ICC World Cup 2023 Tickets: ಆ.31ರಂದು ಈ ಮೈದಾನಗಳಲ್ಲಿನ ಭಾರತ ತಂಡದ ಪಂದ್ಯಗಳ ಟಿಕೆಟ್ ಮಾರಾಟ
2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಯು ಭಾರತದಲ್ಲಿ ಅಕ್ಟೋಬರ್ 5ರಿಂದ ಅಧಿಕೃತವಾಗಿ ಆರಂಭವಾಗಲಿದ್ದು, ಇದಕ್ಕಾಗಿ ಎಲ್ಲಾ ತಂಡಗಳು ಸಜ್ಜುಗೊಳ್ಳುತ್ತಿವೆ. ಇದೇ ವೇಳೆ ವಿಶ್ವದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಪ್ರಮುಖ ಪಂದ್ಯಗಳಿಗಾಗಿ ಕಾತರರಾಗಿದ್ದಾರೆ.
ಇದೇ ವೇಳೆ ಚೆನ್ನೈ, ದೆಹಲಿ ಮತ್ತು ಪುಣೆಯಲ್ಲಿ ನಡೆಯಲಿರುವ ಭಾರತ ತಂಡದ ಪಂದ್ಯಗಳ ಟಿಕೆಟ್ ಮಾರಾಟ ಗುರುವಾರ, ಆಗಸ್ಟ್ 31ರಂದು ರಾತ್ರಿ 8 ಗಂಟೆಯಿಂದ ಪ್ರಾರಂಭವಾಗಲಿದೆ. ಟಿಕೆಟ್‌ಗಳು ಅಧಿಕೃತ ಟಿಕೆಟಿಂಗ್ ವೆಬ್‌ಸೈಟ್ BookMyShowನಲ್ಲಿ ಲಭ್ಯವಿರುತ್ತವೆ ಮತ್ತು tickets.cricketworldcup.com. ಭೇಟಿ ನೀಡಬಹುದು.

ಭಾನುವಾರ, ಅಕ್ಟೋಬರ್ 8ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಆಡುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ.
ಇನ್ನು ಬುಧವಾರ, ಅಕ್ಟೋಬರ್ 11ರಂದು ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.
ನಂತರ ಅಕ್ಟೋಬರ್ 19ರ ಗುರುವಾರದಂದು ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ (ಎಂಸಿಎ) ಬಾಂಗ್ಲಾದೇಶ ವಿರುದ್ಧ ಭಾರತದ ಪಂದ್ಯ ನಿಗದಿಯಾಗಿದೆ.
ಸೆಪ್ಟೆಂಬರ್ 1ರಂದು ಧರ್ಮಶಾಲಾ, ಲಕ್ನೋ ಮತ್ತು ಮುಂಬೈನಲ್ಲಿ ನಡೆಯುವ ಭಾರತ ತಂಡದ ಪಂದ್ಯಗಳ ಟಿಕೆಟ್‌ಗಳು ಮಾರಾಟ ಆರಂಭವಾಗಲಿದ್ದರೆ, ಸೆಪ್ಟೆಂಬರ್ 2 ರಂದು ಬೆಂಗಳೂರು ಮತ್ತು ಕೋಲ್ಕತ್ತಾದಲ್ಲಿನ ಭಾರತ ತಂಡದ ಪಂದ್ಯಗಳ ಟಿಕೆಟ್‌ಗಳು ಮಾರಾಟವಾಗಲಿವೆ.
ಸೆಪ್ಟೆಂಬರ್ 3ರಂದು ಅಹಮದಾಬಾದ್‌ನಲ್ಲಿನ ಪಾಕಿಸ್ತಾನ ವಿರುದ್ಧದ ಭಾರತದ ಪಂದ್ಯದ ಟಿಕೆಟ್ ಮಾರಾಟ ನಡೆಯಲಿದ್ದರೆ, ಸೆಮಿಫೈನಲ್ ಮತ್ತು ಫೈನಲ್ ಪಂದ್ಯದ ಟಿಕೆಟ್‌ಗಳು ಸೆಪ್ಟೆಂಬರ್ 15ರಂದು ಮಾರಾಟ ಮಾಡಲಾಗುತ್ತದೆ.
ಇನ್ನು ಕೆಲವು ವರದಿಗಳ ಪ್ರಕಾರ, 2023ರ ಏಷ್ಯಾ ಕಪ್ ಪಂದ್ಯಾವಳಿಯ ಗ್ರೂಪ್ ಹಂತದಲ್ಲಿ ಬಾಬರ್ ಅಜಂ ನಾಯಕತ್ವದ ಪಾಕಿಸ್ತಾನ ತಂಡದ ವಿರುದ್ಧದ ಪಂದ್ಯದ ಒಂದು ದಿನದ ನಂತರ, ಸೆಪ್ಟೆಂಬರ್ 3ರಂದು ವಿಶ್ವಕಪ್ ಪಂದ್ಯಾವಳಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗುವುದು.
2023ರ ಏಷ್ಯಾ ಕಪ್ ಪಂದ್ಯಾವಳಿಯಲ್ಲಿ ಭಾರತ ತಂಡ ಕೆಲವು ಗಾಯದ ಆತಂಕಗಳೊಂದಿಗೆ ಕಣಕ್ಕಿಳಿಯುತ್ತಿದೆ. ನೇಪಾಳ ಮತ್ತು ಪಾಕಿಸ್ತಾನ ವಿರುದ್ಧದ ಗುಂಪು-ಹಂತದ ಪಂದ್ಯಗಳಿಂದ ಕೆಎಲ್ ರಾಹುಲ್ ಹೊರಗುಳಿಯಲಿದ್ದಾರೆ ಎಂದು ಸ್ವತಃ ಕೋಚ್ ರಾಹುಲ್ ದ್ರಾವಿಡ್ ಖಚಿತಪಡಿಸಿದ್ದಾರೆ.
ಇನ್ನು ಬಲಗೈ ವೇಗಿ ಜಸ್ಪ್ರೀತ್ ಬುಮ್ರಾ ಇತ್ತೀಚೆಗೆ ಗಾಯದಿಂದ ಚೇತರಿಸಿಕೊಂಡು ತಂಡದಲ್ಲಿ ಸ್ಥಾನ ಪಡೆದಿದ್ದಾರೆ ಮತ್ತು ಅವರು ಹೇಗೆ ಪುನರಾಗಮನ ಎಂಬುದನ್ನು ಎದುರು ನೋಡಬೇಕಿದೆ.
ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಏಕದಿನ ಕ್ರಿಕೆಟ್ ಸ್ವರೂಪದಲ್ಲಿ ಒಂದು ದಶಕದಿಂದ ಆಡಿದ ಅನುಭವವನ್ನು ಹೊಂದಿರುವುದರಿಂದ, ದೊಡ್ಡ ಪಾತ್ರಗಳನ್ನು ವಹಿಸುವ ನಿರೀಕ್ಷೆಯಿದೆ. 2013ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಒಂದು ದಶಕದ ಬಳಿಕ ಭಾರತ ತಂಡ ಮತ್ತೊಂದು ಐಸಿಸಿ ಟ್ರೋಫಿ ಗೆಲ್ಲಬಹುದೇ ಎಂಬುದನ್ನು ನೋಡಬೇಕಿದೆ.
2023ರ ಏಷ್ಯಾ ಕಪ್‌ಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications