ವಿಶ್ವಕಪ್: ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ vs ನ್ಯೂಜಿಲೆಂಡ್ ಸೆಣೆಸಾಟ: ರೋಚಕ ಕಾದಾಟಕ್ಕೆ ಅಡ್ಡಿಯಾಗಲಿದೆಯಾ ಮಳೆ?
2023ನೇ ಆವೃತ್ತಿ ವಿಶ್ವಕಪ್ ಟೂರ್ನಿಗೆ ಗುರುವಾರ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಚಾಲನೆ ದೊರೆಯಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಎರಡು ತಂಡಗಳು ಕೂಡ ಈ ಉದ್ಘಾಟನಾ ಪಂದ್ಯಕ್ಕೆ ಸರ್ವ ಸನ್ನಧವಾಗಿದ್ದು ತೀವ್ರ ಕುತೂಹಲ ಮೂಡಿಸಿದೆ.
ಇನ್ನು ಈ ಬಾರಿಯ ವಿಶ್ವಕಪ್ ಟೂರ್ನಿಯ ಅಧಿಕೃತ ಪಂದ್ಯಗಳು ಆರಂಭವಾಗುವುದಕ್ಕೂ ಮುನ್ನ ಎಲ್ಲಾ ತಂಡಗಳಿಗೂ ತಲಾ ಎರಡು ಅಬ್ಯಾಸ ಪಂದ್ಯಗಳನ್ನು ಆಯೋಜನೆ ಮಾಡಲಾಗಿತ್ತು. ಆದರೆ ಈ ಪಂದ್ಯಗಳು ಬಹುತೇಕ ಮಳೆಯಿಂದಾಗಿ ಅಡ್ಡಿಯಾಗಿದ್ದವು. ಕೆಲ ಪಂದ್ಯಗಳು ಸಂಪೂರ್ಣವಾಗಿ ರದ್ದಾಗಿದ್ದರೆ ಇನ್ನೂ ಕೆಲ ಪಂದ್ಯಗಳು ಓವರ್ ಕಡಿತಗೊಳಿಸಿ ಆಯೋಜಿಸಲಾಗಿತ್ತು. ಇದೀಗ ವಿಶ್ವಕಪ್ ಟೂರ್ನಿಗೂ ಮಳೆ ಅಡ್ಡಿಯುಂಟು ಮಾಎಉವ ಆತಂಕಗಳು ಅಭಿಮಾನಿಗಳಲ್ಲಿ ಇದ್ದೇ ಇದೆ.

ಇದೀಗ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ವಿಶ್ವಕಪ್‌ನ ಮೊದಲ ಪಂದ್ಯಕ್ಕೂ ಮಳೆ ಅಡ್ಡಿಯಂಟು ಮಾಡಲಿದೆಯಾ ಎನ್ನುವ ಆತಂಕ ಅಭಿಮಾನಿಗಳಲ್ಲಿದೆ.
ಮೊದಲ ಪಂದ್ಯಕ್ಕೆ ಇದೆಯಾ ಮಳೆಯ ಆತಂಕ
ದೇಶದ ಬಹುತೇ ಭಾಗಗಳು ಈ ಸಂದರ್ಭದಲ್ಲಿ ಮಳೆಯಾಗುತ್ತಿದೆ. ಹಾಗಿದ್ದರೂ ಗುರುವಾರ ಅಹ್ಮದಾಬಾದ್‌ನಲ್ಲಿ ನಡೆಯಲಿರುವ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳ ವಿರುದ್ಧದ ಪಂದ್ಯಕ್ಕೆ ಮಳೆಯ ಆತಂಕವಿಲ್ಲ.ಹವಾಮಾನ ವರದಿಯ ಪ್ರಕಾರ ಸೆಪ್ಟೆಂಬರ್ 5 ಅಹ್ಮದಾಬಾದ್ ನಗರ ಬಿಸಿಲಿನಿಂದ ಕೂಡಿದ ವಾತಾವರಣವನ್ನು ಹೊಂದಿರಲಿದೆ. 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶವಾಗಿರಲಿದ್ದು 28 ಡಿಗ್ರಿ ರಾತ್ರಿಯ ಸಂದರ್ಭದಲ್ಲಿ ಉಷ್ಣಾಂಶವಿರುವ ನಿರೀಕ್ಷೆಯಿದೆ.
ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಲ & ವಿಕೆಟ್ ಕೀಪರ್), ಜಾನಿ ಬೈರ್‌ಸ್ಟೋ, ಡೇವಿಡ್ ಮಲನ್, ಜೋ ರೂಟ್, ಬೆನ್ ಸ್ಟೋಕ್ಸ್, ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್, ಹ್ಯಾರಿ ಬ್ರೂಕ್, ಗಸ್ ಅಟ್ಕಿನ್ಸನ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ
ನ್ಯೂಜಿಲೆಂಡ್ ತಂಡ: ಟಾಮ್ ಲ್ಯಾಥಮ್ (ನಾಯಕ & ವಿಕೆಟ್ ಕೀಪರ್), ಡೆವೊನ್ ಕಾನ್ವೇ, ವಿಲ್ ಯಂಗ್, ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಇಶ್ ಸೋಧಿ, ಮ್ಯಾಟ್ ಹೆನ್ರಿ, ಟ್ರೆಂಟ್ ಬೌಲ್ಟ್, ಲಾಕಿ ಫರ್ಗುಸನ್, ಟಿಮ್ ಸೌಥಿ, ಮಿಚೆಲ್ ಸ್ಯಾಂಟ್ನರ್, ಜೇಮ್ಸ್ ನೀಶಮ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications