For Quick Alerts
ALLOW NOTIFICATIONS  
For Daily Alerts
 

IND vs AFG World Cup: ರೋಹಿತ್, ಕೊಹ್ಲಿ ಮಿಂಚಿನ ಬ್ಯಾಟಿಂಗ್; ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

ಬುಧವಾರ, ಆಕ್ಟೋಬರ್ 11ರಂದು ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ 9ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡದ ವಿರುದ್ಧ ಭಾರತ 8 ವಿಕೆಟ್‌ಗಳ ಅಮೋಘ ಗೆಲುವು ದಾಖಲಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ ಹಶ್ಮತುಲ್ಲಾ ಶಾಹಿದಿ, ಅಜ್ಮತುಲ್ಲಾ ಒಮರ್ಜಾಯ್ ಅವರ ಅರ್ಧಶತಕದ ನೆರವಿನಿಂದ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 272 ರನ್ ಕಲೆಹಾಕಿತ್ತು.

ICC World Cup 2023: Rohit Sharm Hits Century; India Beat Afghanistan By 8 Wickets In 9th Match

273 ರನ್‌ಗಳ ಸವಾಲಿನ ಮೊತ್ತದ ಗುರಿ ಬೆನ್ನಟ್ಟಿದ ಭಾರತ ತಂಡ ರೋಹಿತ್ ಶರ್ಮಾ ಅವರ ಭರ್ಜರಿ ಶತಕ ಮತ್ತು ವಿರಾಟ್ ಕೊಹ್ಲಿ ಅರ್ಧಶತಕದ ನೆರವಿನಿಂದ ಕೇವಲ 35 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗೆಲುವಿನ ಗಡಿ ತಲುಪಿತು.

ಭಾರತದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಉತ್ತಮ ಆರಂಭ ಒದಗಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 156 ರನ್‌ಗಳ ಜೊತೆಯಾಟ ನಿರ್ಮಿಸಿತು.

ICC World Cup 2023: Rohit Sharm Hits Century; India Beat Afghanistan By 8 Wickets In 9th Match

ಇಶಾನ್ ಕಿಶನ್ 47 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಮೂಲಕ 47 ರನ್ ಗಳಿಸಿ ಔಟಾದರೆ, ನಾಯಕ ರೋಹಿತ್ ಶರ್ಮಾ ಕೇವಲ 84 ಎಸೆತಗಳಲ್ಲಿ 16 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್ ಸಮೇತ 131 ರನ್ ಬಾರಿಸಿದರು.

ಇನ್ನು ಕಳೆದ ಪಂದ್ಯದ ಹೀರೋ ವಿರಾಟ್ ಕೊಹ್ಲಿ ತಾಳ್ಮೆಯ ಆಟವಾಡಿ 56 ಎಸೆತಗಳಲ್ಲಿ 6 ಬೌಂಡರಿ ನೆರವಿನಿಂದ ಅಜೇಯ 55 ರನ್ ಗಳಿಸಿದರೆ, ಶ್ರೇಯಸ್ ಅಯ್ಯರ್ 23 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಸಹಾಯದಿಂದ ಅಜೇಯ 25 ರನ್ ಗಳಿಸಿದರು.

ICC World Cup 2023: Rohit Sharm Hits Century; India Beat Afghanistan By 8 Wickets In 9th Match

ಬೌಲಿಂಗ್‌ನಲ್ಲಿ ಅಫ್ಘಾನಿಸ್ತಾನ ತಂಡದ ಪರ ರಶೀದ್ ಖಾನ್ ಮಾತ್ರ 8 ಓವರ್‌ಗಳಲ್ಲಿ 57 ರನ್ ನೀಡಿ 2 ವಿಕೆಟ್ ಪಡೆದರೆ, ಉಳಿದ ಬೌಲರ್‌ಗಳು ವಿಕೆಟ್ ರಹಿತರಾದರು.

ಇದಕ್ಕೂ ಮುನ್ನ ಅಫ್ಘಾನಿಸ್ತಾನದ ಇನ್ನಿಂಗ್ಸ್ ಆರಂಭಿಸಿದ ರಹಮಾನುಲ್ಲಾ ಗುರ್ಬಾಜ್ ಮತ್ತು ಇಬ್ರಾಹಿಂ ಝದ್ರಾನ್ ಮೊದಲ ವಿಕೆಟ್‌ಗೆ 32 ರನ್‌ಗಳ ಜೊತೆಯಾಟ ನೀಡಿದರು. ರಹಮಾನುಲ್ಲಾ ಗುರ್ಬಾಜ್ 28 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ಮೂಲಕ 21 ರನ್ ಗಳಿಸಿದರೆ, ಇಬ್ರಾಹಿಂ ಝದ್ರಾನ್ 28 ಎಸೆತಗಳಲ್ಲಿ 4 ಬೌಂಡರಿ ಮೂಲಕ 22 ರನ್ ಬಾರಿಸಿದರು.

ನಂತರ ಬಂದ ರಹಮತ್ ಶಾ 22 ಎಸೆತಗಳಲ್ಲಿ 16 ರನ್, ನಾಯಕ ಹಶ್ಮತುಲ್ಲಾ ಶಾಹಿದಿ 88 ಎಸೆತಗಳಲ್ಲಿ 8 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 80 ರನ್ ಬಾರಿಸಿದರು. ಅಜ್ಮತುಲ್ಲಾ ಒಮರ್ಜಾಯ್ 69 ಎಸೆತಗಳಲ್ಲಿ 2 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ 62 ರನ್ ಗಳಿಸಿದರು.

ಮೊಹಮ್ಮದ್ ನಬಿ 27 ಎಸೆತಗಳಲ್ಲಿ 19 ರನ್ ಗಳಿಸಿದರೆ, ನಜೀಬುಲ್ಲಾ 2 ರನ್, ರಶೀದ್ ಖಾನ್ 16 ರನ್, ಮಜೀಬ್ ಉರ್ ರೆಹಮಾನ 10 ರನ್, ನವೀನ್ ಉಲ್ ಹಕ್ 9 ರನ್ ಗಳಿಸಿದರು.

ಭಾರತದ ಪರ ಬೌಲಿಂಗ್‌ನಲ್ಲಿ ಜಸ್ಪ್ರೀತ್ ಬುಮ್ರಾ 10 ಓವರ್‌ಗಳಲ್ಲಿ 39 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ಹಾರ್ದಿಕ್ ಪಾಂಡ್ಯ 7 ಓವರ್‌ಗಳಲ್ಲಿ 43 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಶಾರ್ದೂಲ್ ಠಾಕೂರ್ ಮತ್ತು ಕುಲದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು.

Story first published: Wednesday, October 11, 2023, 21:29 [IST]
Other articles published on Oct 11, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+