Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Team India: ಭಾನುವಾರ ಡಬಲ್ ಧಮಾಕ; ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ರಸದೌತಣ

ಅಕ್ಟೋಬರ್ 6 ಅಂದರೆ ಭಾನುವಾರ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬವೋಹಬ್ಬ. ವಾರಾಂತ್ಯದಲ್ಲಿ ಭಾರತದ ಎರಡು ಪಂದ್ಯಗಳನ್ನು ಅಭಿಮಾನಿಗಳು ನೋಡಲು ಕಾಯುತ್ತಿದ್ದಾರೆ. ಈ ಎರಡು ಪಂದ್ಯಗಳು ಭಾರೀ ಕುತೂಹಲ ಮೂಡಿಸಿವೆ.

ಒಂದು ಕಡೆ, ಐಸಿಸಿ ಮಹಿಳಾ ಟಿ20 ವಿಶ್ವಕಪ್ 2024ರ ಎರಡನೇ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವದಲ್ಲಿ ಭಾರತ ಮಹಿಳಾ ತಂಡವು ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಮತ್ತೊಂದೆಡೆ ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ಪುರುಷರ ತಂಡ ಮತ್ತು ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯ ಆರಂಭವಾಗಲಿದೆ. ಅದಕ್ಕೂ ಮುನ್ನ ಅಭಿಮಾನಿಗಳು ಈ ಪಂದ್ಯಗಳನ್ನು ಎಲ್ಲಿ ಮತ್ತು ಯಾವಾಗ ಉಚಿತವಾಗಿ ವೀಕ್ಷಿಸಬಹುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

Important Matches of India Men s and Women s Teams on Sunday October 6

ಭಾರತ vs ಪಾಕಿಸ್ತಾನ

2024ರ ಮಹಿಳಾ ಟಿ 20 ವಿಶ್ವಕಪ್‌ ಟೂರ್ನಿಯ 7ನೇ ಪಂದ್ಯದಲ್ಲಿ ಭಾರತ ಮತ್ತು ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಈ ಹೈವೋಲ್ಟೇಜ್ ಪಂದ್ಯವು ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಅಕ್ಟೋಬರ್ 6 ರಂದು (ಭಾನುವಾರ) ಮಧ್ಯಾಹ್ನ 3:30 ಗಂಟೆಗೆ ಆರಂಭವಾಗಲಿದೆ. ಈ ಪಂದ್ಯವನ್ನು ಗೆದ್ದು ಭಾರತ ಸೆಮಿಫೈನಲ್ ರೇಸ್‌ನಲ್ಲಿ ಉಳಿದುಕೊಳ್ಳಲು ಹೋರಾಟ ನಡೆಸಲಿದೆ.

ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ. ಆದರೆ ಅದರ ಲೈವ್ ಸ್ಟ್ರೀಮಿಂಗ್ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಲಭ್ಯವಿರಲಿದೆ. ಇದು ಹರ್ಮನ್‌ಪ್ರೀತ್ ಕೌರ್ ಪಡೆಯ ಎರಡನೇ ಪಂದ್ಯವಾಗಿದ್ದು, ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 58 ರನ್‌ಗಳಿಂದ ಸೋತಿದೆ. ಆದರೆ ಪಾಕಿಸ್ತಾನ ತನ್ನ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 31 ರನ್‌ಗಳಿಂದ ಗೆದ್ದಿದೆ.

ಭಾರತ vs ಬಾಂಗ್ಲಾದೇಶ

ಭಾರತ ಮತ್ತು ಬಾಂಗ್ಲಾದೇಶ ಪುರುಷರ ತಂಡಗಳ ನಡುವಿನ ಮೂರು ಟಿ 20 ಪಂದ್ಯಗಳ ಸರಣಿಯು ಅಕ್ಟೋಬರ್ 6 ಭಾನುವಾರದಿಂದ ಪ್ರಾರಂಭವಾಗಲಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡವು ಸೂಪರ್ ಸಂಡೆ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಆಡಲಿದೆ. ಉಭಯ ತಂಡ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಶ್ರೀಮಂತ್ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಂಜೆ 7:00 ಗಂಟೆಗೆ ಶುರುವಾಗಲಿದೆ. ಈ ಪಂದ್ಯದ ನೇರಪ್ರಸಾರ ಸ್ಪೋರ್ಟ್ಸ್ 18 ನೆಟ್‌ವರ್ಕ್‌ ಚಾನೆಲ್‌ಗಳಲ್ಲಿ ಇರಲಿದೆ. ಅಭಿಮಾನಿಗಳಿಗೆ ಲೈವ್ ಸ್ಟ್ರೀಮಿಂಗ್ ಅನ್ನು ಜಿಯೋ ಸಿನಿಮಾದಲ್ಲಿ ಉಚಿತವಾಗಿ ವೀಕ್ಷಿಸಬಹುದಾಗಿದೆ.

ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಟೆಸ್ಟ್ ಸರಣಿಯನ್ನು ಗೆದ್ದಿತ್ತು. ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಬಾಂಗ್ಲಾದೇಶ ತಂಡವನ್ನು ರೋಹಿತ್ ಶರ್ಮಾ ಪಡೆ ವೈಟ್ ವಾಶ್ ಮಾಡಿತ್ತು.

Story first published: Saturday, October 5, 2024, 16:53 [IST]
Other articles published on Oct 5, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+