For Quick Alerts
ALLOW NOTIFICATIONS  
For Daily Alerts
 

ವಿಶ್ವಕಪ್ 2023: ಗ್ಲೆನ್ ಮ್ಯಾಕ್ಸ್‌ವೆಲ್ ಬಳಿಕ ಆಸೀಸ್‌ಗೆ ಮತ್ತೊಂದು ಆಘಾತ; ಸ್ಟಾರ್ ಆಲ್‌ರೌಂಡರ್ ತವರಿಗೆ ವಾಪಸ್!

ಶನಿವಾರ, ನವೆಂಬರ್ 4ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡ ಸೆಣಸಾಡಲಿದೆ.

ಈ ಮಹತ್ವದ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡದ ಗ್ಲೆನ್ ಮ್ಯಾಕ್ಸ್‌ವೆಲ್ ಗಾಯದ ಕಾರಣ ಅಲಭ್ಯರಾಗಲಿದ್ದರೆ, ಇದೀಗ ಮತ್ತೊಬ್ಬ ಸ್ಟಾರ್ ಅಲ್‌ರೌಂಡರ್ ಮಿಚೆಲ್ ಮಾರ್ಷ್ ತಪ್ಪಿಸಿಕೊಂಡಿರುವುದು ಆಸ್ಟ್ರೇಲಿಯಾ ತಂಡ ಡಬಲ್ ಆಘಾತಕ್ಕೆ ಒಳಗಾಗಿದೆ.

ICC World Cup: Major Setback for Australia As Key All-Rounder Departs For Home During Crucial Matches


ಆಸ್ಟ್ರೇಲಿಯಾ ತಂಡದ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಅವರು ವೈಯಕ್ತಿಕ ಕಾರಣಗಳಿಂದ ಧಿಡೀರ್ ಆಗಿ ನವೆಂಬರ್ 1ರಂದು ತವರಿಗೆ ಮರಳಿದರು. 32 ವರ್ಷದ ಆಟಗಾರ ಅನಿರ್ದಿಷ್ಟ ಅವಧಿಗೆ 2023ರ ವಿಶ್ವಕಪ್‌ನಿಂದ ಹೊರಗುಳಿಯುತ್ತಾರೆ ಮತ್ತು ಹಿಂದಿರುಗುವ ಬಗ್ಗೆಯೂ ಇನ್ನೂ ಯಾವುದೇ ಮಾಹಿತಿ ತಿಳಿದಿಲ್ಲ.
1
1-2023

ಆಸ್ಟ್ರೇಲಿಯಾ ತಂಡದ ಅಂತಿಮ ಲೀಗ್ ಪಂದ್ಯವು ನವೆಂಬರ್ 7ರಂದು ಹಶ್ಮತುಲ್ಲಾ ಶಾಹಿದಿ ನಾಯಕತ್ವದ ಅಫ್ಘಾನಿಸ್ತಾನ ವಿರುದ್ಧ ನಡೆಯಲಿದೆ ಮತ್ತು ಆ ಪಂದ್ಯಕ್ಕೆ ಮುನ್ನ ಮಿಚೆಲ್ ಮಾರ್ಷ್ ಮರಳುತ್ತಾರೆಯೇ ಎಂದು ಕಾದು ನೋಡಬೇಕಾಗಿದೆ.

ICC World Cup: Major Setback for Australia As Key All-Rounder Departs For Home During Crucial Matches

ಶನಿವಾರ, ನವೆಂಬರ್ 4ರಂದು ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ನಿರ್ಣಾಯಕ ಮುಖಾಮುಖಿಗೂ ಮುನ್ನ ಕೌಟುಂಬಿಕ ಕಾರಣಗಳಿಂದಾಗಿ ಆಸ್ಟ್ರೇಲಿಯಾ ತಂಡ ತಮ್ಮ 32 ವರ್ಷದ ಸ್ಟಾರ್ ಆಲ್‌ರೌಂಡರ್ ಮಿಚೆಲ್ ಮಾರ್ಷ್ ತವರು ಪರ್ತ್‌ಗೆ ಹಿಂದಿರುಗಿದ್ದಾರೆ.

ಇದೇ ವೇಳೆ ಆಸ್ಟ್ರೇಲಿಯಾ ತಂಡದಲ್ಲಿ ಬದಲಾವಣೆಯ ಅಗತ್ಯವಿದೆಯೇ ಎಂಬುದರ ಕುರಿತು ಈಗಲೇ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದಿಲ್ಲ. ಆಡಿದ ಆರು ಪಂದ್ಯಗಳಲ್ಲಿ ಒಂದು ಶತಕ ಮತ್ತು ಒಂದು ಅರ್ಧಶತಕ ಗಳಿಸಿದ ಮಿಚೆಲ್ ಮಾರ್ಷ್ ಅತ್ಯುತ್ತಮ ಫಾರ್ಮ್‌ನಲ್ಲಿ ಕಾಣಿಸಿಕೊಂಡಿದ್ದರಿಂದ ಇದು ಆಸ್ಟ್ರೇಲಿಯಾ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ.

ಇಲ್ಲಿಯವರೆಗೆ, ಮಿಚೆಲ್ ಮಾರ್ಷ್ 2023ರ ಏಕದಿನ ವಿಶ್ವಕಪ್‌ನಲ್ಲಿ ಕೇವಲ 7 ಓವರ್‌ಗಳ ಬೌಲಿಂಗೆ ಮಾಡಿ ಎರಡು ವಿಕೆಟ್ ಪಡೆದಿದ್ದಾರೆ.

ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ತಂಡ ಈ ಬಾರಿಯ ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಎರಡು ಸತತ ಸೋಲುಗಳೊಂದಿಗೆ ತಮ್ಮ ಅಭಿಯಾನವನ್ನು ಪ್ರಾರಂಭಿಸಿದರು. ನಂತರ, ಸತತ ನಾಲ್ಕು ಗೆಲುವುಗಳೊಂದಿಗೆ ಅತ್ಯುತ್ತಮ ಶೈಲಿಯಲ್ಲಿ ಪುನರಾಗಮನ ಮಾಡಿದ್ದಾರೆ.

ಆಸ್ಟ್ರೇಲಿಯಾ ತಂಡ ಆಡಿದ 6 ಪಂದ್ಯಗಳಲ್ಲಿ 2 ಸೋಲು ಮತ್ತು 4 ಪಂದ್ಯಗಳನ್ನು ಗೆದ್ದು 8 ಅಂಕಗಳೊಂದಿಗೆ ಪ್ರಸ್ತುತ 2023ರ ಏಕದಿನ ವಿಶ್ವಕಪ್‌ನ ಅಂಕಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ ಮತ್ತು ಭಾರತ ತಂಡಗಳ ನಂತರ 3ನೇ ಸ್ಥಾನದಲ್ಲಿದೆ.

Story first published: Thursday, November 2, 2023, 11:49 [IST]
Other articles published on Nov 2, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+