ದಕ್ಷಿಣ ಆಫ್ರಿಕಾ ವಿರುದ್ಧ ಪವಾಡದ ರೀತಿ ಗೆದ್ದು ಸೆಮಿಸ್ ತಲುಪುತ್ತಾ ಅಫ್ಘಾನಿಸ್ತಾನ?; ಟಾಸ್ ವರದಿ, ಆಡುವ 11ರ ಬಳಗ
ಶುಕ್ರವಾರ, ನವೆಂಬರ್ 10ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 42ನೇ ನಿರ್ಣಾಯಕ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು ಶ್ರೀಲಂಕಾ ವಿರುದ್ಧ ಮುಖಾಮುಖಿಯಾಗುತ್ತಿದೆ.
ಟಾಸ್ ಗೆದ್ದ ಅಫ್ಘಾನಿಸ್ತಾನ ತಂಡದ ನಾಯಕ ಹಶ್ಮತುಲ್ಲಾ ಶಾಹಿದಿ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡರು. ಹೀಗಾಗಿ ಟೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡ ಮೊದಲು ಫೀಲ್ಡಿಂಗ್ ಮಾಡಲಿದೆ.

ದಕ್ಷಿಣ ಆಫ್ರಿಕಾ ತಂಡ ಈಗಾಗಲೇ 2023ರ ವಿಶ್ವಕಪ್‌ನ ಸೆಮಿಫೈನಲ್‌ಗೆ ಅರ್ಹತೆ ಪಡೆದಿದ್ದರೂ, ನ್ಯೂಜಿಲೆಂಡ್ ತಂಡವನ್ನು ನೆಟ್ ರನ್ ರೇಟ್‌ನಲ್ಲಿ ನಾಲ್ಕನೇ ಸ್ಥಾನದಿಂದ ಹಿಂದಿಕ್ಕಲು ಅಫ್ಘಾನಿಸ್ತಾನ ತಂಡಕ್ಕೆ ದಕ್ಷಿಣ ಆಫ್ರಿಕಾ ವಿರುದ್ಧ 438 ರನ್‌ಗಳ ಗೆಲುವಿನ ಅವಶ್ಯಕತೆ ಇದೆ. ಆದರೆ, ಇದು ಹೆಚ್ಚು ಅಸಂಭವವಾಗಿದೆ.
ಮುಂದಿನ ಗುರುವಾರದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಆಸ್ಟ್ರೇಲಿಯಾ ತಂಡವನ್ನು ಕೋಲ್ಕತ್ತಾದಲ್ಲಿ ಎದುರಿಸಲಿದೆ. ಇನ್ನು ಮೊದಲ ಸೆಮಿಫೈನಲ್‌ನಲ್ಲಿ ಭಾರತ ತಂಡವು ಬುಧವಾರ ನ್ಯೂಜಿಲೆಂಡ್ ಅಥವಾ ಪಾಕಿಸ್ತಾನ ತಂಡದ ವಿರುದ್ಧ ಮುಂಬೈನಲ್ಲಿ ಸೆಣಸುವ ಸಾಧ್ಯತೆಯಿದೆ.
ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ತಂಡಗಳ ಆಡುವ 11ರ ಬಳಗ
ಅಫ್ಘಾನಿಸ್ತಾನ ತಂಡ: ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಝದ್ರಾನ್, ರಹಮತ್ ಷಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ರಶೀದ್ ಖಾನ್, ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಮುಜೀಬ್ ಉರ್ ರಹಮಾನ್, ನೂರ್ ಅಹ್ಮದ್, ನವೀನ್-ಉಲ್-ಹಕ್.
ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಏಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಆಂಡಿಲೆ ಫೆಹ್ಲುಕ್ವಾಯೊ, ಡೇವಿಡ್ ಮಿಲ್ಲರ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್‌ಗಿಡಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications