World Cup 2023: ಏಕದಿನ ಕ್ರಿಕೆಟ್‌ನ ಈ ದಾಖಲೆಯ ಮೇಲೆ ಕಣ್ಣಿಟ್ಟ ವಿರಾಟ್ ಕೊಹ್ಲಿ
ಗುರುವಾರ, ನವೆಂಬರ್ 2ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 2023ರ ಐಸಿಸಿ ಏಕದಿನ ವಿಶ್ವಕಪ್‌ನ 33ನೇ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಸೆಣಸಾಡುತ್ತಿದ್ದು, ಟಾಸ್ ಗೆದ್ದ ಶ್ರೀಲಂಕಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ವಿಶ್ವ ನಂಬರ್ ಒನ್ ಭಾರತ ತಂಡ ಇಂದು (ನವೆಂಬರ್ 2) ವಿಶ್ವಕಪ್‌ನ ತಮ್ಮ ಏಳನೇ ಪಂದ್ಯದಲ್ಲಿ 7ನೇ ಶ್ರೇಯಾಂಕದ ಶ್ರೀಲಂಕಾ ತಂಡವನ್ನು ಎದುರಿಸುತ್ತಿದ್ದು, ಪಂದ್ಯ ಕುತೂಹಲಕಾರಿಯಾಗಿದೆ.

ಉಭಯ ತಂಡಗಳ ನಡುವಿನ 167 ಪಂದ್ಯಗಳ ಮುಖಾಮುಖಿಗಳಲ್ಲಿ ಭಾರತ ತಂಡ 98 ಗೆಲುವುಗಳನ್ನು ಸಾಧಿಸಿದೆ. ಆದರೆ ವಿಶ್ವಕಪ್‌ನಲ್ಲಿ ಹೇಗೆ ಪ್ರತಿದಾಳಿ ಮಾಡಬೇಕೆಂದು ಶ್ರೀಲಂಕಾ ತಂಡಕ್ಕೆ ತಿಳಿದಿದೆ.
ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಉಭಯ ತಂಡಗಳ ನಡುವೆ ಎಂಟು ಪಂದ್ಯಗಳು ನಡೆದಿವೆ. ಅದರಲ್ಲಿ 4-4 ಅಂತರದಲ್ಲಿ ಸಮಬಲ ಸಾಧಿಸಿವೆ. ಪ್ರತಿ ಬಾರಿ ವಿಶ್ವಕಪ್‌ನಲ್ಲಿ ಶ್ರೀಲಂಕಾ ತಂಡವು ಭಾರತಕ್ಕೆ ಕಠಿಣ ಸವಾಲನ್ನು ಒಡ್ಡುತ್ತದೆ. ಹೀಗಿರುವಾಗ ಇಂದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ದೊಡ್ಡ ದಾಖಲೆಗಳನ್ನು ಮಾಡುವ ಉದ್ದೇಶವನ್ನು ಹೊಂದಿದ್ದಾರೆ.
ವಿರಾಟ್ ಕೊಹ್ಲಿಗೆ ಸಚಿನ್ ಸರಿಗಟ್ಟುವ ತವಕ
ಪ್ರಸಕ್ತ ವಿಶ್ವಕಪ್ ಪಂದ್ಯಾವಳಿಯಲ್ಲಿ ಒಂದು ಶತಕ ಮತ್ತು ಮೂರು ಅರ್ಧಶತಕಗಳನ್ನು ಸಿಡಿಸಿರುವ ವಿರಾಟ್ ಕೊಹ್ಲಿ, ಒಟ್ಟಾರೆ ಏಕದಿನ ಕ್ರಿಕೆಟ್‌ನಲ್ಲಿ 48 ಶತಕಗಳನ್ನು ಬಾರಿಸಿದ್ದಾರೆ.

ಇಂದು ಐತಿಹಾಸಿಕ ಮುಂಬೈನ ವಾಂಖೆಡೆ ಮೈದಾನದಲ್ಲಿ ಮತ್ತೊಂದು ಶತಕ ಬಾರಿಸಿದರೆ, ಏಕದಿನ ಕ್ರಿಕೆಟ್ ಮಾದರಿಯಲ್ಲಿ ಸಚಿನ್ ತೆಂಡೂಲ್ಕರ್ ಅವರ 49 ಶತಕಗಳ ದಾಖಲೆಯನ್ನು ವಿರಾಟ್ ಕೊಹ್ಲಿ ಸರಿಗಟ್ಟಲಿದ್ದಾರೆ. ಕುತೂಹಲಕಾರಿ ಸಂಗತಿಯೆಂದರೆ, ಸಚಿನ್ 49 ಶತಕಗಳನ್ನು ಗಳಿಸಲು 463 ಏಕದಿನ ಪಂದ್ಯಗಳನ್ನು ತೆಗೆದುಕೊಂಡಿದ್ದರೆ, ವಿರಾಟ್ ಕೊಹ್ಲಿ ಕೇವಲ 286 ಏಕದಿನ ಪಂದ್ಯಗಳಲ್ಲಿ 48 ಶತಕಗಳನ್ನು ತಲುಪಿದ್ದಾರೆ.
ಇನ್ನು ಈ ವಿಶ್ವಕಪ್ ಟೂರ್ನಿಯಲ್ಲಿ ಅಮೋಘ ಫಾರ್ಮ್‌ನಲ್ಲಿರುವ ವಿರಾಟ್ ಕೊಹ್ಲಿ ಇಂದಿನ ಪಂದ್ಯದಲ್ಲಿ 34 ರನ್ ಗಳಿಸಿದರೆ, ಈ ವರ್ಷ ಅಂದರೆ 2023ರಲ್ಲಿ 1000 ಅಂತಾರಾಷ್ಟ್ರೀಯ ಏಕದಿನ ರನ್ ಪೂರೈಸಲಿದ್ದಾರೆ.
ವಿರಾಟ್ ಕೊಹ್ಲಿ ಈ ವರ್ಷ ಇದುವರೆಗೆ 22 ಪಂದ್ಯಗಳನ್ನು ಆಡಿದ್ದು, 19 ಇನ್ನಿಂಗ್ಸ್‌ಗಳಲ್ಲಿ 64.40ರ ಸರಾಸರಿಯೊಂದಿಗೆ 966 ರನ್ ಗಳಿಸಿದ್ದಾರೆ. ಈ ವರ್ಷ ವಿರಾಟ್ ಕೊಹ್ಲಿ ನಾಲ್ಕು ಶತಕ ಹಾಗೂ ಐದು ಅರ್ಧ ಶತಕ ಸಿಡಿಸಿದ್ದಾರೆ. ವಿರಾಟ್ ಕೊಹ್ಲಿ ಅವರ ಅತ್ಯುತ್ತಮ ಸ್ಕೋರ್ 166 ರನ್ ಆಗಿದೆ.
ತವರು ನೆಲದಲ್ಲಿ ಘರ್ಜಿಸಲಿದ್ದಾರಾ ರೋಹಿತ್ ಶರ್ಮಾ
ರೋಹಿತ್ ಶರ್ಮಾಗೆ ವಾಂಖೆಡೆ ಸ್ಟೇಡಿಯಂ ವಿಶೇಷವಾಗಿದೆ. ಏಕೆಂದರೆ ಇದು ಅವರ ತವರು ನೆಲ. ಅವರು ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ನಾಯಕರಾಗಿದ್ದಾರೆ. ಆದರೆ ರೋಹಿತ್ ಶರ್ಮಾ ಅವರ ತವರು ನೆಲದಲ್ಲಿ ಏಕದಿನ ಅಂತಾರಾಷ್ಟ್ರೀಯ ಪಂದ್ಯದ ದಾಖಲೆ ತುಂಬಾ ಕೆಟ್ಟದಾಗಿದೆ.
ರೋಹಿತ್ ಶರ್ಮಾ ವಾಂಖೆಡೆ ಸ್ಟೇಡಿಯಂನಲ್ಲಿ ಆಡಿದ ಮೂರು ಏಕದಿನ ಪಂದ್ಯಗಳಲ್ಲಿ ಕೇವಲ 46 ರನ್ ಗಳಿಸಿದ್ದಾರೆ. 20 ರನ್ ಅವರ ಗರಿಷ್ಠ ಸ್ಕೋರ್ ಆಗಿದೆ.
ಈ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ಒಂದು ಶತಕ ಮತ್ತು ಎರಡು ದೊಡ್ಡ ಅರ್ಧಶತಕಗಳನ್ನು ಗಳಿಸಿದ್ದಾರೆ. ಪಂದ್ಯಕ್ಕೂ ಮುನ್ನ ಪತ್ರಿಕಾಗೋಷ್ಠಿಗೆ ಬಂದಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಬ್ಯಾಟಿಂಗ್ ಮಾಡುವುದನ್ನು ನಾನು ಎಂಜಾಯ್ ಮಾಡುತ್ತಿದ್ದೇನೆ ಎಂದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications