ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ILT20: ಇಂಟರ್ನ್ಯಾಷನಲ್ ಲೀಗ್‌ ಟಿ20ಯಲ್ಲಿ ರಾಬಿನ್ ಉತ್ತಪ್ಪ ಭರ್ಜರಿ ಬ್ಯಾಟಿಂಗ್

ILT20: Robin Uthappa Scored 79 Runs In 46 Deliveries Against Gulf Giants

ಅಂತಾರಾಷ್ಟ್ರೀಯ ಕ್ರಿಕೆಟ್ ಮತ್ತು ಐಪಿಎಲ್‌ಗೆ ವಿದಾಯ ಹೇಳಿದ ಬಳಿಕ ಕನ್ನಡಿಗ ರಾಬಿನ್ ಉತ್ತಪ್ಪ ಯುಎಇಯಲ್ಲಿ ನಡೆಯುತ್ತಿರುವ ಇಂಟರ್ನ್ಯಾಷನಲ್ ಲೀಗ್‌ ಟಿ20ಯಲ್ಲಿ ಆಡುತ್ತಿದ್ದಾರೆ. ದುಬೈ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರನಾಗಿರುವ ಉತ್ತಪ್ಪ ಟೂರ್ನಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದಾರೆ.

ಸೋಮವಾರ ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ದುಬೈ ಕ್ಯಾಪಿಟಲ್ಸ್ ಮತ್ತು ಗಲ್ಫ್‌ ಜೈಂಟ್ಸ್ ನಡುವಿನ ಪಂದ್ಯದಲ್ಲಿ 46 ಎಸೆತಗಳಲ್ಲಿ 79 ರನ್ ಗಳಿಸುವ ಮೂಲಕ ಮಿಂಚಿದ್ದಾರೆ. ಅವರ ಈ ಇನ್ನಿಂಗ್ಸ್‌ನಲ್ಲಿ 10 ಬೌಂಡರಿ 2 ಭರ್ಜರಿ ಸಿಕ್ಸರ್ ಸೇರಿದ್ದವು.

ಆತ ಭಾರತ ತಂಡದ ಭವಿಷ್ಯದ ಸೂಪರ್ ಸ್ಟಾರ್ ಎಂದು ಹಾಡಿ ಹೊಗಳಿದ ಇರ್ಫಾನ್ ಪಠಾಣ್ಆತ ಭಾರತ ತಂಡದ ಭವಿಷ್ಯದ ಸೂಪರ್ ಸ್ಟಾರ್ ಎಂದು ಹಾಡಿ ಹೊಗಳಿದ ಇರ್ಫಾನ್ ಪಠಾಣ್

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದುಬೈ ಕ್ಯಾಪಿಟಲ್ಸ್ ರಾಬಿನ್ ಉತ್ತಪ್ಪ ಅತ್ಯುತ್ತಮ ಇನ್ನಿಂಗ್ಸ್ ಸಹಾಯದಿಂದ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 182 ರನ್ ಕಲೆಹಾಕಿತು. ನಾಯಕ ರೋವಮ್ ಪೊವೆಲ್ 35 ರನ್ ಗಳಿಸಿದರು, ಸಿಕಂದರ್ ರಾಜಾ 19 ಎಸೆತಗಳಲ್ಲಿ 30 ರನ್ ಗಳಿಸಿ ಉತ್ತಪ್ಪಗೆ ಸಾಥ್ ನೀಡಿದರು. ಈ ಮೂವರನ್ನು ಹೊರತುಪಡಿಸಿ ಉಳಿದ ಬ್ಯಾಟರ್ ಗಳು ಎರಡಂಕಿ ದಾಟಲು ಕೂಡ ವಿಫಲರಾದರು.

ILT20: Robin Uthappa Scored 79 Runs In 46 Deliveries Against Gulf Giants

ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ

ರಾಬಿನ್ ಉತ್ತಪ್ಪ ಇಂಟರ್ನ್ಯಾಷನಲ್ ಲೀಗ್‌ ಟಿ20ಯಲ್ಲಿ ಆಡಿದ ಮೊದಲ ಪಂದ್ಯದಲ್ಲಿ ಕೂಡ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಮೊದಲನೇ ಪಂದ್ಯದಲ್ಲಿ 33 ಎಸೆತಗಳಲ್ಲಿ 3 ಬೌಂಡರಿ ಎರಡು ಸಿಕ್ಸರ್ ಸಹಿತ 43 ರನ್ ಗಳಿಸಿ ಮಿಂಚಿದ್ದರು. ಮೊದಲನೇ ಪಂದ್ಯದಲ್ಲಿ ದುಬೈ ಕ್ಯಾಪಿಟಲ್ಸ್ 73 ರನ್‌ಗಳ ಜಯ ಸಾಧಿಸಿ ಬೀಗಿತ್ತು.

ಎರಡನೇ ಪಂದ್ಯದಲ್ಲಿ 79 ರನ್ ಗಳಿಸುವ ಮೂಲಕ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ. ಎರಡು ಪಂದ್ಯಗಳಿಂದ 122 ರನ್ ಗಳಿಸಿದ್ದಾರೆ.

ವಿದೇಶಿ ಲೀಗ್‌ಗಳತ್ತ ಹಿರಿಯ ಆಟಗಾರರು

ಭಾರತ ತಂಡದಲ್ಲಿ ಅವಕಾಶ ಸಿಗದೇ, ಐಪಿಎಲ್‌ ಫ್ರಾಂಚೈಸಿಗಳಿಂದಲೂ ಕಡೆಗಣಿಸಲ್ಪಡುವ ಕೆಲವು ಹಿರಿಯ ಆಟಗಾರರು ವಿದೇಶಿ ಲೀಗ್‌ಗಳಲ್ಲಿ ಆಡಲು ಮುಂದಾಗಿದ್ದಾರೆ. ಸುರೇಶ್ ರೈನಾ, ರಾಬಿನ್ ಉತ್ತಪ್ಪ ಈಗಾಗಲೇ ವಿದೇಶಿ ಲೀಗ್‌ನಲ್ಲಿ ಆಡುತ್ತಿದ್ದಾರೆ.

ಹಿರಿಯ ಆಟಗಾರ ಮುರಳಿ ವಿಜಯ್ ಕೂಡ ವಿದೇಶಿ ಲೀಗ್‌ಗಳಲ್ಲಿ ಆಡಲು ಅವಕಾಶಕ್ಕಾಗಿ ಕಾಯುತ್ತಿರುವುದಾಗಿ ಹೇಳಿದ್ದಾರೆ. ಅಂತಾರಾಷ್ಟ್ರೀಯ ಮತ್ತು ಐಪಿಎಲ್‌ ಕ್ರಿಕೆಟ್‌ಗೆ ವಿದಾಯ ಹೇಳಿದ ಆಟಗಾರರಿಗೆ ಮಾತ್ರ ವಿದೇಶಿ ಲೀಗ್‌ಗಳಲ್ಲಿ ಆಡಲು ಬಿಸಿಸಿಐ ಅನುಮತಿ ನೀಡುತ್ತದೆ ಎನ್ನುವುದು ಗಮನಿಸಬೇಕಾದ ಸಂಗತಿ.

Story first published: Monday, January 16, 2023, 22:48 [IST]
Other articles published on Jan 16, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X