2023ರ ಏಕದಿನ ವಿಶ್ವಕಪ್ ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತದ ಪಂದ್ಯಗಳು ಯಾವಾಗ? ಎಲ್ಲಿ?
ಬಹು ನಿರೀಕ್ಷಿತ 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾಗವಹಿಸುವ ಎಲ್ಲಾ 10 ತಂಡಗಳಿಗೆ ಅಧಿಕೃತ ಅಭ್ಯಾಸ ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಅಭ್ಯಾಸ ಪಂದ್ಯಗಳು ಸೆಪ್ಟೆಂಬರ್ 29ರಿಂದ ಅಕ್ಟೋಬರ್ 3ರವರೆಗೆ ಭಾರತದ ಗುವಾಹಟಿ, ಹೈದರಾಬಾದ್ ಮತ್ತು ತಿರುವನಂತಪುರಂ ಮೂರು ಸ್ಥಳಗಳಲ್ಲಿ ನಡೆಯಲಿವೆ.

ಭಾರತ ತಂಡವು ತನ್ನ ಎರಡು ಅಭ್ಯಾಸ ಪಂದ್ಯಗಳಲ್ಲಿ ಸೆಪ್ಟೆಂಬರ್ 30ರಂದು ಗುವಾಹಟಿಯಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಎದುರಿಸಲಿದ್ದರೆ, ಅಕ್ಟೋಬರ್ 3ರಂದು ತಿರುವನಂತಪುರದಲ್ಲಿ ನಡೆಯಲಿರುವ ತನ್ನ ಎರಡನೇ ಅಭ್ಯಾಸ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು ಎದುರಿಸದೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಅಧಿಕೃತ ಅಭ್ಯಾಸ ಪಂದ್ಯಗಳನ್ನು ಬುಧವಾರ, ಆಗಸ್ಟ್ 23ರಂದು ಘೋಷಿಸಿತು. ಅಕ್ಟೋಬರ್ 5ರಂದು ಪಂದ್ಯಾವಳಿಯು ಪ್ರಾರಂಭವಾಗುವ ಮೊದಲು ಪ್ರತಿ ತಂಡವು 2 ಅಭ್ಯಾಸ ಪಂದ್ಯಗಳನ್ನು ಆಡುತ್ತವೆ.
ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಪ್ರಾರಂಭವಾಗುತ್ತವೆ ಮತ್ತು ಎಲ್ಲಾ ತಂಡಗಳು ತಮ್ಮ ತಂಡದಲ್ಲಿರುವ ಎಲ್ಲಾ 15 ಸದಸ್ಯರನ್ನು ಆಡಿಸಲು ಅನುಮತಿಸಲಾಗುತ್ತದೆ.
ಇನ್ನು ಅಧಿಕೃತ ಪಂದ್ಯಾವಳಿಯಲ್ಲಿ ಭಾರತ ತಂಡದ ಅಭಿಯಾನವು ಅಕ್ಟೋಬರ್ 8ರಂದು ಐದು ಬಾರಿಯ ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದೊಂದಿಗೆ ಆರಂಭವಾಗುತ್ತದೆ. ಎರಡು ಬಲಿಷ್ಠ ತಂಡಗಳ ನಡುವಿನ ಈ ಪಂದ್ಯ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ.
ಇದಾದ ಬಳಿಕ ಬಹು ನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ-ವೋಲ್ಟೇಜ್ ಪಂದ್ಯವು ಅಕ್ಟೋಬರ್ 14ರ ಶನಿವಾರದಂದು ಅಹಮದಾಬಾದ್‌ನಲ್ಲಿ ನಿಗದಿಯಾಗಿದೆ.
2019ರ ವಿಶ್ವಕಪ್‌ನಲ್ಲಿ ಭಾರತವು ಭರ್ಜರಿ ಗೆಲುವು ಗಳಿಸಿದ ಅವರ ಕೊನೆಯ ಸೆಣಸಾಟವನ್ನು ನೆನಪಿಸುವ ಈ ಮುಖಾಮುಖಿಯು ಹೆಚ್ಚಿನ ಸ್ಕೋರಿಂಗ್ ಪಂದ್ಯವಾಗಿರಲಿದೆ ಎಂದು ನಿರೀಕ್ಷಿಸಲಾಗಿದೆ.
ಇದಕ್ಕೂ ಮುನ್ನ ಸೆಪ್ಟೆಂಬರ್ 27ರಂದು ಕೊನೆಗೊಳ್ಳುವ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ 3 ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಮೊದಲ ಅಭ್ಯಾಸ ಪಂದ್ಯಕ್ಕೆ 2 ದಿನಗಳ ಮೊದಲು ದ್ವಿಪಕ್ಷೀಯ ಸರಣಿ ಆಡಲಿದ್ದಾರೆ.
ಅಭ್ಯಾಸ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ
ಸೆಪ್ಟೆಂಬರ್ 29, ಶುಕ್ರವಾರದ ಪಂದ್ಯಗಳು
ಬಾಂಗ್ಲಾದೇಶ vs ಶ್ರೀಲಂಕಾ - ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ
ದಕ್ಷಿಣ ಆಫ್ರಿಕಾ vs ಅಫ್ಘಾನಿಸ್ತಾನ - ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣ, ತಿರುವನಂತಪುರಂ
ನ್ಯೂಜಿಲೆಂಡ್ vs ಪಾಕಿಸ್ತಾನ - ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣ, ಹೈದರಾಬಾದ್
ಸೆಪ್ಟೆಂಬರ್ 30, ಶನಿವಾರದ ಪಂದ್ಯಗಳು
ಭಾರತ vs ಇಂಗ್ಲೆಂಡ್ - ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ
ಆಸ್ಟ್ರೇಲಿಯಾ vs ನೆದರ್ಲ್ಯಾಂಡ್ಸ್ - ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣ, ತಿರುವನಂತಪುರಂ
ಅಕ್ಟೋಬರ್ 2, ಸೋಮವಾರದ ಪಂದ್ಯಗಳು
ಇಂಗ್ಲೆಂಡ್ vs ಬಾಂಗ್ಲಾದೇಶ - ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ
ನ್ಯೂಜಿಲೆಂಡ್ vs ದಕ್ಷಿಣ ಆಫ್ರಿಕಾ - ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣ, ತಿರುವನಂತಪುರಂ
ಅಕ್ಟೋಬರ್ 3, ಮಂಗಳವಾರದ ಪಂದ್ಯಗಳು
ಅಫ್ಘಾನಿಸ್ತಾನ vs ಶ್ರೀಲಂಕಾ - ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ
ಭಾರತ vs ನೆದರ್ಲ್ಯಾಂಡ್ಸ್ - ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣ, ತಿರುವನಂತಪುರಂ
ಪಾಕಿಸ್ತಾನ vs ಆಸ್ಟ್ರೇಲಿಯಾ - ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣ, ಹೈದರಾಬಾದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications