ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಕಿವೀಸ್ ಟೆಸ್ಟ್ ನಂತರ WTC 21-23 ಅಂಕಪಟ್ಟಿ ಹೀಗಿದೆ; ಅಂಕ ಹೆಚ್ಚಿದ್ದರೂ ಭಾರತಕ್ಕಿಲ್ಲ ಅಗ್ರಸ್ಥಾನ!

ICC World Test Championship 2021-23: Points Table After India And New Zealand 2nd Test

ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಉದ್ಘಾಟನಾ ಆವೃತ್ತಿಯಲ್ಲಿ ಯಶಸ್ವಿಯಾಗಿ ಫೈನಲ್ ಹಂತ ತಲುಪಿದ್ದ ಟೀಂ ಇಂಡಿಯಾ ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ವಿರುದ್ಧ ಫೈನಲ್ ಪಂದ್ಯದಲ್ಲಿ ಸೋಲುವ ಮೂಲಕ ಟ್ರೋಫಿ ಎತ್ತಿಹಿಡಿಯುವ ತನ್ನ ಕನಸನ್ನು ನನಸು ಮಾಡಿಕೊಳ್ಳಲಾಗದೇ ನಿರಾಸೆ ಅನುಭವಿಸಿತ್ತು. ಹಾಗೂ ಇತ್ತೀಚೆಗಷ್ಟೇ ಮುಕ್ತಾಯವಾದ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿಯೂ ನ್ಯೂಜಿಲೆಂಡ್ ವಿರುದ್ಧದ ಲೀಗ್ ಹಂತದ ಪಂದ್ಯವೊಂದರಲ್ಲಿ ಸೋಲುವುದರ ಮೂಲಕ ಸೆಮಿಫೈನಲ್ ಹಂತವನ್ನು ಪ್ರವೇಶಿಸುವ ಅವಕಾಶವನ್ನು ಕೈ ತಪ್ಪಿಸಿಕೊಂಡ ಟೀಮ್ ಇಂಡಿಯಾ ಟೂರ್ನಿಯಿಂದಲೇ ಹೊರಬಿದ್ದಿತ್ತು. ಹೀಗೆ ಈ ವರ್ಷ ನಡೆದ 2 ಪ್ರತಿಷ್ಠಿತ ಐಸಿಸಿ ಟೂರ್ನಿಗಳಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲುವುದರ ಮೂಲಕ ಹೊರಬಿದ್ದಿದ್ದ ಟೀಮ್ ಇಂಡಿಯಾ ಇದೀಗ ಆ ಸೋಲುಗಳ ಪ್ರತೀಕಾರವನ್ನು ಭಾರತ ಪ್ರವಾಸ ಕೈಗೊಂಡಿರುವ ನ್ಯೂಜಿಲೆಂಡ್ ವಿರುದ್ಧ ತೀರಿಸಿಕೊಂಡಿದೆ.

ತವರಿನಲ್ಲಿ ಮುಂದುವರಿದ ಸರಣಿ ಗೆಲುವಿನ ಓಟ: ನ್ಯೂಜಿಲೆಂಡ್ ಭಾರತದಲ್ಲಿ ಟೆಸ್ಟ್ ಪಂದ್ಯ ಗೆಲ್ಲದೆ 3 ದಶಕತವರಿನಲ್ಲಿ ಮುಂದುವರಿದ ಸರಣಿ ಗೆಲುವಿನ ಓಟ: ನ್ಯೂಜಿಲೆಂಡ್ ಭಾರತದಲ್ಲಿ ಟೆಸ್ಟ್ ಪಂದ್ಯ ಗೆಲ್ಲದೆ 3 ದಶಕ

ಹೌದು, ಮೊದಲಿಗೆ ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಎಲ್ಲಾ ಪಂದ್ಯಗಳನ್ನು ಸೋಲುವುದರ ಮೂಲಕ ವೈಟ್ ವಾಷ್ ಮುಖಭಂಗಕ್ಕೆ ಒಳಗಾದ ಕಿವೀಸ್ ನಂತರ ನಡೆದ 2 ಪಂದ್ಯಗಳ ಟೆಸ್ಟ್ ಸರಣಿ ಪೈಕಿಯ ಮೊದಲನೇ ಪಂದ್ಯದಲ್ಲಿ ಸೋಲಿನ ಸುಳಿಯಿಂದ ಪಾರಾಗಿ ಡ್ರಾ ಮಾಡಿಕೊಂಡಿತು. ಆದರೆ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾವನ್ನು ಎದುರಿಸಲಾಗದೇ ಮಣ್ಣು ಮುಕ್ಕಿದೆ. ಈ ಮೂಲಕ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಟೂರ್ನಿಯ ಸೇಡನ್ನು ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ತೀರಿಸಿಕೊಂಡಿದೆ.

ಭಾರತ vs ನ್ಯೂಜಿಲೆಂಡ್: ಕಿವೀಸ್ ವಿರುದ್ಧ 372 ರನ್‌ಗಳ ಭಾರೀ ಅಂತರದಿಂದ ಗೆದ್ದು ಸರಣಿ ವಶಕ್ಕೆ ಪಡೆದ ಟೀಮ್ ಇಂಡಿಯಾಭಾರತ vs ನ್ಯೂಜಿಲೆಂಡ್: ಕಿವೀಸ್ ವಿರುದ್ಧ 372 ರನ್‌ಗಳ ಭಾರೀ ಅಂತರದಿಂದ ಗೆದ್ದು ಸರಣಿ ವಶಕ್ಕೆ ಪಡೆದ ಟೀಮ್ ಇಂಡಿಯಾ

ಇನ್ನು ಸದ್ಯ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ದ್ವಿತೀಯ ಆವೃತ್ತಿ ಆರಂಭವಾಗಿದ್ದು ಈಗಾಗಲೇ ವಿವಿಧ ತಂಡಗಳ ನಡುವೆ ಅಂಕಪಟ್ಟಿಯಲ್ಲಿ ಹಾವು ಏಣಿ ಆಟ ಏರ್ಪಟ್ಟಿದೆ. ಮೊದಲಿಗೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಮೂಲಕ ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಕಾಳಗವನ್ನು ಆರಂಭಿಸಿದ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಮುಗಿದ ನಂತರ ಇದುವರೆಗೂ ಭಾಗವಹಿಸಿರುವ ಎಲ್ಲಾ ತಂಡಗಳಿಗಿಂತಲೂ ಅತಿ ಹೆಚ್ಚು ಅಂಕಗಳನ್ನು ಪಡೆದುಕೊಂಡಿದೆ. ಆದರೂ ಸಹ ಟೀಮ್ ಇಂಡಿಯಾ ಅಗ್ರಸ್ಥಾನಕ್ಕೇರುವಲ್ಲಿ ವಿಫಲವಾಗಿದ್ದು, ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿ ಮುಗಿದ ನಂತರ 2021-23ರ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಅಂಕ ಪಟ್ಟಿ ಈ ಕೆಳಕಂಡಂತಿದೆ.

ಭಾರತ vs ನ್ಯೂಜಿಲೆಂಡ್ ಟೆಸ್ಟ್ ಸರಣಿ ಮುಗಿದ ನಂತರ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಅಂಕ ಪಟ್ಟಿ ಹೀಗಿದೆ

ಭಾರತ vs ನ್ಯೂಜಿಲೆಂಡ್ ಟೆಸ್ಟ್ ಸರಣಿ ಮುಗಿದ ನಂತರ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಅಂಕ ಪಟ್ಟಿ ಹೀಗಿದೆ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿ ಮುಗಿದ ನಂತರ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ 2021-23ರ ಅಂಕಪಟ್ಟಿಯಲ್ಲಿ ವಿವಿಧ ತಂಡಗಳು ಪಡೆದುಕೊಂಡಿರುವ ಸ್ಥಾನ ಈ ಕೆಳಕಂಡಂತಿದೆ..

ಇದುವರೆಗೂ ಒಟ್ಟು 1 ಸರಣಿಯನ್ನು ಆಡಿರುವ ಶ್ರೀಲಂಕಾ ಆ ಸರಣಿಯ ಎಲ್ಲಾ 2 ಪಂದ್ಯಗಳಲ್ಲಿಯೂ ಜಯ ಗಳಿಸುವುದರ ಮೂಲಕ 24 ಅಂಕ ಮತ್ತು ಗೆಲುವಿನ ಶೇಕಡಾಂಶ 100ನ್ನು ಪಡೆದುಕೊಂಡಿದೆ. ಈ ಮೂಲಕ ಯಾವುದೇ ಡ್ರಾ, ಸೋಲು ಮತ್ತು ಪೆನಾಲ್ಟಿಗೆ ಒಳಗಾಗದೇ ಇರುವ ಶ್ರೀಲಂಕಾ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ.


ಇದುವರೆಗೂ ಒಟ್ಟು 2 ಸರಣಿಗಳನ್ನು ಆಡಿರುವ ಪಾಕಿಸ್ತಾನ ಆ ಸರಣಿಗಳ ಪೈಕಿ 2 ಪಂದ್ಯಗಳಲ್ಲಿ ಗೆದ್ದು, 1 ಪಂದ್ಯದಲ್ಲಿ ಸೋತು, 24 ಅಂಕಗಳನ್ನು ಪಡೆದುಕೊಂಡು, 66.6 ಗೆಲುವಿನ ಶೇಕಡಾಂಶದೊಂದಿಗೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.


ಇನ್ನು ಇದುವರೆಗೂ ಒಟ್ಟು 2 ಟೆಸ್ಟ್ ಸರಣಿಗಳಲ್ಲಿ ಕಣಕ್ಕಿಳಿದಿರುವ ಟೀಂ ಇಂಡಿಯಾ 3 ಪಂದ್ಯಗಳಲ್ಲಿ ಗೆದ್ದು, 1 ಪಂದ್ಯದಲ್ಲಿ ಸೋತು, 2 ಪಂದ್ಯಗಳನ್ನು ಡ್ರಾ ಮಾಡಿಕೊಂಡು, 42 ಅಂಕಗಳನ್ನು ಗಳಿಸಿ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದೆ. ಹೀಗೆ ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳಿಗಿಂತ ಅತಿ ಹೆಚ್ಚು ಅಂಕಗಳನ್ನು ಪಡೆದುಕೊಂಡರೂ ಸಹ ಟೀಮ್ ಇಂಡಿಯಾ ತೃತೀಯ ಸ್ಥಾನ ಪಡೆದುಕೊಳ್ಳುವುದಕ್ಕೆ ಕಾರಣ ಗೆಲುವಿನ ಶೇಕಡಾಂಶ ಮತ್ತು ಪೆನಾಲ್ಟಿ. ಹೌದು, ಶ್ರೀಲಂಕಾ ಮತ್ತು ಪಾಕಿಸ್ತಾನ ತಂಡಗಳಿಗಿಂತ ಟೀಮ್ ಇಂಡಿಯಾ ಹೆಚ್ಚು ಪಂದ್ಯಗಳಲ್ಲಿ ಡ್ರಾ ಮಾಡಿಕೊಂಡಿದೆ ಹಾಗೂ ಪಂದ್ಯವೊಂದರಲ್ಲಿ ಸೋತಿದೆ ಕೂಡ. ಹೀಗಾಗಿಯೇ ಟೀಮ್ ಇಂಡಿಯಾದ ಗೆಲುವಿನ ಶೇಕಡಾಂಶ ಕೇವಲ 58.33 ಇದ್ದು ಅಂಕಪಟ್ಟಿಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದೆ. ಹಾಗೂ ನಿಧಾನಗತಿಯ ಬೌಲಿಂಗ್ ಕಾರಣದಿಂದಾಗಿ ಓವರ್ ಪೆನಾಲ್ಟಿಗೆ ಟೀಮ್ ಇಂಡಿಯಾ ಒಳಗಾಗಿದ್ದು ಕೂಡ ಅಂಕಪಟ್ಟಿಯಲ್ಲಿನ ಕುಸಿತಕ್ಕೆ ಮತ್ತೊಂದು ಕಾರಣ ಎನ್ನಬಹುದು.

ಗೆಲುವಿನ ಶೇಕಡಾಂಶದ ಮೇಲೆ ಅಂಕಪಟ್ಟಿ ಲೆಕ್ಕಾಚಾರ

ಗೆಲುವಿನ ಶೇಕಡಾಂಶದ ಮೇಲೆ ಅಂಕಪಟ್ಟಿ ಲೆಕ್ಕಾಚಾರ

ಸದ್ಯ ಅಂಕಪಟ್ಟಿಯಲ್ಲಿ ಟೀಮ್ ಇಂಡಿಯಾ ಎಲ್ಲಾ ತಂಡಗಳಿಗಿಂತಲೂ ಹೆಚ್ಚಿನ ಪಂದ್ಯಗಳಲ್ಲಿ ಜಯ ಸಾಧಿಸಿದೆ ಮತ್ತು ಹೆಚ್ಚಿನ ಅಂಕಗಳನ್ನೂ ಕೂಡ ಪಡೆದುಕೊಂಡಿದೆ. ಆದರೂ ಸಹ ಟೀಮ್ ಇಂಡಿಯಾ ಅಗ್ರಸ್ಥಾನಕ್ಕೇರಿಲ್ಲ, ಇದಕ್ಕೆ ಕಾರಣ ಗೆಲುವಿನ ಶೇಕಡಾಂಶ. ಸದ್ಯ ಪ್ರಥಮ ಸ್ಥಾನದಲ್ಲಿರುವ ಶ್ರೀಲಂಕಾ ಯಾವುದೇ ಪಂದ್ಯಗಳಲ್ಲಿಯೂ ಸೋತಿಲ್ಲ ಹಾಗೂ ಡ್ರಾ ಮಾಡಿಕೊಂಡಿಲ್ಲ. ಹಾಗೂ ದ್ವಿತೀಯ ಸ್ಥಾನದಲ್ಲಿರುವ ಪಾಕಿಸ್ತಾನ ಒಂದೇ ಒಂದು ಪಂದ್ಯದಲ್ಲಿ ಮಾತ್ರ ಸೋತಿದೆ. ಆದರೆ ಟೀಮ್ ಇಂಡಿಯಾ 1 ಪಂದ್ಯದಲ್ಲಿ ಸೋತಿದೆ ಮತ್ತು 2 ಪಂದ್ಯದಲ್ಲಿ ಡ್ರಾ ಮಾಡಿಕೊಂಡಿದೆ. ಹೀಗಾಗಿಯೇ ಟೀಮ್ ಇಂಡಿಯಾದ ಗೆಲುವಿನ ಶೇಕಡಾಂಶ ಕಡಿಮೆಯಿದ್ದು ಅಂಕಪಟ್ಟಿಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದೆ. ಹೀಗಾಗಿ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಳ್ಳಬೇಕೆಂದರೆ ಪಂದ್ಯಗಳಲ್ಲಿ ಸೋಲುವುದು ಮತ್ತು ಡ್ರಾ ಮಾಡಿಕೊಳ್ಳುವುದನ್ನು ಆದಷ್ಟು ತಡೆಯಲೇಬೇಕಾಗಿದೆ.

ಒಟ್ಟಾರೆ ಐಸಿಸಿ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ಅಗ್ರಸ್ಥಾನ

ಒಟ್ಟಾರೆ ಐಸಿಸಿ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ಅಗ್ರಸ್ಥಾನ

ಸತತವಾಗಿ ಟೆಸ್ಟ್ ಪಂದ್ಯಗಳಲ್ಲಿ ದೊಡ್ಡ ಅಂತರದಿಂದ ಟೀಮ್ ಇಂಡಿಯಾ ಜಯ ಸಾಧಿಸಿದರೂ ಸಹ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರದೇ ಇರಬಹುದು. ಆದರೆ ನ್ಯೂಜಿಲೆಂಡ್ ವಿರುದ್ಧ ದಾಖಲಿಸಿರುವ 372 ರನ್‌ಗಳ ಬೃಹತ್ ಗೆಲುವಿನ ಸಹಾಯದಿಂದ ಟೀಮ್ ಇಂಡಿಯಾ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರುವುದು ಖಚಿತ.

ನ್ಯೂಜಿಲ್ಯಾಂಡ್ ವಿರುದ್ಧ ಗೆದ್ದ ನಂತರ ವೈರಲ್ ಆದ ವಿಶೇಷ ಫೋಟೋ | Oneindia Kannada

Story first published: Monday, December 6, 2021, 13:52 [IST]
Other articles published on Dec 6, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X