದ ಪರ ಅಯಾನ್ ಖಾನ್ 60 ಎಸೆತಗಳಲ್ಲಿ 4 ಬೌಂಡರಿ ಸಮೇತ 41 ರನ್ ಬಾರಿಸಿ ಇನ್ನಿಂಗ್ಸ್‌ನಲ್ಲಿ ಗರಿಷ್ಠ ಸ್ಕೋರರ್ ಎನಿಸಿದರೆ, ಆರಂಭಿಕ ಜತೀಂದರ್ ಸಿಂಗ್ 43 ಎಸೆತಗಳಲ್ಲಿ 2 ಬೌಂಡರಿ ನೆರವಿನಿಂದ 21 ರನ್ ಗಳಿಸಿದರು. ಉಳಿದ ಯಾವ ಬ್ಯಾಟರ್‌ಗಳು ಎರಡಂಕಿ ಮೊತ್ತ ಗಳಿಸಲಾಗಲಿಲ್ಲ.

ಇನ್ನು ಬೌಲಿಂಗ್‌ನಲ್ಲಿ ಶ್ರೀಲಂಕಾ ತಂಡದ ಪರ ಚಮತ್ಕಾರ ತೋರಿದ ವನಿಂದು ಹಸರಂಗ 7.2 ಓವರ್‌ಗಳಲ್ಲಿ 13 ರನ್ ನೀಡಿ 5 ವಿಕೆಟ್ ಗೊಂಚಲು ಪಡೆದು ಮಿಂಚಿದರೆ, ಲಹಿರು ಕುಮಾರ 8 ಓವರ್‌ಗಳಲ್ಲಿ 22 ರನ್ ನೀಡಿ 3 ವಿಕೆಟ್ ಪಡೆದರು. ಉಳಿದಂತೆ ಕಸುನ್ ರಜಿತಾ 6 ಓವರ್‌ಗಳಲ್ಲಿ 17 ರನ್ ನೀಡಿ 1 ವಿಕೆಟ್ ಪಡೆದರು.

99 ರನ್‌ಗಳ ಸಾಧಾರಣ ಗುರಿ ಬೆನ್ನಟ್ಟಿದ ದ್ವೀಪ ರಾಷ್ಟ್ರ ಶ್ರೀಲಂಕಾ 15 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 100 ಗಳಿಸಿ ಗೆಲುವಿನ ನಗೆ ಬೀರಿತು. ಆರಂಭಿಕರಾದ ಪಾಥುಮ್ ನಿಸ್ಸಾಂಕ 39 ಎಸೆತಗಳಲ್ಲಿ 5 ಬೌಂಡರಿ ಸಮೇತ ಅಜೇಯ 37 ರನ್ ಗಳಿಸಿದರೆ, ದಿಮುತ್ ಕರುಣಾರತ್ನೆ 51 ಎಸೆತಗಳಲ್ಲಿ 8 ಬೌಂಡರಿ ನೆರವಿನಿಂದ ಅಜೇಯ 61 ರನ್ ಬಾರಿಸಿದರು.

ದುರ್ಬಲ ಓಮನ್ ತಂಡದ ಬೌಲರ್‌ಗಳು ಎದುರಾಳಿ ಶ್ರೀಲಂಕಾ ತಂಡದ ಯಾವುದೇ ಒಂದು ವಿಕೆಟ್ ಪಡೆಯಲೂ ಸಹ ವಿಫಲರಾದರು. ಓಮನ್ ತಂಡದ 5 ವಿಕೆಟ್ ಪಡೆದು ಮಿಂಚಿದ ವನಿಂದು ಹಸರಂಗ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಶ್ರೀಲಂಕಾ ತಂಡ 2023ರ ಐಸಿಸಿ ವಿಶ್ವಕಪ್ ಕ್ವಾಲಿಫೈಯರ್ ತನ್ನ ಮುಂದಿನ ಪಂದ್ಯದಲ್ಲಿ ಭಾನುವಾರ, ಜೂನ್ 25ರಂದು ಐರ್ಲೆಂಡ್ ತಂಡವನ್ನು ಎದುರಿಸಲಿದೆ. ಇನ್ನು ಓಮನ್ ತಂಡ ತನ್ನ ಮುಂದಿನ ಪಂದ್ಯವನ್ನು ಭಾನುವಾರ, ಜೂನ್ 25ರಂದು ಸ್ಕಾಟ್ಲೆಂಡ್ ತಂಡವನ್ನು ಎದುರಿಸಲಿದೆ.

ಮೂರು ವಾರಗಳ ಕಾಲ ನಡೆಯುವ 2023ರ ಐಸಿಸಿ ವಿಶ್ವಕಪ್ ಕ್ವಾಲಿಫೈಯರ್‌ನಲ್ಲಿ ಭಾಗವಹಿಸುವ 10 ತಂಡಗಳ ಪೈಕಿ ಎರಡು ತಂಡಗಳು ಮಾತ್ರ ಅಕ್ಟೋಬರ್ 5ರಿಂದ ನವೆಂಬರ್‌ 19ರವರೆಗೆ ಭಾರತದಲ್ಲಿ ನಡೆಯಲಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾಗವಹಿಸಲಿವೆ.

Story first published: Friday, June 23, 2023, 17:54 [IST]
Other articles published on Jun 23, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+