Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಆಸೀಸ್: ಪಂದ್ಯಕ್ಕೂ ಮೊದಲೇ ಗೆಲ್ಲೋ ತಂಡ ಊಹಿಸಿದ ಅಖ್ತರ್!

ICC World Cup, India vs Australia: Akhtar predicts the winner

ಲಂಡನ್, ಜೂನ್ 9: ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ಭಾನುವಾರ (ಜೂನ್ 9) ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಹೈ ವೋಲ್ಟೇಜ್ ಪಂದ್ಯಕ್ಕಾಗಿ ಮೈದಾನಕ್ಕಿಳಿದಿವೆ. ಈ ಪಂದ್ಯ ನಡೆಯುವುದಕ್ಕೂ ಮೊದಲೇ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ವೇಗಿ ಶೋಯೆಬ್ ಅಖ್ತರ್ ಪಂದ್ಯದಲ್ಲಿ ಗೆಲ್ಲೋ ತಂಡ ಯಾವುದೆಂದು ಹೇಳಿದ್ದಾರೆ.

ಕುತೂಹಲಕಾರಿ ಸ್ಟೋರಿಗಳು, ಅಂಕಿ-ಅಂಶಗಳು 'ಐಸಿಸಿ ಕ್ರಿಕೆಟ್ ವಿಶ್ವಕಪ್ 2019' ವಿಶೇಷ ಮುಖಪುಟದಲ್ಲಿವೆ

ಐಸಿಸಿ ವಿಶ್ವಕಪ್ 2019ರ 14ನೇ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿರುವ ಭಾರತ-ಆಸ್ಟ್ರೇಲಿಯಾ ತಂಡಗಳು ವಿಶ್ವಕಪ್‌ನಲ್ಲಿ ಹೀಗೆ ಎದುರುಬದುರಾಗುತ್ತಿರುವುದು ಇದು 12ನೇ ಸಾರಿ. ಈ ಮೊದಲು 3ರಲ್ಲಿ ಭಾರತ, 8ರಲ್ಲಿ ಆಸ್ಟ್ರೇಲಿಯಾ ತಂಡಗಳು ಗೆದ್ದಿವೆ. ಆದರೆ ಈ ಬಾರಿ ವಿರಾಟ್ ಕೊಹ್ಲಿ ಬಳಗ ಗೆಲ್ಲುತ್ತದೆ ಎಂದು ಅಖ್ತರ್ ಹೇಳಿದ್ದಾರೆ.

ಭಾರತ vs ಆಸ್ಟ್ರೇಲಿಯಾ ಪಂದ್ಯ, ಜೂನ್ 9, Live ಸ್ಕೋರ್‌ಕಾರ್ಡ್

1
43657

'ಎದುರಾಳಿ ತಂಡಕ್ಕೆ ಒತ್ತಡ ಹೇರುವಲ್ಲಿ ಭಾರತ ಸಾಕಷ್ಟು ಪ್ರಬಲವಾಗಿದೆ. ತಂಡದ ಬೌಲಿಂಗ್ ವಿಭಾಗ ಹೆಚ್ಚು ಬಲಿಷ್ಠವಾಗಿದೆ. ಹೀಗಾಗಿ ಭಾರತ vs ಆಸ್ಟ್ರೇಲಿಯಾ ಪಂದ್ಯದಲ್ಲಿ ಭಾರತಕ್ಕಿಂತಲೂ ಆಸ್ಟ್ರೇಲಿಯಾದ ಮೇಲೆ ಒತ್ತಡ ಹೆಚ್ಚು. ಹೀಗಾಗಿ ನನ್ನ ಮಟ್ಟಿಗೆ ಭಾರತ ಗೆಲ್ಲುವ ನೆಚ್ಚಿನ ತಂಡ' ಎಂದು ಅಖ್ತರ್ ಹೇಳಿದ್ದಾರೆ.

ವಿಶ್ವಕಪ್‌ನಲ್ಲಿ ಆಡಿರುವ 2 ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ, ಕ್ರಮವಾಗಿ ಅಫ್ಘಾನಿಸ್ತಾನ ವಿರುದ್ಧ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಗೆದ್ದಿದೆ. ಇತ್ತ ಭಾರತ ತಂಡ ಆರಂಭಿಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಜಯ ಗಳಿಸಿದೆ. ಭಾನುವಾರ ಗೆಲ್ಲುವ ತಂಡಕ್ಕೆ ಸೆಮಿಫೈನಲ್ ಹಾಕಿ ಸುಗಮಗೊಳ್ಳಲಿದೆ.

Story first published: Sunday, June 9, 2019, 15:22 [IST]
Other articles published on Jun 9, 2019
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+