For Quick Alerts
ALLOW NOTIFICATIONS  
For Daily Alerts
 

ಭಾರತ vs ನ್ಯೂಜಿಲೆಂಡ್: ಭರ್ಜರಿ ಶತಕದ ಮೂಲಕ ಮಿಂಚಿದ ಕನ್ನಡಿಗ ಮಯಾಂಕ್ ಅಗರ್ವಾಲ್

In VS NZ: Mayank Agarwal century against New zealand

ಭಾರತ ಹಾಗೂ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಕನ್ನಡಿಗ ಮಯಾಂಕ್ ಅಗರ್ವಾಲ್ ಭರ್ಜರಿ ಪ್ರದರ್ಶನ ನೀಡಿ ಮಿಂಚಿದ್ದಾರೆ. ಆರಂಭದಿಂದಲೇ ಸರಾಗವಾಗಿ ಕಿವಿಸ್ ಬೌಲಿಂಗ್ ದಾಳಿಯನ್ನು ಎದುರಿಸುತ್ತಾ ಸಾಗಿದ ಮಯಾಂಕ್ ಅಗರ್ವಾಲ್ ಮೊದಲ ವಿಕೆಟ್‌ಗೆ ಶುಬ್ಮನ್ ಗಿಲ್ ಜೊತೆಗೆ 80 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾಗಿದ್ದರು. ನಂತರ ಒಂದು ಹಂತದಲ್ಲಿ ಟೀಮ್ ಇಂಡಿಯಾ ಭಾರೀ ಕುಸಿತವನ್ನು ಕಂಡಿತು. ಆದರೆ ಮಯಾಂಕ್ ಅಗರ್ವಾಲ್ ಇದನ್ನು ಕೂಡ ದಿಟ್ಟವಾಗಿ ಎದುರಿಸಿ ತಂಡಕ್ಕೆ ಆಸರೆಯಾದರು.

ಒಂದೆಡೆ ನ್ಯೂಜಿಲೆಂಡ್ ತಂಡದ ಸ್ಪಿನ್ನರ್ ಅಜಾಜ್ ಪಟೇಲ್ ಭಾರತೀಯ ದಾಂಡಿಗರಿಗೆ ಆಘಾತದ ಮೇಲೆ ಆಘಾತ ನೀಡುತ್ತಿದ್ದರೆ ಮಯಾಂಕ್ ಅಗರ್ವಾಲ್ ಮಾತ್ರ ಕ್ರೀಸ್‌ನಲ್ಲಿ ಗಟ್ಟಿಯಾಗಿ ತಳವೂರಿ ಬ್ಯಾಟಿಂಗ್ ಮಾಡಿದ್ದಾರೆ. ಮೊದಲ ದಿನ ಭರ್ಜರಿ ಶತಕ ಸಿಡಿಸಿರುವ ಮಯಾಂಕ್ ಅಗರ್ವಾಲ್ ಅಜೇಯ 120 ರನ್‌ಗಳಿಸಿ ಎರಡನೇ ದಿನಕ್ಕೆ ಆಟ ಕಾಯ್ದಿರಿಸಿದ್ದಾರೆ. ಮತ್ತೊಂದು ತುದಿಯಲ್ಲಿ ಅನುಭವಿ ವೃದ್ಧಿಮಾನ್ ಸಾಹಾ 25 ರನ್‌ಗಳಿಸಿ ಮಯಾಂಕ್‌ಗೆ ಸಾಥ್ ನೀಡಿದ್ದಾರೆ. ಮಯಾಂಕ್ ಅಗರ್ವಾಲ್ ಅವರ ಈ ಭರ್ಜರಿ ಇನ್ನಿಂಗ್ಸ್‌ನಲ್ಲಿ 246 ಎಸೆತಗಳನ್ನು ಎದುರಿಸಿದ್ದು 14 ಬೌಂಡರಿ ಹಾಗೂ 4 ಸಿಕ್ಸರ್ ಸಿಡಿಸಿದ್ದಾರೆ.

