Virat Kohli: ಶ್ರೀಲಂಕಾ ವಿರುದ್ಧ 88 ರನ್ ಬಾರಿಸಿ 5 ದಾಖಲೆ ನಿರ್ಮಿಸಿದ ವಿರಾಟ್ ಕೊಹ್ಲಿ
ಗುರುವಾರ, ನವೆಂಬರ್ 2ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ 33ನೇ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಶ್ರೀಲಂಕಾ ತಂಡವನ್ನು 302 ರನ್‌ಗಳ ಬೃಹತ್ ಅಂತರದಿಂದ ಮಣಿಸಿದೆ.
ಟೀಮ್ ಇಂಡಿಯಾ 2023ರ ಏಕದಿನ ವಿಶ್ವಕಪ್‌ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದೆ. ಆಡಿದ ಏಳು ಪಂದ್ಯಗಳನ್ನೂ ಗೆದ್ದಿರುವ ಭಾರತ ಸೆಮಿಫೈನಲ್ ಪ್ರವೇಶಿಸಿದ ಮೊದಲ ತಂಡವೆನಿಸಿತು. ಇನ್ನು ತಂಡದ ಸಂಘಟಿತ ಪ್ರದರ್ಶನ ಎಲ್ಲರ ಚಿತ್ತ ಕದ್ದಿದೆ.

ಮುಂಬೈನ ವಾಂಖೆಡೆ ಅಂಗಳದಲ್ಲೂ ಟೀಮ್ ಇಂಡಿಯಾ ಎಲ್ಲ ವಿಭಾಗದಲ್ಲಿಯೂ ಅಮೋಘ ಪ್ರದರ್ಶನ ನೀಡಿ ಗೆಲುವು ಸಾಧಿಸಿತು. ಈ ಮೂಲಕ ವಿಶ್ವಕಪ್ ಇತಿಹಾಸದಲ್ಲಿ ಎಂಟನೇ ಬಾರಿಗೆ ಸೆಮಿಫೈನಲ್ ಪ್ರವೇಶಿಸಿದ ಸಾಧನೆ ಮಾಡಿದೆ.
ಟೀಮ್ ಇಂಡಿಯಾ ಈ ಗೆಲುವಿನಲ್ಲಿ ಅನೇಕ ಆಟಗಾರರು ಬೆವರು ಹರಿಸಿದ್ದಾರೆ. ಈ ಎಲ್ಲ ಆಟಗಾರರ ನಡುವೆ ಎದ್ದು ಕಾಣುವ ಒಂದು ಹೆಸರು ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ.
ಟೀಮ್ ಇಂಡಿಯಾದ ರನ್ ಮಷಿನ್ ವಿರಾಟ್ ಕೊಹ್ಲಿ, ಏಕದಿನ ವಿಶ್ವಕಪ್‌ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನವನ್ನು ನೀಡುತ್ತಿದ್ದಾರೆ. ಸಿಕ್ಕ ಅವಕಾಶದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಭಾರತ ತಂಡದ ಗೆಲುವಿಗೆ ನೆರವಾಗುತ್ತಿದ್ದಾರೆ.

ಗುರುವಾರ ಶ್ರೀಲಂಕಾ ವಿರುದ್ಧ ನಡೆದ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಭರ್ಜರಿ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದರು. ಈ ವೇಳೆ ವಿರಾಟ್ ಕೊಹ್ಲಿ 12 ರನ್‌ಗಳಿಂದ 49ನೇ ಏಕದಿನ ಶತಕದಿಂದ ವಂಚಿತರಾದರು. ಆದರೆ ಚೇಸ್ ಮಾಸ್ಟರ್ ಕೊಹ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ.
ಏಷ್ಯಾ ಖಂಡದಲ್ಲಿ ವೇಗವಾಗಿ 8000 ರನ್
ಗುರುವಾರ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಇದರಲ್ಲಿ ಪ್ರಮುಖವಾಗಿ ಎದ್ದು ಕಾಣುವ ದಾಖಲೆ ಅಂದರೆ, ವಿರಾಟ್ ಕೊಹ್ಲಿ ಏಷ್ಯಾ ಖಂಡದಲ್ಲಿ ವೇಗವಾಗಿ 8000 ರನ್ ಕಲೆ ಹಾಕಿದ ಮೊದಲ ಆಟಗಾರ ಎಂಬ ಖ್ಯಾತಿ ತಮ್ಮದಾಗಿಸಿಕೊಂಡರು.
ಒಂದೇ ಕ್ಯಾಲೆಂಡರ್ ವರ್ಷದಲ್ಲಿ 1000ಕ್ಕೂ ಅಧಿಕ ಏಕದಿನ ರನ್
ಭಾರತ ತಂಡದ ಪರ ಒಂದೇ ಕ್ಯಾಲೆಂಡರ್ ವರ್ಷದಲ್ಲಿ 1000ಕ್ಕೂ ಹೆಚ್ಚು ಏಕದಿನ ರನ್‌ಗಳನ್ನು ಬಾರಿಸಿದ ದಾಖಲೆಯನ್ನು ವಿರಾಟ್ ಕೊಹ್ಲಿ ಬರೆದರು. 2023ರಲ್ಲಿ ಈ ಸಾಧನೆ ಮಾಡಿದ ಮೂರನೇ ಭಾರತೀಯ ಬ್ಯಾಟರ್ ವಿರಾಟ್ ಕೊಹ್ಲಿ ಆದರು. ಇದಕ್ಕೂ ಮುನ್ನ ಶುಭ್ಮನ್ ಗಿಲ್ ಮತ್ತು ನಾಯಕ ರೋಹಿತ್ ಶರ್ಮಾ ಪಂದ್ಯಗಳಲ್ಲಿ 1000ಕ್ಕೂ ಅಧಿಕ ಏಕದಿನ ರನ್ ಗಳಿಸಿದ್ದಾರೆ.
ಎಂಟನೇ ಬಾರಿ 1000ಕ್ಕೂ ಅಧಿಕ ಏಕದಿನ ರನ್ ದಾಖಲೆ ಬರೆದ ವಿರಾಟ್
ಭಾರತದ ಸಾರ್ವಕಾಲಿಕ ಶ್ರೇಷ್ಠ ಬ್ಯಾಟರ್ ವಿರಾಟ್ ಕೊಹ್ಲಿ ಪ್ರಸಕ್ತ ವರ್ಷದಲ್ಲಿ ಉತ್ತಮ ಫಾರ್ಮ್‌ನಲ್ಲಿದ್ದು, 1000 ಏಕದಿನ ರನ್ ಕಲೆ ಹಾಕಿದ್ದಾರೆ. ಅಲ್ಲದೆ ಈ ಸಾಧನೆಯನ್ನು ಎಂಟನೇ ಬಾರಿ ಮಾಡಿದ್ದಾರೆ. ಇದಕ್ಕೂ ಮೊದಲು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ 7 ಬಾರಿ ಈ ಸಾಧನೆಯನ್ನು ಮಾಡಿದ್ದರು. ದಿಗ್ಗಜ ಬ್ಯಾಟರ್‌ನನ್ನು ಹಿಂದಿಕ್ಕಿದ್ದಾರೆ.
ಶ್ರೀಲಂಕಾ ವಿರುದ್ಧ 4000 ಅಂತಾರಾಷ್ಟ್ರೀಯ ರನ್
ಇನ್ನು ಶ್ರೀಲಂಕಾ ವಿರುದ್ಧದ 4000ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ರನ್ ಬಾರಿಸಿದ ಕೀರ್ತಿಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ವಿಶ್ವಕಪ್‌ನಲ್ಲಿ ಆರಂಭಿಕ ಆಟಗಾರನಲ್ಲದೆ ಅತಿ ಹೆಚ್ಚು ಅರ್ಧಶತಕ ಬಾರಿಸಿದ ಮೈಲಿಗಲ್ಲು ಸ್ಥಾಪಿಸಿದರು.
ಪ್ರಸಕ್ತ 2023ರ ಏಕದಿನ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಭಾರತ ತಂಡದ ಪರ ಗರಿಷ್ಠ ರನ್ ಬಾರಿಸಿ ಮುನ್ನುಗುತ್ತಿದ್ದಾರೆ ಮತ್ತು ಇನ್ನೂ ಹಲವು ದಾಖಲೆಗಳನ್ನು ಮುರಿಯುವ ಸಮೀಪದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications