
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವನ್ನು ಸಾಧಿಸಿದೆ. ಈ ಗೆಲುವಿನ ಮೂಲಕ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸಿದ್ದು ಮಾತ್ರವಲ್ಲ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನಲ್ಲಿ ಮೇಲುಗೈ ಸಾಧಿಸಿದೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಸೋಲು ಕಂಡ ಬಳಿಕ ಅಂಕಪಟ್ಟಿಯಲ್ಲಿ ಟೀಮ್ ಇಂಡಿಯಾ ನಾಲ್ಕನೇ ಸ್ಥಾನಕ್ಕೆ ಕುಸಿದಿತ್ತು. ಈಗ ಎರಡನೇ ಪಂದ್ಯದ ಗೆಲುವು ಭಾರತ ತಂಡವನ್ನು ಎರಡನೇ ಸ್ಥಾನಕ್ಕೇರುವಂತೆ ಮಾಡಿದೆ. ಎರಡನೇ ಸ್ಥಾನದಲ್ಲಿದ್ದ ಇಂಗ್ಲೆಂಡ್ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ನ್ಯೂಜಿಲೆಂಡ್ ತಂಡ ಮೊದಲ ಸ್ಥಾನದಲ್ಲಿದ್ದರೆ ಆಸ್ಟ್ರೇಲಿಯಾ ಮೂರನೇ ಸ್ಥಾನದಲ್ಲಿದೆ.
ಚೆನ್ನೈನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದ ನಂತರ 30 ಅಂಕಗಳನ್ನು ಟೀಮ್ ಇಂಡಿಯಾ ಖಾತೆಗೆ ಹಾಕಿಕೊಂಡಿದ್ದು 460 ಅಂಕಗಳನ್ನು ಹೊಂದಿದೆ. ಆದರೆ ಐಸಿಸಿ ಇತ್ತೀಚೆಗೆ ಜಾರಿಗೆ ತಂದ PCT ಯಲ್ಲಿ ನ್ಯೂಜಿಲೆಂಡ್ 70% ಅಂಕ ಗಳಿಸಿದೆ. ಭಾರತ 69.7% ಅಂಕವನ್ನು ಹೊಂದಿದೆ.
ಇನ್ನು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಚೊಚ್ಚಲ ಬಾರಿಗೆ ಕಣಕ್ಕಿಳಿದ ಅಕ್ಷರ್ ಪಟೇಲ್ ಎರಡನೇ ಇನ್ನಿಂಗ್ಸ್‌ನಲ್ಲಿ 5 ವಿಕೆಟ್‌ಗ: ಗೊಂಚಲು ಪಡೆದು ಮಿಂಚಿದ್ದಾರೆ. ಎರಡನೇ ಇನ್ನಿಂಗ್ಸ್‌ನಲ್ಲಿ ಶತಕ ಬಾರಿಸಿ ಮಿಂಚಿದ್ದ ಆರ್ ಅಶ್ವಿನ್ ಮೂರು ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೊದಲ ಇನ್ನಿಂಗ್ಸ್‌ನ ಬೌಲಿಂಗ್ ವೇಳೆ ಅಶ್ವಿನ್ 5 ವಿಕೆಟ್‌ಗಳ ಗೊಂಚಲು ಪಡೆದಿದ್ದರು.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಅಹ್ಮದಾಬಾದ್‌ನಲ್ಲಿ ಫೆಬ್ರವರಿ 24ರಿಂದ ಆರಂಭವಾಗಲಿದೆ. ಈ ಪಂದ್ಯ ಡೇ ನೈಟ್ ಪಂದ್ಯವಾಗಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಈ ಪಂದ್ಯಕ್ಕೂ ಮುನ್ನ ಚೆನ್ನೈನಲ್ಲಿ ಫೆಬ್ರವರಿ 18ರಂದು ಐಪಿಎಲ್ 2021 ಆವೃತ್ತಿಯ ಹರಾಜು ಪ್ರಕ್ರಿಯೆ ನಡೆಯಲಿದೆ. ಈ ಹರಾಜಿನಲ್ಲಿ 292 ಆಟಗಾರರ ಭವಿಷ್ಯ ಐಪಿಎಲ್ ಭವಿಷ್ಯ ತಿಳಿದುಬರಲಿದೆ.