For Quick Alerts
ALLOW NOTIFICATIONS  
For Daily Alerts
 
World Cup 2023: ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಮಿಂಚು; ಭಾರತಕ್ಕೆ ಸುಲಭ ತುತ್ತಾದ ಬಲಿಷ್ಠ ದಕ್ಷಿಣ ಆಫ್ರಿಕಾ

ಭಾನುವಾರ, ನವೆಂಬರ್ 5ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ 37ನೇ ಹೈ-ವೋಲ್ಟೇಜ್ ಪಂದ್ಯದಲ್ಲಿ ಬಲಿಷ್ಠವೆನಿಸಿದ್ದ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಭಾರತ ತಂಡ 243 ರನ್‌ಗಳ ಭರ್ಜರಿ ಗೆಲುವು ದಾಖಲಿಸಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ವಿರಾಟ್ ಕೊಹ್ಲಿಯ ದಾಖಲೆಯ ಶತಕದ ನೆರವಿನಿಂದ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 326 ರನ್ ಕಲೆಹಾಕಿತು.

ICC World Cup 2023: Virat Kohlis Century Helps To India Defeat South Africa By 243 Runs

326 ರನ್‌ಗಳ ಸವಾಲಿನ ಮೊತ್ತ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ ಭಾರತದ ಮಾರಕ ಬೌಲಿಂಗ್ ದಾಳಿಗೆ ಸಿಲುಕಿ 27.1 ಓವರ್‌ಗಳಲ್ಲಿ 83 ರನ್‌ಗಳಿಗೆ ಸರ್ವಪತನ ಕಂಡು ಹೀನಾಯ ಸೋಲು ಅನುಭವಿಸಿತು.

ಭಾರತ ತಂಡದ ಬ್ಯಾಟಿಂಗ್ ಇನ್ನಿಂಗ್ಸ್‌ನಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ 24 ಎಸೆತಗಳಲ್ಲಿ 6 ಬೌಂಡರಿ ಮತ್ತು 2 ಸಿಕ್ಸರ್ ಸಮೇತ 40 ರನ್ ಬಾರಿಸಿದರೆ, ಶುಭ್ಮನ್ ಗಿಲ್ 24 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 23 ರನ್ ಗಳಿಸಿದರು.

ನಂತರ ಲೆಜೆಂಡ್ ಕ್ರಿಕೆಟಿಗ ವಿರಾಟ್ ಕೊಹ್ಲಿ 121 ಎಸೆತಗಳಲ್ಲಿ 10 ಬೌಂಡರಿಗಳ ಸಮೇತ ಅಜೇಯ 101 ರನ್ ಗಳಿಸುವ ಮೂಲಕ 49ನೇ ಏಕದಿನ ಶತಕ ಪೂರೈಸಿದರು. ಅಲ್ಲದೆ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಸರಿಗಟ್ಟಿದರು.

ಶ್ರೇಯಸ್ ಅಯ್ಯರ್ 87 ಎಸೆತಗಳಲ್ಲಿ 7 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 77 ರನ್ ಬಾರಿಸಿದರೆ, ಕೆಎಲ್ ರಾಹುಲ್ 8 ರನ್, ಸೂರ್ಯಕುಮಾರ್ ಯಾದವ್ 22 ರನ್, ರವೀಂದ್ರ ಜಡೇಜಾ 29 ರನ್ ಗಳಿಸಿ ತಂಡದ ಮೊತ್ತ 320ರ ಗಡಿ ದಾಟಿಸಿದರು.

ICC World Cup 2023: Virat Kohlis Century Helps To India Defeat South Africa By 243 Runs

ಬೌಲಿಂಗ್‌ನಲ್ಲಿ ದಕ್ಷಿಣ ಆಫ್ರಿಕಾ ಪರ ಮಾರ್ಕೊ ಜಾನ್ಸೆನ್, ಕಗಿಸೊ ರಬಾಡ, ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ, ತಬ್ರೇಜ್ ಶಮ್ಸಿ ತಲಾ ಒಂದೊಂದು ವಿಕೆಟ್ ಪಡೆದರು.

ಇನ್ನು ದಕ್ಷಿಣ ಆಫ್ರಿಕಾದ ಬ್ಯಾಟಿಂಗ್ ಇನ್ನಿಂಗ್ಸ್‌ನಲ್ಲಿ ಯಾವೊಬ್ಬ ಬ್ಯಾಟರ್‌ಗಳು 15 ರನ್‌ಗಳಿಗಿಂತ ಹೆಚ್ಚು ರನ್ ಗಳಿಸಲು ವಿಫಲರಾದರು. ಕ್ವಿಂಟನ್ ಡಿ ಕಾಕ್ 5 ರನ್, ಟೆಂಬಾ ಬವುಮಾ 11 ರನ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ 13 ರನ್, ಐಡೆನ್ ಮಾರ್ಕ್ರಾಮ್ 9 ರನ್, ಡೇವಿಡ್ ಮಿಲ್ಲರ್ 11 ರನ್, ಹೆನ್ರಿಚ್ ಕ್ಲಾಸೆನ್ 1 ರನ್, ಮಾರ್ಕೊ ಜಾನ್ಸೆನ್ 14 ರನ್, ಕಗಿಸೊ ರಬಾಡ 6 ರನ್, ತಬ್ರೇಜ್ ಶಮ್ಸಿ 4 ರನ್ ಮಾತ್ರ ಗಳಿಸಿದರು.

ಬೌಲಿಂಗ್‌ನಲ್ಲಿ ಭಾರತ ತಂಡದ ಪರ ರವೀಂದ್ರ ಜಡೇಜಾ 9 ಓವರ್‌ಗಳಲ್ಲಿ 33 ರನ್ ನೀಡಿ 5 ವಿಕೆಟ್‌ಗಳ ಗೊಂಚಲು ಪಡೆದರೆ, ಮೊಹಮ್ಮದ್ ಶಮಿ 4 ಓವರ್‌ಗಳಲ್ಲಿ 18 ರನ್ ನೀಡಿ 2 ವಿಕೆಟ್, ಕುಲದೀಪ್ ಯಾದವ್ 5.1 ಓವರ್‌ಗಳಲ್ಲಿ 7 ರನ್ ನೀಡಿ 2 ವಿಕೆಟ್ ಪಡೆದು ಮಿಂಚಿದರು. ಉಳಿದಂತೆ ಮೊಹಮ್ಮದ್ ಸಿರಾಜ್ ಒಂದು ವಿಕೆಟ್ ಕಬಳಿಸಿದರು.

Story first published: Sunday, November 5, 2023, 20:49 [IST]
Other articles published on Nov 5, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+