ICC World Cup 2023 Schedule: ಐಸಿಸಿ ಏಕದಿನ ವಿಶ್ವಕಪ್ 2023 ವೇಳಾಪಟ್ಟಿ ಪ್ರಕಟ; IND vs PAK ಯಾವಾಗ?
2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಇಂದಿನಿಂದ ಕೇವಲ 100 ದಿನಗಳು ಮಾತ್ರ ಬಾಕಿ ಉಳಿದಿದ್ದು, ಪಂದ್ಯಾವಳಿಯ ಸಂಪೂರ್ಣ ವೇಳಾಪಟ್ಟಿಯನ್ನು ಮಂಗಳವಾರ, ಜೂನ್ 27ರಂದು ಐಸಿಸಿ ಪ್ರಕಟಿಸಿದೆ.
ಐಸಿಸಿ ಏಕದಿನ ವಿಶ್ವಕಪ್ ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ಭಾರತದಲ್ಲಿಯೇ ಸಂಪೂರ್ಣ ಪಂದ್ಯಾವಳಿ ನಡೆಯಲಿದ್ದು, ಆತಿಥೇಯ ಭಾರತ ತಂಡ ಅಕ್ಟೋಬರ್ 8ರಂದು ಐದು ಬಾರಿ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ ತಂಡದ ವಿರುದ್ಧ ಚೆನ್ನೈನಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ.

ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಒಟ್ಟು 10 ತಂಡಗಳು ಭಾಗವಹಿಸಲಿದ್ದು, ಮೊದಲ ಎಂಟು ತಂಡಗಳು ಈಗಾಗಲೇ ಕ್ರಿಕೆಟ್ ವಿಶ್ವಕಪ್ ಸೂಪರ್ ಲೀಗ್ ಮೂಲಕ ಅರ್ಹತೆ ಪಡೆದುಕೊಂಡಿವೆ.
ಜಿಂಬಾಬ್ವೆಯಲ್ಲಿ ನಡೆಯುತ್ತಿರುವ ಕ್ವಾಲಿಫೈಯರ್ ಪಂದ್ಯಾವಳಿಯು ಜುಲೈ 9ರಂದು ಮುಕ್ತಾಯಗೊಳ್ಳಲಿದ್ದು, ಅಂತಿಮ ಎರಡು ಸ್ಥಾನಗಳನ್ನು ಪಡೆಯುವ ತಂಡಗಳು ಭಾರತದಲ್ಲಿ ನಡೆಯುವ ವಿಶ್ವಕಪ್ ಪಂದ್ಯಾವಳಿಗೆ ಟಿಕೆಟ್ ಪಡೆಯಲಿವೆ.
ಪ್ರತಿ ತಂಡವು ಇತರ ಒಂಬತ್ತು ತಂಡಗಳ ವಿರುದ್ಧ ರೌಂಡ್ ರಾಬಿನ್ ಮಾದರಿಯಲ್ಲಿ ಎದುರಿಸಲಿವೆ ಮತ್ತು ಅಗ್ರ ನಾಲ್ಕು ತಂಡಗಳು ನಾಕೌಟ್ ಹಂತ ಮತ್ತು ಸೆಮಿಫೈನಲ್ ಹಂತಗಳಿಗೆ ಅರ್ಹತೆ ಪಡೆಯಲಿವೆ.
ಪ್ರಮುಖ ಮುಖಾಮುಖಿಗಳು
ಉದ್ಘಾಟನಾ ಮುಖಾಮುಖಿ ಮತ್ತು 2019ರ ಸೆಮಿಫೈನಲಿಸ್ಟ್‌ಗಳಾದ ಆಸ್ಟ್ರೇಲಿಯಾ ಹಾಗೂ ಭಾರತ ತಂಡದ ಹಣಾಹಣಿ ಹೊರತಾಗಿ, 2023ರ ಪಂದ್ಯಾವಳಿಯುವ ಹಲವು ಹೈ-ವೋಲ್ಟೇಜ್ ಪಂದ್ಯಗಳಿಂದ ತುಂಬಿದೆ.
* ಅಕ್ಟೋಬರ್ 13ರಂದು ಲಕ್ನೋದಲ್ಲಿ ಆಸ್ಟ್ರೇಲಿಯಾ ತಂಡವು ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ.
* ಬಹು ನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ಹೈ-ವೋಲ್ಟೇಜ್ ಪಂದ್ಯವು ಭಾನುವಾರ, ಅಕ್ಟೋಬರ್ 15ರಂದು ಅಹಮದಾಬಾದ್‌ನಲ್ಲಿ ನಡೆಯಲಿದೆ. 2019ರ ವಿಶ್ವಕಪ್‌ನಲ್ಲಿ ಈ ಎರಡು ತಂಡಗಳ ಕೊನೆಯ ಮುಖಾಮುಖಿಯು ಮ್ಯಾಂಚೆಸ್ಟರ್‌ನಲ್ಲಿ ನಡೆದಿತ್ತು ಮತ್ತು ಭಾರತ ತಂಡವು ಬೃಹತ್ ವಿಜಯ ಸಾಧಿಸಿತ್ತು.
* ಅಕ್ಟೋಬರ್ 20ರಂದು ಪಾಕಿಸ್ತಾನ ತಂಡವು ಬೆಂಗಳೂರಿನ ಎಂ ಚಿನ್ನಸ್ವಾಮಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಮರುದಿನ ಅಕ್ಟೋಬರ್ 21ರಂದು ಮುಂಬೈನಲ್ಲಿ ಇಂಗ್ಲೆಂಡ್ ತಂಡವು ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಆಡಲಿದೆ.
* ಭಾರತ ತಂಡವು ಅಕ್ಟೋಬರ್ 22ರಂದು ಧರ್ಮಶಾಲಾ ಸ್ಟೇಡಿಯಂನಲ್ಲಿ ತಮ್ಮ 2019ರ ಸೆಮಿಫೈನಲ್ ಸೋಲಿಗೆ ಸೇಡು ತೀರಿಸಿಕೊಳ್ಳಲು ನ್ಯೂಜಿಲೆಂಡ್ ವಿರುದ್ಧ ಸೆಣಸಾಡಲಿದೆ.
* ನವೆಂಬರ್ 4ರಂದು ಅಹಮದಾಬಾದ್‌ನಲ್ಲಿ ಆಸ್ಟ್ರೇಲಿಯಾ ತಂಡವು ತಮ್ಮ ಸಾಂಪ್ರದಾಯಿಕ ಎದುರಾಳಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ನಾಲ್ಕು ವರ್ಷಗಳ ಹಿಂದೆ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಇಂಗ್ಲೆಂಡ್ ಫೈನಲ್ ಪ್ರವೇಶಿಸಿತ್ತು.
* ಅಕ್ಟೋಬರ್ 29ರಂದು ಲಕ್ನೋದಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಸೆಣಸಾಡುತ್ತದೆ. ಕಳೆದ ವರ್ಷವಷ್ಟೇ 2022ರ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಭಾರತ ಸೋಲು ಕಂಡಿತ್ತು.
* ನವೆಂಬರ್ 12ರಂದು ಪುಣೆಯಲ್ಲಿ ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ಕೊನೆಯ ಗುಂಪು ಹಂತದ ಪಂದ್ಯ ನಡೆಯಲಿದೆ.
ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳು
ಬುಧವಾರ, ನವೆಂಬರ್ 15ರಂದು ಮುಂಬೈನಲ್ಲಿ ಮೊದಲ ಸೆಮಿಫೈನಲ್ ಪಂದ್ಯ ನಡೆಯಲಿದೆ ಮತ್ತು ಎರಡನೇ ಸೆಮಿಫೈನಲ್ ಪಂದ್ಯವು ನವೆಂಬರ್ 16ರಂದು ಕೋಲ್ಕತ್ತಾದಲ್ಲಿ ನಡೆಯಲಿದೆ. ಎರಡೂ ಸೆಮಿಫೈನಲ್ ಪಂದ್ಯಗಳು ಮೀಸಲು ದಿನವನ್ನು ಹೊಂದಿರುತ್ತವೆ.
ಭಾನುವಾರ, ನವೆಂಬರ್ 19ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಲಿದೆ ಮತ್ತು ನವೆಂಬರ್ 20ರಂದು ಮೀಸಲು ದಿನವಾಗಿ ನಿಗದಿಪಡಿಸಲಾಗಿದೆ.
ಎಲ್ಲಾ ಮೂರು ನಾಕೌಟ್ ಪಂದ್ಯಗಳು ಹೊನಲು ಬೆಳಕಿನ ಪಂದ್ಯಗಳಾಗಿರುತ್ತವೆ. ಎಲ್ಲಾ ಪಂದ್ಯಗಳು ಸ್ಥಳೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಪ್ರಾರಂಭವಾಗುತ್ತವೆ.
2023ರ ಏಕದಿನ ವಿಶ್ವಕಪ್ ಪಂದ್ಯಾವಳಿಯ ಸ್ಥಳಗಳು
ಹೈದರಾಬಾದ್, ಅಹಮದಾಬಾದ್, ಧರ್ಮಶಾಲಾ, ದೆಹಲಿ, ಚೆನ್ನೈ, ಲಕ್ನೋ, ಪುಣೆ, ಬೆಂಗಳೂರು, ಮುಂಬೈ ಮತ್ತು ಕೋಲ್ಕತ್ತಾ ಸೇರಿ ಒಟ್ಟು 10 ಸ್ಥಳಗಳಲ್ಲಿ ವಿಶ್ವಕಪ್ ಪಂದ್ಯಗಳು ನಡೆಯಲಿವೆ.
ಹೈದರಾಬಾದ್, ಗುವಾಹಟಿ ಮತ್ತು ತಿರುವನಂತಪುರಂ ಸ್ಥಳಗಳಲ್ಲಿ ಸೆಪ್ಟೆಂಬರ್ 29ರಿಂದ ಅಕ್ಟೋಬರ್ 3ರವರೆಗೆ ಅಭ್ಯಾಸ ಪಂದ್ಯಗಳನ್ನು ಆಯೋಜಿಸಲಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications