ನನ್ನನ್ನು ಹಗುರವಾಗಿ ಕಾಣಬೇಡಿ: ಮೊಹಾಲಿಯಿಂದ ಸಂದೇಶ ರವಾನಿಸಿದ ಟೀಮ್ ಇಂಡಿಯಾ ಸೀಮರ್
ಅವಕಾಶ ಸಿಕ್ಕಾಗ ಹೇಗೆ ಬಳಸಿಕೊಳ್ಳಬೇಕು ಎಂಬುದನ್ನು ಈ ಬೌಲರ್ ನೊಡಿಯೇ ಕಲಿಯಬೇಕು. ನಿಜಕ್ಕೂ ಈ ಬೌಲರ್ ವಾತಾವರಣದ ಹಾಗೂ ಪಿಚ್ ಲಾಭ ಪಡೆದು, ಬೌಲ್ ಮಾಡಿದ ರೀತಿ ಅಮೋಘ. ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ಆರಂಭವಾದ ಮೂರು ಏಕದಿನ ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಸಿರಾಜ್ ಸ್ಥಾನದಲ್ಲಿ ಆಡುವ ಅವಕಾಶವನ್ನು ಪಡೆದ ಈ ವೇಗಿ ನೀಡಿದ ಪಂಚ್ ಗೆ ಆಸೀಸ್ ತಬ್ಬಿಬ್ಬಾಗಿದೆ.
ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿರುವ ವೇಗಿ, ತಮ್ಮನ್ನು ಹಗುರವಾಗಿ ಪರಿಗಣಿಸಬಾರದು ಎಂದು ಎಲ್ಲ ತಂಡಗಳಿಗೆ ಮೊಹಾಲಿಯಿಂದ ಸಂದೇಶ ಸಾರಿದ್ದಾರೆ. ಶುಕ್ರವಾರ ಭಾರತದ ಗೆಲುವಿನಲ್ಲಿ ಹೀರೋ ರೀತಿ ಮಿಂಚಿದ ಆಟಗಾರ ಸ್ವಿಂಗ್ ಸ್ಪೆಷಲಿಸ್ಟ್ ಮೊಹಮ್ಮದ್ ಶಮಿ..

ಮೊಹಾಲಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವೇಗದ ಬೌಲರ್ ಮೊಹಮ್ಮದ್ ಶಮಿ ಅದ್ಭುತ ಪ್ರದರ್ಶನ ನೀಡಿದರು. ಶಮಿ ತಮ್ಮ ಮಾರಕ ಬೌಲಿಂಗ್ ಮೂಲಕ ಆಸ್ಟ್ರೇಲಿಯಾದ ಬ್ಯಾಟ್ಸ್ ಮನ್ ಗಳ ಕಾಡಿದರು. ಮೊಹಾಲಿಯಲ್ಲಿ ಶಮಿ 10 ಓವರ್ ಗಳಲ್ಲಿ ಒಂದು ಮೇಡನ್ ಸಹಿತ 51 ರನ್ ನೀಡಿ ಐದು ವಿಕೆಟ್ ಪಡೆದರು. 16 ವರ್ಷಗಳ ಬಳಿಕ ಭಾರತದ ಬೌಲರ್ ಒಬ್ಬರು ತವರು ನೆಲದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಐದು ವಿಕೆಟ್‌ಗಳನ್ನು ಕಬಳಿಸಿದ ಸಾಧನೆ ಮಾಡಿದರು.
ಮೊಹಾಲಿ ಏಕದಿನ ಪಂದ್ಯ
ಮೊಹಾಲಿ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಕೆ.ಎಲ್. ರಾಹುಲ್ ಮುನ್ನಡೆಸಿದರು. ಈ ಸ್ವರೂಪದಲ್ಲಿ ವಿಶ್ವದ ನಂಬರ್ ಒನ್ ಬೌಲರ್ ಮೊಹಮ್ಮದ್ ಸಿರಾಜ್ ಇಂದು ಆಡುವ ಹನ್ನೊಂದರ ಭಾಗವಾಗಿರಲಿಲ್ಲ. ಅವರ ಬದಲಿಗೆ ಮೊಹಮ್ಮದ್ ಶಮಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಯಿತು.
ಸಿಕ್ಕ ಅವಕಾಶವನ್ನು ಮಿಸ್ ಮಾಡಿಕೊಳ್ಳದ ಶಮಿ ಮೊದಲ ಓವರ್ ನಲ್ಲೇ ತಂಡಕ್ಕೆ ಯಶಸ್ಸು ತಂದುಕೊಟ್ಟರು. ಶಮಿ, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ಶಾರ್ಟ್ ಮತ್ತು ಸೀನ್ ಅಬಾಟ್ ಅವರನ್ನು ಪೆವಿಲಿಯನ್‌ಗೆ ಅಟ್ಟಿದರು.
ಐದು ವಿಕೆಟ್ ಕಬಳಿಸುವ ಮೂಲಕ ಶಮಿ ದೊಡ್ಡ ದಾಖಲೆ
ಮೊಹಾಲಿಯಲ್ಲಿ ಐದು ವಿಕೆಟ್ ಕಬಳಿಸುವ ಮೂಲಕ ಶಮಿ ದೊಡ್ಡ ದಾಖಲೆ ಬರೆದಿದ್ದಾರೆ. ಶಮಿ ಈಗ ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯದಲ್ಲಿ 37 ವಿಕೆಟ್ ಪಡೆದಿದ್ದಾರೆ. ಇದರೊಂದಿಗೆ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. ಈ ದಾಖಲೆಯ ಪಟ್ಟಿಯಲ್ಲಿ ಕಪಿಲ್ ದೇವ್ 45 ವಿಕೆಟ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.
ಶಮಿ ಏಕದಿನ ಕ್ರಿಕೆಟ್‌ನಲ್ಲಿ ಎರಡನೇ ಬಾರಿಗೆ ಐದು ವಿಕೆಟ್ ಪಡೆದಿದ್ದಾರೆ. ಈ ಮಾದರಿಯಲ್ಲಿ ಇದು ಅವರ ಅತ್ಯುತ್ತಮ ಪ್ರದರ್ಶನವಾಗಿದೆ. ಇದಕ್ಕೂ ಮೊದಲು 2019ರಲ್ಲಿ ಶಮಿ 69 ರನ್‌ಗಳಿಗೆ ಐದು ವಿಕೆಟ್ ಪಡೆದಿದ್ದರು. ಶಮಿ ಈಗ 93 ಏಕದಿನ ಪಂದ್ಯಗಳಲ್ಲಿ 170 ವಿಕೆಟ್‌ಗಳನ್ನು ಪಡೆದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications