ಏಷ್ಯಾಕಪ್‌ಗೆ ಭಾರತ ತಂಡ ಬರದಿದ್ದರೆ, 2023ರ ವಿಶ್ವಕಪ್‌ನಲ್ಲಿ ಪಾಕ್ ಭಾಗವಹಿಸಲ್ಲ; ಪಿಸಿಬಿ ಮುಖ್ಯಸ್ಥ

ಪಾಕಿಸ್ತಾನದಲ್ಲಿ ನಡೆಯುವ ಏಷ್ಯಾ ಕಪ್‌ನಿಂದ ಭಾರತ ತಂಡ ಹಿಂದೆ ಸರಿದರೆ, ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ 50 ಓವರ್‌ಗಳ ವಿಶ್ವಕಪ್‌ನಲ್ಲಿ ಭಾಗವಹಿಸಲು ಪಾಕಿಸ್ತಾನ ಕ್ರಿಕೆಟ್ ತಂಡವೂ ಭಾರತಕ್ಕೆ ಪ್ರಯಾಣಿಸುವುದಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮುಖ್ಯಸ್ಥ ರಮೀಜ್ ರಾಜಾ ಬಿಸಿಸಿಐಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನ ಕಾರ್ಯಕಾರಿ ಮಂಡಳಿಯ ನಿರ್ಧಾರದ ಪ್ರಕಾರ, ಮುಂದಿನ ವರ್ಷದ ಏಷ್ಯಾ ಕಪ್‌ನ ಆವೃತ್ತಿಯನ್ನು ಪಾಕಿಸ್ತಾನದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಗಮನಾರ್ಹ ಸಂಗತಿಯೆಂದರೆ, ಭಾರತವು ಏಷ್ಯಾ ಕಪ್ ಟೂರ್ನಿಯನ್ನು ತಟಸ್ಥ ಸ್ಥಳದಲ್ಲಿ ಆಡಲು ಆದ್ಯತೆ ನೀಡುತ್ತದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದು ಕುತೂಹಲ ಮೂಡಿಸಿತ್ತು ಮತ್ತು ಪಾಕಿಸ್ತಾನಕ್ಕೆ ಆಘಾತ ನೀಡಿತ್ತು.

ಐಸಿಸಿ ಉಪಾಧ್ಯಕ್ಷರಾಗಿ ಮರು ನೇಮಕಗೊಂಡ ಇಮ್ರಾನ್ ಖವಾಜಾಐಸಿಸಿ ಉಪಾಧ್ಯಕ್ಷರಾಗಿ ಮರು ನೇಮಕಗೊಂಡ ಇಮ್ರಾನ್ ಖವಾಜಾ

ಜಯ್ ಶಾ ಅವರು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರಾಗಿದ್ದು, ಸುದ್ದಿಗಾರರೊಂದಿಗೆ ಮಾತನಾಡುವಾಗ "ಭಾರತವು ಏಷ್ಯಾ ಕಪ್ ಪಂದ್ಯಾವಳಿಯನ್ನು ತಟಸ್ಥ ಸ್ಥಳದಲ್ಲಿ ಆಡುತ್ತದೆ' ಎಂದು ಹೇಳಿದ್ದರು.

ಭಾರತ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದ ಜಯ್ ಶಾ

ಭಾರತ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದ ಜಯ್ ಶಾ

ಮುಂದಿನ ವರ್ಷ ಭಾರತ ಕ್ರಿಕೆಟ್ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂಬ ಜಯ್ ಶಾ ಅವರ ಹೇಳಿಕೆಯಿಂದ ಪಿಸಿಬಿ ಅಧ್ಯಕ್ಷ ರಮೀಜ್ ರಾಜಾ ಮತ್ತು ಇತರ ಪಾಕಿಸ್ತಾನ ಕ್ರಿಕೆಟ್‌ನ ಹಿರಿಯ ಅಧಿಕಾರಿಗಳು ತುಂಬಾ ಅಸಮಾಧಾನಗೊಂಡಿದ್ದರು. ಇದೇ ವೇಳೇ ಕೆಲವು ಕಠಿಣ ನಿರ್ಧಾರ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.

"ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ವಿಶ್ವಕಪ್‌ನಲ್ಲಿ ಪಾಕಿಸ್ತಾನ ಭಾಗವಹಿಸದಿದ್ದರೆ, ಅದನ್ನು ಯಾರು ನೋಡುತ್ತಾರೆ? ಎಂಬ ಸ್ಪಷ್ಟ ನಿಲುವು ನಮಗೆ ಇದೆ. ಭಾರತ ತಂಡ ಪಾಕಿಸ್ತಾನಕ್ಕೆ ಬಂದರೆ ನಾವು ವಿಶ್ವಕಪ್‌ನಲ್ಲಿ ಭಾಗವಹಿಸುತ್ತೇವೆ. ಒಂದು ವೇಳೆ ಭಾರತ ತಂಡ ಬರದಿದ್ದರೆ, ನಾವು ಇಲ್ಲದೆ ವಿಶ್ವಕಪ್ ಆಡಬಹುದು," ಎಂದ ಪಿಸಿಬಿ ಮುಖ್ಯಸ್ಥ ರಮೀಜ್ ರಾಜಾ ಉರ್ದು ನ್ಯೂಸ್‌ಗೆ ಹೇಳಿಕೆ ನೀಡಿದ್ದಾರೆ.

ಐಸಿಸಿ ಟೂರ್ನಿಗಳಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಆಡುತ್ತದೆ

ಐಸಿಸಿ ಟೂರ್ನಿಗಳಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಆಡುತ್ತದೆ

ಭಾರತ ಕ್ರಿಕೆಟ್ ತಂಡವು ಐಸಿಸಿ ಅಥವಾ ಕಾಂಟಿನೆಂಟಲ್ ಟೂರ್ನಿಗಳಲ್ಲಿ ಪಾಕಿಸ್ತಾನದ ವಿರುದ್ಧ ಆಡುತ್ತದೆ. ಆದರೆ 2008ರ ಏಷ್ಯಾ ಕಪ್ ನಂತರ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಿಲ್ಲ. ಪಾಕಿಸ್ತಾನ ಕೊನೆಯದಾಗಿ 2012ರಲ್ಲಿ ಆರು ಪಂದ್ಯಗಳ ದ್ವಿಪಕ್ಷೀಯ ಏಕದಿನ ಸರಣಿಗಾಗಿ ಭಾರತಕ್ಕೆ ಬಂದಿತ್ತು.

"ನಾವು ಆಕ್ರಮಣಕಾರಿ ವಿಧಾನವನ್ನು ಅಳವಡಿಸಿಕೊಳ್ಳುತ್ತೇವೆ. ನಮ್ಮ ತಂಡವು ಉತ್ತಮ ಪ್ರದರ್ಶನವನ್ನು ತೋರಿಸುತ್ತಿದೆ. ನಾವು ಪಾಕಿಸ್ತಾನ ಕ್ರಿಕೆಟ್‌ನ ಆರ್ಥಿಕತೆಯನ್ನು ಸುಧಾರಿಸಬೇಕು ಎಂದು ನಾನು ಯಾವಾಗಲೂ ಹೇಳುತ್ತಿದ್ದೆ. ನಾವು ಉತ್ತಮ ಪ್ರದರ್ಶನ ನೀಡಿದಾಗ ಮಾತ್ರ ಅದು ಸಂಭವಿಸುತ್ತದೆ".

ಶತಕೋಟಿ ಡಾಲರ್ ಆರ್ಥಿಕ ತಂಡವನ್ನು ಎರಡು ಬಾರಿ ಸೋಲಿಸಿದ್ದೇವೆ

ಶತಕೋಟಿ ಡಾಲರ್ ಆರ್ಥಿಕ ತಂಡವನ್ನು ಎರಡು ಬಾರಿ ಸೋಲಿಸಿದ್ದೇವೆ

"2021ರ ಟಿ20 ವಿಶ್ವಕಪ್‌ನಲ್ಲಿ ನಾವು ಭಾರತ ತಂಡವನ್ನು ಸೋಲಿಸಿದ್ದೇವೆ. ನಾವು ಟಿ20 ಏಷ್ಯಾ ಕಪ್‌ನಲ್ಲಿ ಭಾರತವನ್ನು ಸೋಲಿಸಿದ್ದೇವೆ. ಒಂದು ವರ್ಷದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡವು ಶತಕೋಟಿ ಡಾಲರ್ ಆರ್ಥಿಕ ತಂಡವನ್ನು ಎರಡು ಬಾರಿ ಸೋಲಿಸಿದೆ," ಎಂದು ರಮೀಜ್ ರಾಜಾ ಹೇಳಿದ್ದಾರೆ.

ಮುಂದಿನ ವರ್ಷ ಭಾರತ ತಂಡ ಪಾಕಿಸ್ತಾನದಲ್ಲಿ ನಡೆಯುವ ಏಷ್ಯಾಕಪ್‌ನಲ್ಲಿ ಭಾಗಹಿಸುತ್ತದೆಯೇ ಅಥವಾ ಪಾಕಿಸ್ತಾನ ಒತ್ತಡಕ್ಕೆ ಮಣಿದು ತಟಸ್ಥ ಸ್ಥಳದಲ್ಲಿ ಟೂರ್ನಿ ಆಯೋಜನೆ ಮಾಡಲಿದೆಯೇ ಎಂಬುದನ್ನು ಕಾಲವೇ ನಿರ್ಧರಿಸಬೇಕಿದೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Saturday, November 26, 2022, 8:53 [IST]
Other articles published on Nov 26, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X