ಮೊದಲ ವಿಕೆಟ್‌ಗೆ ಉತ್ತಮ ಜೊತೆಯಾಟ: ನ್ಯೂಜಿಲೆಂಡ್ ವಿರುದ್ಧಧ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಮಾಡಿದ ಭಾರತದ ಪರವಾಗಿ ಮೊದಲ ವಿಕೆಟ್‌ಗೆ ಆರಂಭಿಕರಿಬ್ಬರು ಕೂಡ ಉತ್ತಮ ಪ್ರದರ್ಶನ ನೀಡಿದರು. ಮಯಾಂಕ್ ಅಗರ್ವಾಲ್ ಹಾಗೂ ಶುಬ್ಮನ್ ಗಿಲ್ ಜೋಡಿ 80 ರನ್‌ಗಳ ಜೊತೆಯಾಟವಾಡಿದರು. ನಂತರ 44 ರನ್‌ಗಳಿಸಿದ್ದ ವೇಳೆ ಗಿಲ್ ರಾಸ್ ಟೇಲರ್‌ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.

ಹಠಾತ್ ಕುಸಿತ ಕಂಡ ಟೀಮ್ ಇಂಡಿಯಾ: ಇನ್ನು ಶುಬ್ಮನ್ ಗಿಲ್ ವಿಕೆಟ್ ಕಳೆದುಕೊಳ್ಳುತ್ತಿದ್ದಂತೆಯೇ ನ್ಯೂಜಿಲೆಂಡ್ ಪಂದ್ಯದ ಮೇಲೆ ಹಿಡಿತ ಸಾಧಿಸಿತು. ಅದರಲ್ಲೂ ಕಿವಿಸ್ ಸ್ಪಿನ್ನರ್ ಅಜೀಜ್ ಒಂದರ ಹಿಂದೊಂದರಂತೆ ತಮಡಕ್ಕೆ ಆಘಾತ ನೀಡಿದರು. ಚೇತೇಶ್ವರ್ ಪೂಜಾರ ಹಾಗೂ ವಿರಾಟ್ ಕೊಹ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಫೆವಿಲಿಯನ್ ಸೇರಿದರು. ಅದರಲ್ಲಿ ವಿರಾಟ್ ಕೊಹ್ಲಿ ವಿವಾದಾತ್ಮಕವಾಗಿ ವಿಕೆಟ್ ಕಳೆದುಕೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೂ ಕಾರಣವಾಗಿದೆ.

ಮಿಂಚಲು ವಿಫಲವಾದ ಶ್ರೇಯಸ್ ಐಯ್ಯರ್: ಇನ್ನು ಮೊದಲ ಪಂದ್ಯದಲ್ಲಿ ಭರ್ಜರಿ ಶತಕ ಹಾಗೂ ಅರ್ಧ ಶತಕ ಸಿಡಿಸಿದ್ದ ಶ್ರೇಯಸ್ ಐಯ್ಯರ್ ಈ ಪಂದ್ಯದಲ್ಲಿಯೂ ಮತ್ತೊಂದು ಸುಂದರ ಇನ್ನಿಂಗ್ಸ್ ಕಟ್ಟುವ ವಿಶ್ವಾಸ ಮೂಡಿಸಿದರು. ಆದರೆ ಕಿವೀಸ್ ಸ್ಪಿನ್ನರ್ ಅಜಾಜ್ ಎಸೆತದಲ್ಲಿ ಎಡವಿದ ಐಯ್ಯರ್ ವಿಕೆಟ್ ಒಪ್ಪಿಸಿ ಫೆವಿಲಿಯನ್ ಸೇರಿದ್ದಾರೆ.

ಮೊದಲ ದಿನದ ಗೌರವ ಹಂಚಿಕೊಂಡ ಇತ್ತಂಡಗಳು: ತೀವ್ರ ಪೈಪೋಟಿಯ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದೆ. ದಿನದಂತ್ಯಕ್ಕೆ ಟೀಮ್ ಇಂಡಿಯಾ 4 ವಿಕೆಟ್ ಕಳೆದುಕೊಂಡು 221 ರನ್‌ಗಳಿಸುವ ಮೂಲಕ ಎರಡನೇ ದಿನಕ್ಕೆ ಆಟವನ್ನು ಕಾಯ್ದಿರಿಸಿದೆ. ಮತ್ತೊಂದೆಡೆ ನ್ಯೂಜಿಲೆಂಡ್ ತಂಡ ಕೂಡ ಭಾರತದ ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕೆಡವುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಮೊದಲ ದಿನದ ಗೌರವವನ್ನು ಎರಡುಗಳು ಕೂಡ ಹಂಚಿಕೊಂಡಿದೆ. ಎರಡನೇ ದಿನದಾಟದಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಎಂಬುದು ಈಗ ಕುತೂಹಲ ಮೂಡಿಸಿದೆ.

Story first published: Saturday, December 4, 2021, 15:29 [IST]
Other articles published on Dec 4, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+