For Quick Alerts
ALLOW NOTIFICATIONS  
For Daily Alerts
 

ICC World Cup 2023: ದಕ್ಷಿಣ ಆಫ್ರಿಕಾ ತಂಡದ ಆಲ್‌ರೌಂಡ್ ಪ್ರದರ್ಶನ; ಆಸ್ಟ್ರೇಲಿಯಾಗೆ ಆಘಾತ ನೀಡಿದ ಹರಿಣ ಪಡೆ

ಗುರುವಾರ, ಅಕ್ಟೋಬರ್ 12ರಂದು ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ 10ನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ ಆಲ್‌ರೌಂಡ್ ಪ್ರದರ್ಶನ ನೀಡಿ ಅನಾಯಾಸ ಗೆಲುವು ಸಾಧಿಸಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ಕ್ವಿಂಟನ್ ಡಿ ಕಾಕ್ ಅವರ ಅದ್ಭುತ ಸತತ ಎರಡನೇ ಶತಕದ ನೆರವಿನಿಂದ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 311 ರನ್‌ಗಳ ಸವಾಲಿನ ಮೊತ್ತ ಕಲೆಹಾಕಿತ್ತು.

ICC World Cup 2023: Quinton de Kock Century Helps To South Africa Beat Australia By 134 Runs

ದಕ್ಷಿಣ ಆಫ್ರಿಕಾ ನೀಡಿದ್ದ 312 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ 40.5 ಓವರ್‌ಗಳಲ್ಲಿ 177 ರನ್‌ಗಳಿಗೆ ಸರ್ವಪತನ ಕಂಡಿತು ಮತ್ತು 134 ರನ್‌ಗಳ ಬೃಹತ್ ಅಂತರದ ಸೋಲು ಅನುಭವಿಸಿತು. ಗಮನಾರ್ಹವಾಗಿ, ಈ ವಿಶ್ವಕಪ್ ಪಂದ್ಯಾವಳಿಯಲ್ಲಿ ಆಸ್ಟ್ರೇಲಿಯಾ ತಂಡದ ಸತತ ಎರಡನೇ ಸೋಲು ಇದಾಗಿದೆ.

ಮೊದಲು ಬ್ಯಾಟಿಂಗ್ ಆರಂಭಿಸಿದ ದಕ್ಷಿಣ ಆಫ್ರಿಕಾ ತಂಡದ ಕ್ವಿಂಟನ್ ಡಿ ಕಾಕ್ ಮತ್ತು ಟೆಂಬಾ ಬವುಮಾ ಮೊದಲ ವಿಕೆಟ್‌ಗೆ 108 ರನ್‌ಗಳ ಜೊತೆಯಾಟ ನೀಡಿ ಉತ್ತಮ ಆರಂಭ ಒದಗಿಸಿದರು.

ಈ ವೇಳೆ 55 ಎಸೆತಗಳಲ್ಲಿ 35 ರನ್ ಗಳಿಸಿ ಆಡುತ್ತಿದ್ದ ನಾಯಕ ಟೆಂಬಾ ಬವುಮಾ ಗ್ಲೆನ್ ಮ್ಯಾಕ್ಸ್‌ವೆಲ್ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸಿದರು. ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ 30 ಎಸೆತಗಳಲ್ಲಿ 26 ರನ್ ಬಾರಿಸಿದರು.

ICC World Cup 2023: Quinton de Kock Century Helps To South Africa Beat Australia By 134 Runs

ಕಳೆದ ಪಂದ್ಯದಲ್ಲಿ ಶತಕ ಬಾರಿಸಿದ್ದ ಕ್ವಿಂಟನ್ ಡಿ ಕಾಕ್ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿಯೂ ಆಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. 106 ಎಸೆತಗಳಲ್ಲಿ 8 ಬೌಂಡರಿ ಮತ್ತು 5 ಸಿಕ್ಸರ್ ಸಮೇತ 109 ರನ್ ಬಾರಿಸಿದರು.

ಆ ಬಳಿಕ ಏಡೆನ್ ಮಾರ್ಕ್ರಾಮ್ 44 ಎಸೆತಗಳಲ್ಲಿ 7 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 56 ರನ್ ಗಳಿಸಿದರೆ, ಹೆನ್ರಿಚ್ ಕ್ಲಾಸೆನ್ 27 ಎಸೆತಗಳಲ್ಲಿ 3 ಬೌಂಡರಿ ಸಹಾಯದಿಂದ 29 ರನ್ ಗಳಿಸಿದರು.

ಡೇವಿಡ್ ಮಿಲ್ಲರ್ 17 ರನ್ ಗಳಿಸಿದರೆ, ಮಾರ್ಕೊ ಜಾನ್ಸೆನ್ 22 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 26 ರನ್ ಗಳಿಸಿ ತಂಡದ ಮೊತ್ತ 310ರ ಗಡಿ ದಾಟಲು ಸಹಾಯವಾದರು.

ICC World Cup 2023: Quinton de Kock Century Helps To South Africa Beat Australia By 134 Runs

ಆಸ್ಟ್ರೇಲಿಯಾ ತಂಡದ ಪರ ಬೌಲಿಂಗ್‌ನಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ 10 ಓವರ್‌ಗಳಲ್ಲಿ 34 ರನ್ ನೀಡಿ 2 ವಿಕೆಟ್ ಪಡೆದರೆ, ಮಿಚೆಲ್ ಸ್ಟಾರ್ಕ್ 9 ಓವರ್‌ಗಳಲ್ಲಿ 53 ರನ್ ನೀಡಿ 2 ವಿಕೆಟ್ ಕಬಳಿಸಿದರು. ಉಳಿದಂತೆ ಜೋಶ್ ಹೇಝಲ್‌ವುಡ್, ಪ್ಯಾಟ್ ಕಮ್ಮಿನ್ಸ್ ಮತ್ತು ಆಡಮ್ ಝಂಪಾ ತಲಾ ಒಂದೊಂದು ವಿಕೆಟ್ ಪಡೆದರು.

312 ರನ್‌ಗಳ ಚೇಸಿಂಗ್‌ನಲ್ಲಿ ದಕ್ಷಿಣ ಆಫ್ರಿಕಾ ಬೌಲರ್‌ಗಳನ್ನು ಎದುರಿಸಲು ಆಸ್ಟ್ರೇಲಿಯಾ ಬ್ಯಾಟರ್‌ಗಳು ವಿಫಲರಾದರು. ಮಿಚೆಲ್ ಮಾರ್ಷ್ ಮತ್ತು ಡೇವಿಡ್ ವಾರ್ನರ್ ಇನ್ನಿಂಗ್ಸ್ ಆರಂಭಿಸಿ ಮೊದಲ ವಿಕೆಟ್‌ಗೆ ಕೇವಲ 27 ರನ್‌ಗಳ ಜೊತೆಯಾಟ ನೀಡಿದರು.

ಮಿಚೆಲ್ ಮಾರ್ಷ್ 7 ರನ್ ಗಳಿಸಿದರೆ, ಡೇವಿಡ್ ವಾರ್ನರ್ 13 ರನ್ ಗಳಿಸಿ ಔಟಾದರು. ನಂತರ ಬಂದ ಸ್ಟೀವನ್ ಸ್ಮಿತ್ 19 ರನ್, ಜೋಶ್ ಇಂಗ್ಲಿಸ್ 5 ರನ್, ಗ್ಲೆನ್ ಮ್ಯಾಕ್ಸ್‌ವೆಲ್ 3 ರನ್ ಮಾತ್ರ ಗಳಿಸಿದರು.

ಮಧ್ಯಮ ಕ್ರಮಾಂಕದಲ್ಲಿ ಮಾರ್ನಸ್ ಲ್ಯಾಬುಸ್ಚಾಗ್ನೆ ಮಾತ್ರ ಪ್ರತಿರೋಧ ತೋರಿದರು. 74 ಎಸೆತಗಳಲ್ಲಿ 3 ಬೌಂಡರಿ ಸಹಿತ 46 ರನ್ ಬಾರಿಸಿದರು. ಮಿಚೆಲ್ ಸ್ಟಾರ್ಕ್ 51 ಎಸೆತಗಳಲ್ಲಿ 3 ಬೌಂಡರಿ ಸಮೇತ 27 ರನ್ ಗಳಿಸಿದರು.

ಉಳಿದಂತೆ ನಾಯಕ ಪ್ಯಾಟ್ ಕಮ್ಮಿನ್ಸ್ 22 ರನ್, ಆಡಮ್ ಝಂಪಾ 11 ರನ್ ಮತ್ತು ಜೋಶ್ ಹೇಝಲ್‌ವುಡ್ 2 ರನ್ ಗಳಿಸಿದರು.

ಬೌಲಿಂಗ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡದ ಪರ ಕಗಿಸೊ ರಬಾಡ 8 ಓವರ್‌ಗಳಲ್ಲಿ 33 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ಕೇಶವ್ ಮಹಾರಾಜ್ 10 ಓವರ್‌ಗಳಲ್ಲಿ 30 ರನ್ ನೀಡಿ 2 ವಿಕೆಟ್, ತಬ್ರೈಜ್ ಶಮ್ಸಿ 7.5 ಓವರ್‌ಗಳಲ್ಲಿ 38 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಮಾರ್ಕೊ ಜಾನ್ಸೆನ್ 2 ವಿಕೆಟ್ ಮತ್ತು ಲುಂಗಿ ಎನ್‌ಗಿಡಿ 1 ವಿಕೆಟ್ ತಮ್ಮದಾಗಿಸಿಕೊಂಡರು.

Story first published: Thursday, October 12, 2023, 22:10 [IST]
Other articles published on Oct 12, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+