World Cup 2023: ಗೆಲುವಿಗಾಗಿ ದಕ್ಷಿಣ ಆಫ್ರಿಕಾ vs ಬಾಂಗ್ಲಾದೇಶ ಸೆಣಸಾಟ; ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
ಸೋಮವಾರ, ಅಕ್ಟೋಬರ್ 24ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 23ನೇ ಪ್ರಮುಖ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ತಂಡಗಳು ಗೆಲುವಿಗಾಗಿ ಸೆಣಸಾಟ ನಡೆಸಲಿವೆ.
ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ಹಂಗಾಮಿ ನಾಯಕ ಏಡೆನ್ ಮಾರ್ಕ್ರಾಮ್ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಮಾಡಿದರು. ಹೀಗಾಗಿ ಶಕೀಬ್ ಅಲ್ ಹಸನ್ ನಾಯಕತ್ವದ ಬಾಂಗ್ಲಾದೇಶ ತಂಡ ಮೊದಲು ಬೌಲಿಂಗ್ ಮಾಡಲಿದೆ.

2023ರ ಏಕದಿನ ವಿಶ್ವಕಪ್‌ನ ತಮ್ಮ ಕೊನೆಯ ಪಂದ್ಯದಲ್ಲಿ ಆತಿಥೇಯ ಭಾರತ ವಿರುದ್ಧದ ಹೀನಾಯ ಸೋಲಿನಿಂದ ಹೊರಬರಲು ಯತ್ನಿಸುತ್ತಿರುವ ಬಾಂಗ್ಲಾದೇಶ ತಂಡ ಇದೀಗ ತಮ್ಮ ಮುಂದಿನ ಕಾರ್ಯಯೋಜನೆಯಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಶಾಕ್ ನೀಡಲು ಎದುರು ನೋಡುತ್ತಿದೆ.
ಬಾಂಗ್ಲಾದೇಶ ತಂಡದಂತೆಯೇ ದಕ್ಷಿಣ ಆಫ್ರಿಕಾ ತಂಡವು ಮತ್ತೊಂದು ಅನಿರೀಕ್ಷಿತ ಸೋಲನ್ನು ತಪ್ಪಿಸಲು ಪ್ರಯತ್ನಿಸಲಿದೆ. ಈಗಾಗಲೇ ಈ ವಿಶ್ವಕಪ್ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಶಾಕಿಂಗ್ ಸೋಲು ಅನುಭವಿಸಿದೆ.
ಹೊಟ್ಟೆನೋವಿನ ಕಾರಣ ಕಳೆದ ಪಂದ್ಯದಿಂದ ಹೊರಗುಳಿದಿದ್ದ ನಾಯಕ ಟೆಂಬಾ ಬವುಮಾ ಅವರು ಈ ಪಂದ್ಯದಲ್ಲೂ ದಕ್ಷಿಣ ಆಫ್ರಿಕಾದ ಆಡುವ 11ರ ಬಳಗದಿಂದ ಹೊರಗುಳಿದಿದ್ದಾರೆ. ಇನ್ನು ಬಾಂಗ್ಲಾದೇಶ ತಂಡಕ್ಕೆ ನಾಯಕ ಶಕೀಬ್ ಅಲ್ ಹಸನ್ ಅವರ ಪುನರಾಗಮನ ಬಲ ತರಲಿದೆ.
ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ತಂಡಗಳ ಆಡುವ 11ರ ಬಳಗ
ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಏಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಕಗಿಸೊ ರಬಾಡ, ಕೇಶವ್ ಮಹಾರಾಜ್, ಜೆರಾಲ್ಡ್ ಕೋಟ್ಜಿ, ಲುಂಗಿ ಎನ್‌ಗಿಡಿ.
ಬಾಂಗ್ಲಾದೇಶ ತಂಡ: ತಂಝಿದ್ ಹಸನ್, ಲಿಟ್ಟನ್ ದಾಸ್, ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್(ನಾಯಕ), ಮೆಹಿದಿ ಹಸನ್ ಮಿರಾಜ್, ಮುಶ್ಫಿಕರ್ ರಹೀಮ್(ವಿಕೆಟ್ ಕೀಪರ್), ಮಹಮ್ಮದುಲ್ಲಾ, ನಸುಮ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಶೋರಿಫುಲ್ ಇಸ್ಲಾಂ, ಹಸನ್ ಮಹಮೂದ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications