ಶನಿವಾರ, ಅಕ್ಟೋಬರ್ 14ರಂದು 2023ರ ಏಕದಿನ ವಿಶ್ವಕಪ್‌ನ 12ನೇ ಪಂದ್ಯದಲ್ಲಿ ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ ಅದ್ಭುತ ಪ್ರದರ್ಶನ ನೀಡಿದ್ದು, ಅದರಲ್ಲೂ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಪಾಕಿಸ್ತಾನದ ಬೌಲರ್‌ಗಳ ಬೆವರಿಳಿಸಿದರು.
ಪಾಕಿಸ್ತಾನ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 300 ಸಿಕ್ಸರ್‌ಗಳನ್ನು ಪೂರೈಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಈ ಮೊದಲು ರೋಹಿತ್ ಶರ್ಮಾ ಅವರು ಅಫ್ಘಾನಿಸ್ತಾನ ವಿರುದ್ಧದ ಶತಕದ ವೇಳೆ ವೆಸ್ಟ್ ಇಂಡೀಸ್ ಲೆಜೆಂಡ್ ಕ್ರಿಸ್ ಗೇಲ್ ಅವರನ್ನು ಹಿಂದಿಕ್ಕಿದ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈಗಾಗಲೇ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್ ಎನಿಸಿದ್ದಾರೆ.
ಅಫ್ಘಾನಿಸ್ತಾನ ವಿರುದ್ಧ ರೋಹಿತ್ ಶರ್ಮಾ ಕೇವಲ 84 ಎಸೆತಗಳಲ್ಲಿ 16 ಬೌಂಡರಿ ಮತ್ತು 5 ಸಿಕ್ಸರ್‌ಗಳ ಮೂಲಕ ತಮ್ಮ ಇನ್ನಿಂಗ್ಸ್‌ನಲ್ಲಿ 131 ರನ್ ಗಳಿಸಿದರು.

ರೋಹಿತ್ ಶರ್ಮಾ ಅವರು ಪಾಕಿಸ್ತಾನ ಶಾಹೀನ್ ಶಾ ಅಫ್ರಿದಿ, ಹ್ಯಾರಿಸ್ ರೌಫ್ ವಿರುದ್ಧ ಹೋರಾಡುತ್ತಿದ್ದಾರೆ ಎಂದು ಹೇಳಿದ್ದ ಎಲ್ಲಾ ಕ್ರಿಕೆಟ್ ಪಂಡಿತರಿಗೆ ತಮ್ಮ ಬ್ಯಾಟ್ ಮೂಲಕವೇ ಉತ್ತರಿಸಿದರು. ಭಾರತ ತಂಡದ ನಾಯಕ ಮೊಹಮ್ಮದ್ ನವಾಜ್ ಅವರ ಬೌಲಿಂಗ್‌ನಲ್ಲಿ ಮಿಡ್-ವಿಕೆಟ್‌ನಲ್ಲಿ ಅನಾಯಾಸವಾಗಿ 80 ಮೀಟರ್ ದೂರದ ಸಿಕ್ಸರ್ ಬಾರಿಸಿದರು.
ಇದಕ್ಕೂ ಮೊದಲು ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜಾ ತಲಾ ಎರಡು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಪಾಕಿಸ್ತಾನದ ಬ್ಯಾಟಿಂಗ್ ಲೈನ್‌ಅಪ್ ಅನ್ನು ಭಾರತೀಯ ಬೌಲರ್‌ಗಳು ಸಂಪೂರ್ಣವಾಗಿ ಛಿದ್ರಗೊಳಿಸಿದರು. ಅಂತಿಮವಾಗಿ 42.5 ಓವರ್‌ಗಳಲ್ಲಿ 191 ರನ್‌ಗಳಿಗೆ ಆಲೌಟ್ ಮಾಡಿದರು.
ಪಾಕಿಸ್ತಾನ ತಂಡದ ಪರ ನಾಯಕ ಬಾಬರ್ ಅಜಂ 58 ಎಸೆತಗಳಲ್ಲಿ 50 ರನ್ ಗಳಿಸಿದರೆ, ಮೊಹಮ್ಮದ್ ರಿಜ್ವಾನ್ 49 ರನ್ ಗಳಿಸಿದರು. ಉಳಿದಂತೆ ಎಲ್ಲ ಬ್ಯಾಟರ್‌ಗಳು ವಿಫಲರಾದರು.
ಪಂದ್ಯದ ಫಲಿತಾಂಶ ಕುರಿತು ಹೇಳುವುದಾದರೆ, ಬಹು ನಿರೀಕ್ಷಿತ 2023ರ ವಿಶ್ವಕಪ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ನಾಯಕ ಬಾಬರ್ ಅಜಂ ಅವರ ಏಕೈಕ ಅರ್ಧಶತಕದ ನೆರವಿನಿಂದ 42.5 ಓವರ್‌ಗಳಲ್ಲಿ 191 ರನ್‌ಗಳಿಗೆ ಆಲೌಟ್ ಆಯಿತು.
192 ರನ್‌ಗಳ ಸುಲಭ ಗುರಿ ಬೆನ್ನಟ್ಟಿದ ಆತಿಥೇಯ ಭಾರತ ತಂಡ ರೋಹಿತ್ ಶರ್ಮಾ ಅವರ ಸ್ಫೋಟಕ ಅರ್ಧಶತಕದ ಸಹಾಯದಿಂದ ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 192 ರನ್ ಗಳಿಸುವ ಮೂಲಕ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.